LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಕಂಡಕ್ಟರ್ ವಿರುದ್ಧ ಪೋಕ್ಸೊ ಕೇಸ್ ವಾಪಸ್ ಕರ್ತವ್ಯ ಲೋಪದಡಿ ಸಿಪಿಐ ವರ್ಗಾವಣೆ

ಬೆಳಗಾವಿ: ಕಳೆದೆರೆಡು ದಿನಗಳ ಹಿಂದೆ ಬೆಳಗಾವಿಯ ಸಣ್ಣ ಬಾಳೆಕುಂದ್ರಿ ಗ್ರಾಮದ ಬಳಿ ಸಾರಿಗೆ ಬಸ್ ನಿರ್ವಾಹಕ ಮಹಾದೇವಪ್ಪ ಅವರ ಮೇಲೆ ನಡೆದ ಹಲ್ಲೆ ಪ್ರಕರಣ ಸಂಬಂಧಪಟ್ಟಂತೆ ಅವರ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣವನ್ನು ಹಿಂಪಡೆಯಲಾಗಿದೆ.ಈ ವಿಷಯವನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತಾ ಯಡಾ ಮಾರ್ಟಿನ್ ಸ್ಪಷ್ಟಪಡಿಸಿದ್ದಾರೆ.

ನಿರ್ವಾಹಕ ಮಹಾದೇವಪ್ಪ ವಿರುದ್ಧ ನೀಡಲಾಗಿದ್ದ ದೂರನ್ನು ಸಂತ್ರಸ್ತೆಯ ತಾಯಿ ಹಿಂಪಡೆದಿದ್ದಾರೆ ಎಂದು ಹೇಳಿರುವ ಅವರು, ಕರ್ತವ್ಯ ಲೋಪದಡಿ ಮಾರಿಹಾಳ ಪೊಲೀಸ್ ಇನ್ಸ್‍ಪೆಕ್ಟರ್ ಗುರುರಾಜಕಲ್ಯಾಣ ಶೆಟ್ಟಿ ಅವರನ್ನು ಸಿಸಿಆರ್‍ಬಿಗೆ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಸಿಸಿಆರ್‍ಬಿ ಇನ್ಸ್‍ಪೆಕ್ಟರ್ ಮಂಜುನಾಥ್ ನಾಯ್ಕ್ ಅವರನ್ನು ನೇಮಿಸಿರುವುದಾಗಿ ತಿಳಿಸಿದ್ದಾರೆ.ಇದೇ ಸಂದರ್ಭದಲ್ಲಿ ಸಂತ್ರಸ್ತೆಯ ತಾಯಿ ನಿರ್ವಾಹಕರ ಮೇಲಿನ ಪೋಕ್ಸೋ ಪ್ರಕರಣ ಹಿಂಪಡೆದಿರುವ ಬಗ್ಗೆ ನೀಡಿದ ಹೇಳಿಕೆಯ ವಿಡೀಯೋ ತುಣಕನ್ನು ಪ್ರದರ್ಶಿಸಲಾಗಿದೆ.

ತನ್ನ ಮಗ ಹಾಗೂ ಮಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಬಸ್‍ನಲ್ಲಿ ಟಿಕೆಟ್‍ಗಾಗಿ ಜಗಳ ನಡೆದಿದ್ದು, ಯಾವುದೇ ರೀತಿಯ ಭಾಷಾ ವಿಚಾರಕ್ಕೆ ಜಗಳ ನಡೆದಿಲ್ಲ. ನಾವು ಸಹ ಕನ್ನಡಿಗರಿಗೆ ವಿನಾ ಕಾರಣ ಭಾಷಾ ಹೆಸರಿನಲ್ಲಿ ಅಪಪ್ರಚಾರ ನಡೆದಿರುವುದಾಗಿ ಹೇಳಿರುವ ಆಕೆ ಕೇಸ್ ಅನ್ನು ಹಿಂಪಡೆದಿರುವ ಬಗ್ಗೆ ಅವರು ಸ್ಪಷ್ಟಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು