LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಒಬ್ಬ ವ್ಯಕ್ತಿ ಒಂದು ಹುದ್ದೆಗೆ ಬದ್ಧ: ಕೆ.ಎನ್. ರಾಜಣ್ಣ

ತುಮಕೂರು: ಕಳೆದ ಮೇ.18, 2023 ದೆಹಲಿಯಲ್ಲಿ ಪಕ್ಷದ ವರಿಷ್ಠರು ಪ್ರೆಸ್ ನೋಟ್ ರಿಲೀಸ್ ಮಾಡಿದ್ದರು, ರಿಲೀಸ್ ಮಾಡಿರೋದನ್ನ ಅವರ ಗಮನಕ್ಕೆ ತಂದಿದ್ದೇನೆ ಎಂದು ಸಹಕಾರ ಸಚಿವ ಕಾಂಗ್ರೆಸ್ ಮುಖಂಡ ಕೆ.ಎನ್. ರಾಜಣ್ಣ ಹೇಳಿದ್ದಾರೆ.

ತುಮಕೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿರುವ ಅವರು, ಒನ್ ಮ್ಯಾನ್ ಒನ್ ಪೋಸ್ಟ್ ಒಪ್ಪುತ್ತೇನೆ. ಮಂತ್ರಿಸ್ಥಾನ ಬಿಡುತ್ತೇನೆ ಅಧ್ಯಕ್ಷಗಿರಿ ಒಪ್ತೀನಿ ಎಂದು ಹೇಳಿದ್ದಾರೆ. ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ತಿಳಿಸಿದ ಅವರು, ಶೋಷಿತರ ಸಮಾವೇಶ ರಾಜಕೀಯ ಪಕ್ಷ ಮಾಡುವುದು ಸರ್ವೆ ಸಾಮಾನ್ಯ ಎಂದಿದ್ದಾರೆ.

ನಾವು ಶೋಷಿತರ ಸಮಾವೇಶವನ್ನು ಚಿತ್ರದುರ್ಗ, ಹುಬ್ಬಳ್ಳಿ, ದಾವಣಗೆರೆ ಎಲ್ಲಾದರೂ ಒಂದು ಕಡೆ ಮಾಡಬೇಕು ಎಂದು ನಿರ್ಧರಿಸಿದ್ದೇವೆ. ಇದಕ್ಕೆ ಪಕ್ಷದ ವರಿಷ್ಠರು ಒಪ್ಪಿಗೆ ಸೂಚಿಸಿದ್ದಾರೆ. ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷರನ್ನು ಕರೆಸುತ್ತೇವೆ. ರಾಹುಲ್ ಗಾಂಧಿಯವರನ್ನು ಕರೆಸುತ್ತೇವೆ. ಸಿಎಂ, ಡಿಸಿಎಂಗೂ ಕರೆಯುತ್ತೇವೆ. ಹೈಕಮಾಂಡ್ ಒಪ್ಪಿಸಿಯೇ ಮಾಡುತ್ತೇವೆ ಎಂದಿರುವ ಅವರು, ಹಾಸನ ಜಿಲ್ಲೆ ಉಸ್ತುವಾರಿ ಬಿಡುಗಡೆ ಮಾಡಿ ಎಂದು ಮನವಿ ಮಾಡಿದ್ದೇನೆ. ನಮ್ಮ ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗುತ್ತದೆ.

ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಹೈಕಮಾಂಡ್ ಗೂ ಮನವಿ ಮಾಡಿದ್ದೇನೆ. ಬಿಜೆಪಿ ಪಾರ್ಟಿಗೆ ಯಡಿಯೂರಪ್ಪ ಬಲ, ದಳಕ್ಕೆ ದೇವೇಗೌಡ ಹಾಗೇಯೇ ಕಾಂಗ್ರೆಸ್‍ಗೆ ಸಿದ್ದರಾಮಯ್ಯ ಬಲ ಎಂದಿದ್ದಾರೆ.ದೇವರಾಜ್ ಅರಸು ಅವರು ಏಳು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದು, ಅವರ ದಾಖಲೆಯನ್ನು 2025 ಡಿಸೆಂಬರ್‍ಗೆ ಸಿದ್ದರಾಮಯ್ಯ ಸರಿಗಟ್ಟುತ್ತಾರೆ ಎಂದು ತಿಳಿಸಿದ್ದಾರೆ.
ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿಲ್ಲ. ಕ್ಯಾಬೆನೆಟ್‍ನಲ್ಲಿ ಬಿಡುಗಡೆ ಮಾಡಿ ಜನರ ಅಭಿಪ್ರಾಯ ಸಂಗ್ರಹ ಮಾಡಬೇಕು ಎಂದು ಕೊಂಡಿದ್ದೇವೆ ಎಂದರು.ಚಾಮರಾಜನಗರದಲ್ಲಿ ಕ್ಯಾಬೆನೆಟ್ ನಡೆಸಬೇಕು ಎಂದು ಕೊಂಡಿದ್ದೇವೆ. ಅಲ್ಲಿ ಅದರ ಬಗ್ಗೆ ಚರ್ಚೆ ನಡೆಯುತ್ತದೆ. ಒಳಮೀಸಲಾತಿಗೆ ನಮ್ಮ ಪಕ್ಷ ಬದ್ಧವಾಗಿದೆ. ಜಾತಿಗಣತಿ ವರದಿ ಬಗ್ಗೆ ಸಾಧಕ-ಭಾದಕ ನೋಡಬೇಕು. ಅದಕ್ಕೋಸ್ಕರ ಸ್ವಲ್ಪ ವಿಳಂಬವಾಗಿದೆ ಎಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು