LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಒಳಮೀಸಲಾತಿ ಜಾರಿಗಾಗಿ ಮುಖ್ಯಮಂತ್ರಿಗೆ ಮನವಿ

ಪೀಣ್ಯ,ದಾಸರಹಳ್ಳಿ: ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟದ ವತಿಯಿಂದ ಸುಪ್ರೀಂ ಕೋರ್ಟ್ ಆದೇಶದಂತೆ ವಿಳಂಬ ಮಾಡದೇ ಒಳ ಮೀಸಲಾತಿ ಜಾರಿಗಾಗಿ ಸರ್ಕಾರವನ್ನು ಒತ್ತಾಯಿಸಿ ಕರ್ನಾಟಕ ಬಹುಜನ ಚಳುವಳಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕನಕೇನಹಳ್ಳಿ ಕೃಷ್ಣಪ್ಪ ಹಾಗೂ ವಿಶ್ವ ಆದಿ ಜಾಂಬವ ಮಹಾಸಭಾ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಭೀಮರಾಜ್ ರವರ ನೇತೃತ್ವದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯರವರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಕರ್ನಾಟಕ ಬಹುಜನ ಚಳುವಳಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕನಕೇನಹಳ್ಳಿ ಕೃಷ್ಣಪ್ಪ, 'ಸುಪ್ರೀಮ್ ಕೋರ್ಟ್ ನ ಸ್ಪಷ್ಟ ಆದೇಶವಿದ್ದರೂ ಪ್ರಸ್ತುತ ರಾಜ್ಯ ಸರ್ಕಾರವು ಒಳಮೀಸಲಾತಿಯ ಬಗ್ಗೆ ಜಾಣ ಕುರುಡು ಪ್ರದರ್ಶಿಸುತ್ತಿದ್ದು ಶೋಷಿತ ಸಮುದಾಯವು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿಯುವಂತಾಗಿದೆ. ಆದ್ದರಿಂದ ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳ ಮೀಸಲಾತಿಯನ್ನು ಜಾರಿ ಮಾಡಬೇಕು. ಇಲ್ಲವಾದಲ್ಲಿ ಹೋರಾಟ ಉಗ್ರ ರೂಪ ಪಡೆಯಲಿದೆ', ಎಂದು ಹೇಳಿದರು.

ವಿಶ್ವ ಆದಿ ಜಾಂಬವ ಮಹಾಸಭಾ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಭೀಮರಾಜ್ ಮಾತನಾಡಿ, 'ನಮ್ಮ ಸಮುದಾಯವು ಮೀಸಲಾತಿಯ ಸೌಲಭ್ಯಗಳ ಹಂಚಿಕೆಯಲ್ಲಾದ ತಾರತಮ್ಯದಿಂದ ಮೂಲ ಹಕ್ಕುಗಳಿಂದ ವಂಚಿತರಾಗಿದ್ದಾರೆ. ಬಲಾಢ್ಯರ ಒತ್ತಡಕ್ಕೆ ಮಣಿದು ಒಳ ಮೀಸಲಾತಿ ಜಾರಿ ಮಾಡದೇ ಅನ್ಯಾಯವೆಸಗುತ್ತಿದ್ದಾರೆ. ಸದಾಶಿವ ವರದಿಯನ್ನು ಜಾರಿ ಮಾಡಿಯೇ ತೀರಬೇಕು', ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಬಹುಜನ ಚಳುವಳಿ ಮುಖಂಡರಾದ ವಿಜಯ್ ಕುಮಾರ್, ನಾಗೇಶ್, ಸೊಂಡೆಕೊಪ್ಪ ಪ್ರಕಾಶ್, ವಿಶ್ವ ಆದಿ ಜಾಂಬವ ಮಹಾಸಭಾದ ಮುಖಂಡರಾದ ಅಮರ್ ನಾರಾಯಣ್, ಎಂ.ಮುನಿರಾಜುಮೂರ್ತಿ ಎನ್. ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಮುಖಂಡರಾದ ಗೋವಿಂದರಾಜು, ಆನಂದ್, ಮಂಜೇಶ್, ದಲಿತ ಮುಖಂಡರಾದ ಲಿಂಗನಹಳ್ಳಿ ವೆಂಕಟೇಶ್, ಮಹಿಳಾ ಮುಖಂಡರಾದ ನಾಗಮಣಿ, ನಾಗರಾಜು,ದಲಿತ ಸಂಘರ್ಷ ಸಮಿತಿ ಡಾ. ಎನ್ ಮೂರ್ತಿ ಬಣ ಮುಖಂಡರು ಸೇರಿದಂತೆ ಹಲವಾರು ದಲಿತ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು