LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಕಂಟನಕುಂಟೆ ಕೃಷ್ಣಮೂರ್ತಿಗೆ ನಾಟಕ ಅಕಾಡೆಮಿ ವಾರ್ಷಿಕ ಗೌರವ

ದೊಡ್ಡಬಳ್ಳಾಪುರ: ಕರ್ನಾಟಕ ನಾಟಕ ಅಕಾಡೆಮಿಯ 2022-23ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ತಾಲ್ಲೂಕಿನ ಕಂಟನಕುಂಟೆ ಗ್ರಾಮದ ಕೆ.ಎಂ.ಕೃಷ್ಣಮೂರ್ತಿ ಆಯ್ಕೆಯಾಗಿದ್ದಾರೆ.

ಪೌರಾಣಿಕ, ಐತಿಹಾಸಿಕ ಹಾಗೂ ಸಾಮಾಜಿಕ ನಾಟಕಗಳಲ್ಲಿ ಅವರ ಅಭಿನಯ ಹಾಗೂ ಕಲಾ ಸೇವೆ ಗುರುತಿಸಿ ಪ್ರಶಸ್ತಿಯನ್ನು ನೀಡಲಾಗಿದೆ. ತಾಲ್ಲೂಕು, ಜಿಲ್ಲಾ ಮಟ್ಟದಲ್ಲೂ ಕಲಾ ಸೇವೆಯನ್ನು ಗುರುತಿಸಿ ಅಭಿ- ನಂದಿಸಲಾಗಿದೆ. ತಾಲ್ಲೂಕು ಹಾಗೂ ಜಿಲ್ಲಾ ಕಲಾವಿದರ ಸಂಘದಲ್ಲೂ ಗೌರವ ಅಧ್ಯಕ್ಷರಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಅಕಾಡೆಮಿಯ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಸಂತಸ ಹಂಚಿಕೊಂಡಿರುವ ಕೃಷ್ಣಮೂರ್ತಿ ಅವರು '9ನೇ ತರಗತಿಯಲ್ಲಿದ್ದಾಗಲೆ 'ಧಾನಶೂರ ಕರ್ಣ' ಪೌರಾಣಿಕ ನಾಟಕದಲ್ಲಿ ಸಖಿಯ ಪಾತ್ರದ ಮೂಲಕ ರಂಗ ಪಯಣ ಪಯಣ ಆರಂಭವಾಯಿತು. ಇಲ್ಲಿಯವರೆಗೆ ಸುಮಾರು 300ಕ್ಕೂ ಹೆಚ್ಚಿನ ನಾಟಕಗಳಲ್ಲಿ ಕರ್ಣ, ಅರ್ಜುನ, ಅಂಜನೇಯನ ಪಾತ್ರಗಳಿಗೆ ಬಣ್ಣ ಹಚ್ಚಿದ್ದೇನೆ. ಬೆಂಗಳೂರಿನ ರವಿಂದ್ರ ಕಲಾ ಕ್ಷೇತ್ರ ಸೇರಿದಂತೆ ರಾಜ್ಯದ ದಕ್ಷಿಣ ಭಾಗದ ಹಲವಾರು ಜಿಲ್ಲೆಗಳಲ್ಲಿನ ಪೌರಾಣಿಕ ನಾಟಕಗಳಲ್ಲಿ ಅಭಿನಯಿಸಿದ್ದೇನೆ' ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು