LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

 ಓವರ್ ಹೆಡ್ ಟ್ಯಾಂಕ್ ಕುಸಿತ, ಮೂವರು ವಿದ್ಯಾರ್ಥಿಗಳ ಸಾವು

ಗುವಾಹಟಿ: ಶಾಲಾ ಸಮಯದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಓವರ್ ಹೆಡ್ ಟ್ಯಾಂಕ್ ಕುಸಿದು ಬಿದ್ದ ಪರಿಣಾಮ ಮೂವರು ಖಾಸಗಿ ಶಾಲೆ ಮಕ್ಕಳು ಸಾವನ್ನಪ್ಪಿದ್ದು, ಇತರ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ಶನಿವಾರ ನಡೆದಿದೆ. ಪಾಪಮ್ ಪಾರೆ ಜಿಲ್ಲೆಯ ನಹರ್ಲಗುನ್‌ನಲ್ಲಿರುವ ಸೇಂಟ್ ಅಲ್ಫೋನ್ಸಾ ಶಾಲೆಯಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಈ ಸಂಬಂಧ ಶಾಲೆಯ ಕಟ್ಟಡದ ಮಾಲೀಕರು, ಪ್ರಾಂಶುಪಾಲರು ಮತ್ತು ನಾಲ್ವರು ವಾರ್ಡನ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೃತರೆಲ್ಲರೂ 9 ನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ. 8ನೇ ತರಗತಿ ಹಾಗೂ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ನಹರ್ಲಾಗುನ್‌ನಲ್ಲಿರುವ ಟೊಮೊ ರಿಬಾ ಆರೋಗ್ಯ ಮತ್ತು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ. ಘಟನೆಗೆ ಕಾರಣರಾದ ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿ, ಮತ್ತಿತರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೋಷಕರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಅವರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿಲಾಗಿದೆ. ಈ ದುರಂತದ ಬಗ್ಗೆ ಅಧಿಕಾರಿಗಳು ಸಂಪೂರ್ಣ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುತ್ತಿರುವುದರಿಂದ ಸಾರ್ವಜನಿಕರು ಶಾಂತಿ ಕಾಪಾಡಿಕೊಳ್ಳಬೇಕೆಂದು ನಹರ್ಲಾಗುನ್ ಪೊಲೀಸ್ ಅಧೀಕ್ಷಕ ಮಿಹಿನ್ ಗ್ಯಾಂಬೊ ಮನವಿ ಮಾಡಿದ್ದಾರೆ. ಮತೃರ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಸಂತ್ರಸ್ತರ ಕುಟುಂಬಗಳಿಗೆ ನ್ಯಾಯವನ್ನು ಒದಗಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಎರಡು ದೂರುಗಳ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ರಿಷಿ ಲಾಂಗ್ಡೊ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು