LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಓ ಮನಸೇ ನಿರ್ದೇಶಕರ ಹೊಸ ಚಿತ್ರ ಪ್ರೊಡಕ್ಷನ್ ನಂ.೧

ಈ ಹಿಂದೆ ನವರಂಗಿ, ಹಳ್ಳಿ ಪಂಚಾಯ್ತಿ, ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್ ಅಭಿನಯದ ಓ ಮನಸೇ ಸೇರಿದಂತೆ ವಿಭಿನ್ನ ಜಾನರ್ ಚಿತ್ರಗಳನ್ನು ನಿರ್ದೇಶಿಸಿದ್ದ ಡಿ.ಜಿ. ಉಮೇಶ್ ಗೌಡ ಅವರೀಗ ಮತ್ತೊಂದು ಚಿತ್ರಕ್ಕೆ ಕೈ ಹಾಕಿದ್ದಾರೆ. ಇದು ಅವರ ನಿರ್ದೇಶನದ ನಾಲ್ಕನೇ ಚಿತ್ರವಾಗಿದ್ದು, ಲವ್, ಆಕ್ಷನ್ ಜೊತೆಗೆ ಸೆಂಟಿಮೆಂಟ್ ಡ್ರಾಮಾ ಕಥಾಹಂದರ ಒಳಗೊಂಡಿದೆ.

ಆಗಸ್ಟ್ ೯ ರಿಂದ ಬೆಳಗಾವಿಯಲ್ಲಿ ಮುಹೂರ್ತ ನಡೆಸಿ, ಬೆಳಗಾವಿ, ಬೆಂಗಳೂರು ಸುತ್ತಮುತ್ತ ೫೦ ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ ೫ ಹಾಡುಗಳಿದ್ದು ಕೇರಳ, ಮಂಗಳೂರು, ಸಕಲೇಶಪುರ, ಚಿಕ್ಕಮಗಳೂರಿನಲ್ಲಿ ಚಿತ್ರೀಕರಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ಈ ಚಿತ್ರವನ್ನು ಶ್ರೀ ಸ್ನೇಹ ಕಂಬೈನ್ಸ ಬ್ಯಾನರ್ ಅಡಿ ಪ್ರೊಡಕ್ಷನ್ ನಂಬರ್ ೧ ಶೀರ್ಷಿಕೆಯಡಿ ಶೇಖರ್ ನಾ ಕಾಲೇರಿ ಅವರು ನಿರ್ಮಿಸುತ್ತಿದ್ದಾರೆ.

ಚಿತ್ರದ ನಾಯಕನಾಗಿ ಸಂತೋಷ್, ನಾಯಕಿಯಾಗಿ ಅನುಷಾ ರೈ, ಉಳಿದ ಪಾತ್ರಗಳಲ್ಲಿ ಶೋಭರಾಜ್, ಸುಚೇಂದ್ರ ಪ್ರಸಾದ್, ಸಾಧು ಕೋಕಿಲ, ಅಭಿಜಿತ್, ಶಂಕರ್ ಅಶ್ವಥ್, ದಿವ್ಯಾ ಗೌಡ ಮುಂತಾದವರು ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಡಿ.ಜಿ.ಉಮೇಶ್ ಗೌಡ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಸಹ ನಿರ್ಮಾಪಕರಾಗಿ ಉದಯ್ ಪದ್ಮಣ್ಣನವರ್, ಸಂತೋಷ್ ಬೆಳಗಾವಿ, ರಮೇಶ್ ಬಸರಿಮರದ, ಬಸವನಾಯ್ಕ್ ಕಾಲೇರಿ ಕಾರ್ಯನಿರ್ವಹಿಸಿದ್ದಾರೆ. ಬಾಬುರಾಜ್ ಅವರ ಛಾಯಾಗ್ರಹಣ, ಮಳವಳ್ಳಿ ಸಾಯಿಕೃಷ್ಣ ಅವರ ಸಂಭಾಷಣೆ, ಬಾಬು ಅವರ ಸಹ ನಿರ್ದೇಶನ, ಸೂರಜ್ ಅವರ ಸಂಗೀತ, ಡಾ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ ಹಾಗೂ ಶ್ರೀನಿವಾಸ್ ಪಿ. ಬಾಬು ಅವರ ಸಂಕಲನವಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು