LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಒಲಿಂಪಿಕ್ ಪದಕ ವಿಜೇತೆ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧುವಿಗೆ ಮದುವೆ ಫಿಕ್ಸ್!

2 ಬಾರಿಯ ಒಲಿಂಪಿಕ್ ಚಾಂಪಿಯನ್, ಮಾಜಿ ವಿಶ್ವ ಚಾಂಪಿಯನ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರಿಗೆ ಹೈದರಾಬಾದ್ ಮೂಲದ ವೆಂಕಟ ಸಾಯಿ ದತ್ತ ಎಂಬವರ ಜೊತೆ ಮದುವೆ ನಿಶ್ಚಯವಾಗಿದೆ. ಡಿಸೆಂಬರ್ 22ರಂದು ಉದಯಪುರದಲ್ಲಿ ವಿವಾಹ ನೆರವೇರಲಿದೆ.

ವೆಂಕಟ ದತ್ತ ಸಾಯಿ ಅವರು ಪಾಸಿಡೆಕ್ಸ್ ಟೆಕ್ನಾಲಜೀಸ್ ನಲ್ಲಿ ಕಾರ್ಯಕಾರಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ಪಿವಿ ಸಿಂಧು ಅವರು ಲಖನೌನಲ್ಲಿ ಸಯ್ಯದ್ ಮೋದಿ ಇಂಟರ್ ನ್ಯಾಶನಲ್ ಟೂರ್ನಿ ಯಲ್ಲಿ ಗೆದ್ದ ಬೆನ್ನಲ್ಲೇ ಈ ಸಂಗತಿಯನ್ನು ಅವರ ಕುಟುಂಬ ಬಹಿರಂಗಪಡಿಸಿದೆ.ತಿಂಗಳ ಹಿಂದೆ ನಿಶ್ಚಯವಾಗಿತ್ತು: ಈ ಬಗ್ಗೆ ಸುದ್ದಿಮೂಲದೊಂದಿಗೆ ಮಾತನಾಡಿರುವ ಪಿವಿ ಸಿಂಧು ಅವರ ತಂದೆ ಪಿವಿ ರಮಣ, ``ಎರಡೂ ಕುಟುಂಬಗಳು ಹಿಂದಿನಿಂದಲೂ ಆತ್ಮೀಯವಾಗಿದ್ದು ಮದುವೆ ಮಾತುಕತೆಗಳು ಮಾತ್ರ ತಿಂಗಳ ಹಿಂದೆ ಅಂತಿಮಗೊಂಡಿವೆ ಎಂದು ಹೇಳಲಾಗಿದೆ.

ಜನವರಿಯ ಬಳಿಕ ಸಿಂಧು ಅವರು ಬಿಝಿ ಶೆಡ್ಯುಲ್ ನಲ್ಲಿ ಇರುವ ಹಿನ್ನೆಲೆಯಲ್ಲಿ ಇದೀಗ ವಿವಾಹ ಮಹೋತ್ಸವ ನೆರವೇರಿಸಲು ಸಮಯ ಸಿಕ್ಕಿದೆ ಎಂದು ಮಾಹಿತಿ ನೀಡಿದ್ದಾರೆ.ಡಿಸೆಂಬರ್ 20ರಿಂದಲೇ ವಿವಾಹ ಸಂಬಂಧಿ ಕಾರ್ಯಕ್ರಮಗಳು ಶುರುವಾಗಲಿವೆ. 22ರಂದು ಉದಯಪುರದಲ್ಲಿ ವಿವಾಹ ನೆರವೇರಲಿದ್ದು ಬಳಿಕ 24ರಂದು ಹೈದರಾಬಾದ್ ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಮುಂದಿನ ಸೀಸನ್ ಬಹಳ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಮುಂದಿನ ಜನವರಿಯಲ್ಲೇ ಸಿಂಧು ಅವರು ತರಬೇತಿಗೆ ತೆರಳಲಿದ್ದಾರೆ.

ಪಿವಿ ಸಿಂಧು ಅವರ ಸಾಧನೆ: ಪಿವಿ ಸಿಂಧು ಅವರು ಭಾರತ ಕಂಡ ಅತ್ಯುತ್ತಮ ಶಟ್ಲರ್ ಆಗಿದ್ದಾರೆ. ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಅವರು 2019ರಲ್ಲಿ ಚಿನ್ನವೂ ಸೇರಿದಂತೆ ಒಟ್ಟು 5 ಬಾರಿ ಪದಕ ಗೆದ್ದಿದ್ದಾರೆ. ಇನ್ನು ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಒಂದು ಬಾರಿ ಬೆಳ್ಳಿ ಪದಕ ಮತ್ತು ಮತ್ತೊಂದು ಬಾರಿ ಕಂಚಿನ ಪದಕ ಗೆದ್ದು ಭಾರತ ಕೀರ್ತಿ ಪತಾಕೆ ಹಾರಿಸಿದ್ದಾರೆ.

ಭಾರತದ ಪರ ನಿರಂತರ ಒಲಿಂಪಿಕ್ಸ್ ಪದಕ ಪಡೆದ ಸಾಧನೆ ಸಹ ಸಿಂಧು ಅವರ ಹೆಸರಿನಲ್ಲಿ ಇದೆ. 2016ರ ರಿಯೋ ಒಲಿಂಪಿಕ್ಸ್ ಮತ್ತು 2020ರ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಅವರು ಪದಕ ಬಾಚಿದ್ದಾರೆ. ಇನ್ನು ವಿಶ್ವ ಶಟಲ್ ಬ್ಯಾಡ್ಮಿಂಟನ್ ರ್ಯಾಂಕಿಂಗ್ ನಲ್ಲಿ ಅವರು 2017ರಲ್ಲಿ ತಮ್ಮ ಜೀವನಶ್ರೇಷ್ಠ 2ನೇ ಶ್ರೇಯಾಂಕದವರೆಗೆ ಏರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು