LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕಣಂಜಾರು ಟೀಸರ್, 12 ಲಕ್ಷ ವೀಕ್ಷಣೆ !

ಕಣಂಜಾರು ಕಾರ್ಕಳದ ಹತ್ತಿರ ಇರುವ ಒಂದು ಊರು. ಅಲ್ಲಿ ಒಂದು ಪಟ್ಟದ ಮನೆಯಿದೆ. ಕಾಡಿನ ಮಧ್ಯೆ ಇರುವ ದೈವದ ಮನೆ ಅದು. ಅದಕ್ಕೆ ಯಾರೂ ಬೀಗ ಹಾಕಿಲ್ಲ, ಆ ಮನೆಯ ಒಳಗೆ ಹೋಗುವಾಗ ಚಪ್ಪಲಿ ಬಿಟ್ಟು ಹೋಗುತ್ತಾರೆ. ಅಲ್ಲಿ ಚಿತ್ರೀಕರಣ ನಡೆಸಲು ಯಾರಿಗೂ ಅನುಮತಿ ಕೊಡಲ್ಲ, ಆದರೆ ನಮಗೆ ದೇವರೇ ಹೂ ಕೊಟ್ಟಾಗ ಅನುಮತಿ ನೀಡಿದರು.

ಇದು ಕರಾವಳಿ ತೀರದ ಕಥೆಯಾದರೂ ನಾವಿಲ್ಲಿ ಕಂಬಳ, ಕೋಲದ ಕಥೆ ಹೇಳ್ತಿಲ್ಲ ಎಂದು ನಿರ್ದೇಶಕ ಆರ್.ಬಾಲಚಂದ್ರ ಅವರು ತಾವೇ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ಕಣಂಜಾರು ಚಿತ್ರದ ಟೀಸರ್ ಸಕ್ಸಸ್ ಪ್ರೆಸ್‍ಮೀಟ್‍ನಲ್ಲಿ ಮಾತನಾಡುತ್ತ ಹೇಳಿದರು.ಆರ್.ಪಿ. ಫಿಲಂಸ್ ಬ್ಯಾನರ್ ಅಡಿಯಲ್ಲಿ ಆರ್.ಬಾಲಚಂದ್ರ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುವ ಜತೆಗೆ ಬಂಡವಾಳ ಹಾಕಿ ನಿರ್ಮಿಸಿರುವ ಸಸ್ಪೆನ್ಸ್, ಥ್ರಿಲ್ಲರ್ ಕಥೆ ಹೊಂದಿರುವ ಚಿತ್ರ ಕಣಂಜಾರು. ಈ ಚಿತ್ರದ ಟೀಸರ್ 4 ದಿನಗಳ ಹಿಂದಷ್ಟೇ ಬಿಡುಗಡೆಯಾಗಿದ್ದು, ಈಗಾಗಲೇ ಹನ್ನೆರಡು ಲಕ್ಷಕ್ಕೂ ಹೆಚ್ಚು ವೀಕ್ಷಣೆಯಾಗಿದೆ.

ಈ ಹಿಂದೆ ಬಿಡುಗಡೆಯಾಗಿದ್ದ ಟೈಟಲ್ ಮೋಷನ್ ಪೋಸ್ಟರ್ ಕೂಡ ಮೂರುವರೆ ಲಕ್ಷ ವೀಕ್ಷಣೆಯಾಗುವ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಆರ್. ಬಾಲಚಂದ್ರ ಟೀಸರ್‍ಗೆ ಎಲ್ಲಾ ಕಡೆಯಿಂದ ಪಾಸಿಟಿವ್ ರೆಸ್ಪಾನ್ಸ್ ಬಂತು. ನಮಗೆ ಮೊದಲು ಬೇಕಾಗಿರುವುದೇ ಸಕ್ಸಸ್. ಕಣಂಜಾರು ಎಂಬ ಸ್ಥಳ ಸಿಗಲಿಕ್ಕೆ ನಾನು ಸಾವಿರಾರು ಕಿಲೋಮೀಟರ್ ಜರ್ನಿ ಮಾಡಿದೆ.

ಕೊನೆಗೆ ಕಾರ್ಕಳ ಹತ್ತಿರ ಈ ಲೊಕೇಶನ್ ಸಿಕ್ತು. ಇದೊಂದು ಯೂನಿಕ್ ಕಾನ್ಸೆಪ್ಟ್, ನನ್ನ ಜೊತೆ ಕಲಾವಿದರು ಟೆಕ್ನೀಶಿಯನ್ಸ್ ಸಹಕಾರ ನೀಡಿದ್ದರಿಂದಲೇ ಇಂಥ ಚಿತ್ರ ಮಾಡಲು ಸಾಧ್ಯವಾಯಿತು. ಕಣಂಜಾರು ಎಂಬ ಊರಲ್ಲಿ ನಡೆಯುವ ಕಥೆ, ಕಾರ್ಕಳ, ಉಡುಪಿ, ಹೊನ್ನಾವರ ಮತ್ತಿತರ ಲೊಕೇಶನ್‍ಗಳಲ್ಲಿ 60 ದಿನಗಳ ಕಾಲ ಚಿತ್ರೀಕರಿಸಿದ್ದೇವೆ.

ಬೆಂಗಳೂರು, ಮಂಗಳೂರು ಭಾಗದ ಭಾಷೆಯನ್ನೇ ಚಿತ್ರದಲ್ಲಿ ಬಳಸಿದ್ದೇವೆ, ಈ ಹಿಂದೆ ಮಹಾನುಭಾವರು ಎಂಬ ಚಿತ್ರ ಮಾಡಿದ್ದೆ, ನಾನೊಬ್ಬ ಆಕ್ಟರ್ ಆಗಬೇಕೆಂಬ ಕನಸಿಟ್ಟುಕೊಂಡೇ ಬಂದವನು. ಫೈನಲ್ಲಾಗಿ ನಾನೇ ನೆರ್ದೇಶನ ಮಾಡಬೇಕಾಯ್ತು. ಚಿತ್ರದಲ್ಲಿ ಮೂರು ಹಾಡುಗಳಿದ್ದು ಹರ್ಷವರ್ಧನ್‍ರಾಜ್ ಮ್ಯೂಸಿಕ್ ಕಂಫೊಜ್ ಮಾಡಿದ್ದಾರೆ. ಮುಂದಿನ ತಿಂಗಳು ಚಿತ್ರವನ್ನು ರಿಲೀಸ್ ಮಾಡುವ ಯೋಜನೆಯಿದೆ, ಥೇಟರ್ ಹಿನ್ನೆಲೆಯಿಂದ ಬಂದವರು, ಬಹುತೇಕ ಸ್ಥಳೀಯ ಕಲಾವಿದರು ಈ ಚಿತ್ರದಲ್ಲಿ ಆಕ್ಟ್ ಮಾಡಿದ್ದಾರೆ. ಉಳಿದ ಮಾಹಿತಿಯನ್ನು ಹಂತ ಹಂತವಾಗಿ ಹಂಚಿಕೊಳ್ಳುವುದಾಗಿ ಆರ್. ಬಾಲಚಂದ್ರ ಅವರು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು