LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕನ್ನಡದಲ್ಲೂ ಬರಲಿದೆ `ಜೋಜು ಜಾರ್ಜ್' ಅಭಿನಯದ ಮಲಯಾಳಂ ಚಿತ್ರ `ಪಣಿ'

ಕಳೆದ ತಿಂಗಳು ಕೇರಳದಲ್ಲಿ ಬಿಡುಗಡೆಯಾದ ಜೋಜು ಜಾರ್ಜ್ ಅಭಿನಯದ ಮತ್ತು ನಿರ್ದೇಶನದ `ಪಣಿ' ಚಿತ್ರವು ಕನ್ನಡಕ್ಕೆ ಡಬ್ ಆಗಿ ನ. 29ರಂದು ರಾಜ್ಯದ್ಯಂತ ಬಿಡುಗಡೆಯಾಗುತ್ತಿದೆ. ಖ್ಯಾತ ಹೊಂಬಾಳೆ ಫಿಲಂಸ್ ಕರ್ನಾಟಕದಲ್ಲಿ ಈ ಚಿತ್ರವನ್ನು ಕನ್ನಡದಲ್ಲಿ ಬಿಡುಗಡೆ ಮಾಡುತ್ತಿದ್ದಾರೆ. ಈ ವಿಷಯವನ್ನು ಹಂಚಿಕೊಳ್ಳುವ ನಿಟ್ಟಿನಲ್ಲಿ ಚಿತ್ರತಂಡದವರು ಪತ್ರಿಕಾಗೋಷ್ಠಿ ಆಯೋಜಿಸಿ ಹಲವು ವಿಷಯ ಹಂಚಿಕೊಂಡರು.

ಕಳೆದ 30 ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಹಲವು ಚಿತ್ರಗಳಲ್ಲಿ ನಟಿಸಿದ್ದೇನೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರ ಎಂದು ಮಾತನಾಡಿದ ಜೋಜು ಜಾರ್ಜ್, ಈ ಚಿತ್ರವು ಕಳೆದ ತಿಂಗಳು ಮಲಯಾಳಂನಲ್ಲಿ ಬಿಡುಗಡೆಯಾಗಿದೆ. ಇದೀಗ ಕನ್ನಡಕ್ಕೆ ಡಬ್ ಆಗಿ ನ. 29 ರಂದು ಕರ್ನಾಟಕದಲ್ಲಿ ಬಿಡುಗಡೆಯಾಗುತ್ತಿದೆ. ಹೊಂಬಾಳೆ ಫಿಲಂಸ್ ಸಂಸ್ಥೆಯು ಕನ್ನಡ ಅವತರಣಿಕೆಯನ್ನು ಬಿಡುಗಡೆ ಮಾಡುತ್ತಿದೆ. ಇದೊಂದು ಮಾಸ್ ಮತ್ತು ಕಮರ್ಷಿಯಲ್ ಚಿತ್ರ. ಕೇರಳದಲ್ಲಿ ಬಿಡುಗಡೆಯಾಗಿ ಯಶಸ್ವಿಯಗಿದೆ.

ಸೇಡಿನ ಕಥೆಯಾದ್ದರಿಂದ, ಎಲ್ಲಾ ಕಡೆ ಸಲ್ಲುತ್ತದೆ ಎಂಬ ನಂಬಿಕೆ ಇದೆ. ಕನ್ನಡದಲ್ಲೂ ಪ್ರೇಕ್ಷಕರು ಚೆನ್ನಾಗಿ ಸ್ವೀಕರಿಸುತ್ತಾರೆ ಎಂಬ ನಂಬಿಕೆ ಇದೆ. ಇದೊಂದು ಕಾಲ್ಪನಿಕ ಕಥೆಯಾಗಿದ್ದರು ಎರಡು ವರ್ಷಗಳ ಕಾಲ ಚರ್ಚೆ ನಡೆಸಿ ಚಿತ್ರಕಥೆ ಮಾಡಿದ್ದೇವೆ. ಈ ಚಿತ್ರದಲ್ಲಿ ಸಾಕಷ್ಟು ಹೊಸಬರಿದ್ದಾರೆ. ಇದೊಂದು ಸರಳ ಕಥೆಯಾಗಿದ್ದು, ಅದನ್ನು ನೈಜವಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಮಲಯಾಳಂನಲ್ಲಿ "ಪಣಿ" ಎಂದರೆ ಕೆಲಸ ಎಂದರ್ಥ.

ಈ ಹಿಂದೆ ನನ್ನ ಹಲವು ಚಿತ್ರಗಳು ಕರ್ನಾಟಕದಲ್ಲಿ ಬಿಡುಗಡೆಯಾಗಿ, ಯಶಸ್ವಿಯಾಗಿದೆ. ಈ ಚಿತ್ರ ಕೂಡ ಯಶಸ್ವಿಯಾಗಲಿದೆ ಎಂಬ ನಂಬಿಕೆ ಇದೆ. ಈ ಹಿಂದೆ `ಹುಡುಗ್ರು', `ಕಿಚ್ಚು' ಮುಂತಾದ ಕನ್ನಡ ಚಿತ್ರಗಳಲ್ಲಿ ನಟಿಸಿದ್ದೆ. ಈಗ ಬಹಳ ದಿನಗಳ ನಂತರ ಬೆಂಗಳೂರಿಗೆ ಬಂದಿದ್ದೇನೆ. ನಾನು ಜೋಜು ಜಾರ್ಜ್ ಅವರ ಅಭಿಮಾನಿ ಎಂದರು ನಟಿ ಅಭಿನಯ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು