LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕನ್ನಡಿಗನ ಮೇಲೆ ಲಕ್ಷ ರೂ. ಸಾಲದ ಹೊರೆ!

ಬೆಂಗಳೂರು: ಕರ್ನಾಟಕವನ್ನು ಸಂಪೂರ್ಣ ದಿವಾಳಿ ಮಾಡಬೇಕೆಂಬುದೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಒನ್ ಲೈನ್ ಅಜೆಂಡಾ ಆಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ.

ಈ ಸಂಬಂಧ ಟ್ವಿಟ್ ಮಾಡಿರುವ ಅವರು, ಸಾಲ ಮಾಡುವುದನ್ನೇ ಫುಲ್ ಟೈಂ ಕಾಯಕವನ್ನಾಗಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಪ್ರಸ್ತುತ ಕರ್ನಾಟಕದ ಒಟ್ಟು ಸಾಲವನ್ನು 6 ಲಕ್ಷ 65 ಸಾವಿರ ಕೋಟಿಗೆ ಮುಟ್ಟಿಸಿದ್ದಾರೆ ಎಂದು ದೂರಿದ್ದಾರೆ.

ಪ್ರತಿ ಕನ್ನಡಿಗನ ಮೇಲೆ ಬರೋಬ್ಬರಿ 1 ಲಕ್ಷ ರೂಪಾಯಿ ಸಾಲದ ಹೊರೆಯನ್ನು ಭ್ರಷ್ಟ ಕಾಂಗ್ರೆಸ್ ಸರ್ಕಾರ ಹೊರೆಸಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ನಾವೀನ್ಯತೆಯ ಸೂಚ್ಯಂಕದಲ್ಲಿ, ಬಂಡವಾಳ ಹೂಡಿಕೆಯಲ್ಲಿ ನಂಬರ್ 1 ಆಗಿತ್ತು, ಆದರೆ ಈಗಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಅತಿ ಹೆಚ್ಚು ಸಾಲ ಮಾಡುವ ರಾಜ್ಯಗಳಲ್ಲಿ ನಂಬರ್ 1 ಆಗುತ್ತಿರುವುದು ಅತ್ಯಂತ ನಾಚಿಕೆಗೇಡು ಎಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST