LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಐವರು ಮಕ್ಕಳಿಗೆ ಕ್ರಿಕೆಟ್ ಆಟಗಾರರ ಭೇಟಿಯ ಅವಕಾಶ

ಬೆಂಗಳೂರು: ಹ್ಯುಮಾನಿಟಿ ಫೌಂಡೇಷನ್‍ನ ಐದು ಮಕ್ಕಳು ಅತ್ಯಪೂರ್ವ ಅವಕಾಶವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ಐದು ಮಕ್ಕಳು ಭಾರತೀಯ ಕ್ರಿಕೆಟ್ ತಂಡದ ಆಟಗಾರರನ್ನು ಭೇಟಿ ಮಾಡುವ ಕನಸಿನ ಕ್ಷಣಗಳನ್ನು ಎದುರುಗೊಂಡಿದ್ದು ಮಾತ್ರವಲ್ಲ, ಜೊತೆಗೆ ಭಾರತೀಯ ಕ್ರಿಕೆಟ್ ಆಟಗಾರರ ಜೊತೆ ನೆಟ್‍ನಲ್ಲಿ ಕ್ರಿಕೆಟ್ ಪ್ರಾಕ್ಟೀಸ್ ಮಾಡುವ ಅತ್ಯಪೂರ್ವ ಅವಕಾಶವನ್ನು ಕೂಡ ಗಳಿಸಿಕೊಂಡಿದ್ದಾರೆ.

ಎಸ್‍ಬಿಐ ಲೈಫ್ ಇನ್ಶೂರೆನ್ಸ್ ಮತ್ತು ಬಿಸಿಸಿಐ ಸಂಸ್ಥೆಗಳು ಜೊತೆಗೂಡಿ ಮೀಟ್ ಆಂಡ್ ಗ್ರೀಟ್ ಕಾರ್ಯಕ್ರಮವನ್ನು ಆಯೋಜಿಸಿದ್ದು, ಆ ಸೌಹಾ
ರ್ದ ಭೇಟಿಯ ಕಾರ್ಯಕ್ರಮದ ಮೂಲಕ ಪರಿಕ್ರಮ ಹ್ಯುಮಾನಿಟಿ ಫೌಂಡೇಶನ್ ನ ಐದು ಆರ್ಥಿಕವಾಗಿ ಹಿಂದುಳಿದ ವರ್ಗದ ಮಕ್ಕಳು ಭಾರತೀಯ ಕ್ರಿಕೆಟ್ ಆಟಗಾರರನ್ನು ಹತ್ತಿರದಿಂದ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸಂಜು ಸ್ಯಾಮ್ಸನ್‍ರಿಂದ ವಿಕೆಟ್ ಕೀಪಿಂಗ್ ಸಲಹೆಗಳನ್ನು ಪಡೆದರು.

ಅದ್ಭುತ ಬೌಲರ್ ಆಗಿರುವ ಅರ್ಶದೀಪ್ ಸಿಂಗ್ ಅವರ ಬೌಲಿಂಗ್ ದಾಳಿಯನ್ನು ಎದುರಿಸಿದರು. ವಿಶೇಷವಾಗಿ ಪ್ರಸ್ತುತ ಭಾರತೀಯ ಟಿ20 ಕ್ರಿಕೆಟ್ ತಂಡದ ನಾಯಕರಾಗಿರುವ ಸೂರ್ಯಕುಮಾರ್ ಯಾದವ್ ಅವರ ಜೊತೆ ಬ್ಯಾಟಿಂಗ್ ಮಾಡುವ ಅಪೂರ್ವ ಅವಕಾಶ ಗಳಿಸಿಕೊಂಡರು.ಈ ಕಾರ್ಯಕ್ರದ ಭಾಗವಾಗಿ ದೀಪಿಕಾ ಎಂ, ಮೈಲಾರಿ ಎನ್, ಅನನ್ಯಾ ವಿ, ನವ ಪ್ರಣವ್ ಮತ್ತು ಪಾವ್ ಗೌಹಾವೊ ಎಲ್ ಐವರು ಮಕ್ಕಳು ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಭಾರತ ವರ್ಸಸ್ ಬಾಂಗ್ಲಾದೇಶ ಕ್ರಿಕೆಟ್ ತಂಡಗಳ ನಡುವಿನ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನು ವೀಕ್ಷಿಸುವ ಅಪೂರ್ವ ಅವಕಾಶವನ್ನು ಪಡೆದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು