LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಕಂದಾಯ ಇಲಾಖೆ ಸಿಬ್ಬಂದಿ ಒದಗಿಸಿದರೆ 4 ತಿಂಗಳಲ್ಲಿ ಮರು ಭೂಮಾಪನ ಯೋಜನೆ ಪೂರ್ಣ: ಡಿ.ಕೆ. ಸುರೇಶ್

ಕನಕಪುರ: ಕಂದಾಯ ಇಲಾಖೆಯಿಂದ 30-40 ಸಿಬ್ಬಂದಿ ಒದಗಿಸಿದರೆ ನಾನೇ ಮುಂದೆ ನಿಂತು ಮುಂದಿನ ನಾಲ್ಕು ತಿಂಗಳಲ್ಲಿ ತಾಲೂಕಿನಲ್ಲಿ ಮರು ಭೂಮಾಪನ ಯೋಜನೆ ಪೂರ್ಣಗೊಳಿಸುತ್ತೇನೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಕಂದಾಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿದರು.

ಕನಕಪುರದ ದೊಡ್ಡಆಲಹಳ್ಳಿಯಲ್ಲಿ ಭಾನುವಾರ ನಡೆದ ಮರು ಭೂಮಾಪನ ಯೋಜನೆಯಡಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಸೃಜಿಸಲಾದ ಕರಡು ಆರ್ ಟಿಸಿ ದಾಖಲೆಗಳ ವಿತರಣೆ ಕಾರ್ಯಕ್ರಮದಲ್ಲಿ ಸುರೇಶ್ ಅವರು ಭಾಗವಹಿಸಿ ಮಾತನಾಡಿದರು.

ಕಂದಾಯ ಇಲಾಖೆಯಲ್ಲಿ ಇದೊಂದು ಐತಿಹಾಸಿಕ ದಿನ. 100 ವರ್ಷಕ್ಕೂ ಹೆಚ್ಚು ಕಾಲ ಅಳವಡಿಸಿಕೊಂಡಿದ್ದ ಭೂಮಾಪನ ಪದ್ಧತಿ ಹೊರತಾಗಿ ಈಗ ಹೊಸ ಮಾದರಿಯ ಮಾಪನ ವ್ಯವಸ್ಥೆ ಅಳವಡಿಸಿಕೊಳ್ಳಲಾಗಿದೆ. ಆಮೂಲಕ ದೊಡ್ಡಆಲಹಳ್ಳಿಯಲ್ಲಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯಕ್ಕೆ ಹಾಗೂ ದೇಶಕ್ಕೆ ಮಾದರಿಯಾಗುವ ಕಾರ್ಯಕ್ರಮ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ಸರ್ವೇ ಇಲಾಖೆ, ಜಿಲ್ಲಾಡಳಿತಕ್ಕೆ ಧನ್ಯವಾದ ತಿಳಿಸುತ್ತೇನೆ. ಸರ್ವೇ ಕಚೇರಿ ಎಂದರೆ ರೈತರ ಪಾಲಿನ ಸಿಂಹಸ್ವಪ್ನ. ಇದಕ್ಕೆ ಪರಿಹಾರ ನೀಡಲು ಕರ್ನಾಟಕ ಸರ್ಕಾರ ಈ ಪ್ರಾಯೋಗಿಕ ಪ್ರಯತ್ನ ಮಾಡಿದೆ ಎಂದು ಹೇಳಿದರು.

ಮೊದಲು ಯಾವ ಜಿಲ್ಲೆಯಲ್ಲಿ ಮಾಡಬೇಕು ಎಂದು ಚಿಂತನೆ ನಡೆಸುವಾಗ ನಾನು ನಮ್ಮ ರಾಮನಗರ ಜಿಲ್ಲೆಯ ನಮ್ಮ ಕ್ಷೇತ್ರದಲ್ಲೇ ಮಾಡಿ ಎಂದು ಕಂದಾಯ ಸಚಿವರಿಗೆ ಮನವಿ ಮಾಡಿದೆ. ಉಯ್ಯಂಬಳ್ಳಿ

ಹೋಬಳಿಯಲ್ಲಿ 35 ಕಂದಾಯ ಗ್ರಾಮಗಳಿದ್ದು, 33 ಗ್ರಾಮಗಳಲ್ಲಿ 23,469 ರೈತರ ಭೂಮಿಯ ಸರ್ವೇ ಮಾಡಲಾಗಿದೆ. ಕೆಲವರು ಸರಪಳಿ ಹಾಕಿ ಅಳತೆ ಮಾಡಿದರೆ ಮಾತ್ರ ಸರ್ವೇ ಎಂದು ಭಾವಿಸಿದ್ದಾರೆ. ಹೀಗಾಗಿ ಅನೇಕರು ನಮ್ಮ ಜಮೀನು ಸರ್ವೇ ಆಗಿದೆ ಎಂದರೆ ನಂಬುತ್ತಿಲ್ಲ ಎಂದು ತಿಳಿಸಿದರು.

ರೋವರ್ ತಂತ್ರಜ್ಞಾನದ ಮೂಲಕ ಬಹಳ ಸರಳೀಕರಣವಾಗಿ, ಬಹಳ ನಿಖರವಾಗಿ ಭೂ ಮಾಪನ ಮಾಡಲಾಗಿದೆ. ಈ ತಂತ್ರಜ್ಞಾನ ಮೂಲಕ ಅಳತೆಯಲ್ಲಿ ವ್ಯತ್ಯಾಸ ಕಂಡುಬರುವುದು ಕೇವಲ 1 ಸೆ.ಮೀ ಮಾತ್ರ. ಈ ರೀತಿ 97 ಸಾವಿರ ಎಕರೆ ಜಮೀನು ಸರ್ವೇ ಮಾಡಲಾಗಿದೆ ಎಂದರು.

ಪಹಣಿಯಲ್ಲಿ ನಕ್ಷೆ, ನಕಾಶೆ, ಕ್ಯೂಆರ್ ಕೋಡ್ ಇರುತ್ತದೆ. ಇದನ್ನು ಸ್ಕ್ಯಾನ್ ಮಾಡಿದರೆ ಭೂಮಿಯ ಅಳತೆ ದಾಖಲೆ ಮಾಹಿತಿ ಲಭ್ಯವಾಗುತ್ತದೆ. ರೈತರಿಗೆ ಜಮೀನಿನಲ್ಲಿ ವ್ಯತ್ಯಾಸ ಕಂಡು ಬಂದರೆ ಅದನ್ನು ಸರಿಪಡಿಸಿಕೊಳ್ಳಲು ಅವಕಾಶವಿದೆ. ಒಂದೇ ಪಹಣಿಯಲ್ಲಿ ಹಲವಾರು ಹೆಸರುಗಳಿದ್ದು, ಅದನ್ನು ಸರಿಪಡಿಸಲು ಅವಕಾಶವಿದೆ. ಆಕ್ಷೇಪಗಳಿದ್ದರೆ ಅದನ್ನು ಉಚಿತವಾಗಿ ಸರಿಪಡಿಸಲು 1 ತಿಂಗಳು ಕಾಲಾವಕಾಶವಿದೆ. ಒಂದು ತಿಂಗಳ ನಂತರ ಇದಕ್ಕೆ ಶುಲ್ಕ ಪಾವತಿಸಬೇಕು ಎಂದು ತಿಳಿಸಿದರು. ಈ ಹೋಬಳಿಯಲ್ಲಿ 5 ಸಾವಿರ ಸರ್ವೇ ನಂಬರ್ ಗಳು ಇದ್ದವು. ಈ ಕಾರ್ಯಕ್ರಮದ ನಂತರ ಸರ್ವೇ ನಂಬರ್ ಗಳ ಸಂಖ್ಯೆ 23 ಸಾವಿರಕ್ಕೆ ಏರಿಕೆಯಾಗಿವೆ.

ಈ ಸೌಲಭ್ಯವನ್ನು ಇಡೀ ತಾಲೂಕು ಹಾಗೂ ಜಿಲ್ಲೆಗೆ ವಿಸ್ತರಿಸಬೇಕು ಎಂದು ಉಪಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ. ಕಂದಾಯ ಇಲಾಖೆ ಸಚಿವರಾದ ಕೃಷ್ಣ ಭೈರೇಗೌಡ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಬಂದಿಲ್ಲ. ಇಂದು ಬೆಳಗ್ಗೆ ಅವರಿಗೆ ಕರೆ ಮಾಡಿ ಮಾತನಾಡುವಾಗ ನಮ್ಮ ಬೇಡಿಕೆ ಇನ್ನು ಇವೆ ಎಂದು ಕೇಳಿದೆ. ಅವರು ನಿಮ್ಮ ಬೇಡಿಕೆ ಏನೇ ಇದ್ದರೂ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದರು ಎಂದರು.

ಇನ್ನು ಈ ಆರ್ ಟಿಸಿ ಒಳಗೆ ಜಮೀನು ಮಾಲೀಕರ ಹೆಸರಿನ ಜತೆಗೆ ಅವರ ಫೋಟೋ ಹಾಗೂ ಆಧಾರ್ ಕಾರ್ಡ್ ಸಂಖ್ಯೆಯನ್ನು ಸೇರಿಸುವ ಕೆಲಸ ಮಾಡಬೇಕು. ಆಗ ಒಂದೇ ಹೆಸರಿನ ಹಲವು ವ್ಯಕ್ತಿಗಳಿದ್ದರೂ ಗೊಂದಲ ಆಗುವುದಿಲ್ಲ ಎಂದು ಸಲಹೆ ನೀಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು