LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ

ಬೆಂಗಳೂರು: ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೆಳಗ್ಗೆ 11 ಗಂಟೆಯಿಂದ ಸಂಜೆ 4ರವರೆಗೆ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.ಕನ್ನಡ ನಾಡಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಎಲ್ಲಾ ಹಂತದ ಉದ್ಯೋಗಗಳನ್ನು ಕನ್ನಡಿಗರಿಗೆ ನೀಡುವಂತೆ ಸೂಕ್ತ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕು ಹಾಗೂ ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಆಗ್ರಹಿಸಿ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೆಂಗಳೂರು ಸೇರಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದೆ.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರವೇ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ.

ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದೆಗಳಲ್ಲಿ ಶೇಕಡಾ 100 ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಇತರೆ ಗ್ರೂಪ್‍ಗಳಲ್ಲಿ ಶೇಕಡಾ 80 ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಲಾಗಿದೆ.

ನಾರಾಯಣಗೌಡ ಅವರು ಮಾತನಾಡಿ, ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಕೊಡಿ ಎಂದು ಚಳವಳಿ ಮಾಡುವಂಥ ಸ್ಥಿತಿಗೆ ಬಂದಿರುವುದೇ
ನಾಚಿಕೆಗೇಡು. ಕನ್ನಡಿಗರು ಶಾಂತಿಪ್ರಿಯರಾಗಿರುವ ಕಾರಣ ಅನ್ಯರು ಸವಾರಿ ಮಾಡುತ್ತಿದ್ದಾರೆ. ಕನ್ನಡಿಗರು ಈಗ ಒಂದಾಗಿ ನಿಲ್ಲಬೇಕಾದ ಅನಿವಾ ರ್ಯತೆ ಇದೆ. ಕನ್ನಡಿಗರ ಹಕ್ಕುಗಳನ್ನು ಹೊರ ರಾಜ್ಯಗಳಿಂದ ಬಂದವರು ಅನುಭವಿಸುತ್ತಿದ್ದು, ಕನ್ನ-ಡಿಗರು ನಿರುದ್ಯೋಗಿಗಳಾಗಿ ಅಲೆಯುತ್ತಿದ್ದಾರೆ.

ಈಗ ನಾವು ಸಿಡಿದು ನಿಲ್ಲದೇ ಹೋದಲ್ಲಿ ಖಂಡಿತ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.ಈ ನಡುವೆ ಕನ್ನಡಿಗರಿಗೆ ಉದ್ಯೋಗಕ್ಕಾಗಿ ನಡೆಯುವ ಪ್ರತಿಭಟನೆಗೆ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಬೆಂಬಲ ಘೋಷಿಸಿದೆ.ಅದೇ ರೀತಿ ನಟಿ ಪೂಜಾ ಗಾಂಧಿ, ನೆನಪಿರಲಿ ಪ್ರೇಮ್ ರಿದಂತೆ ಅನೇಕ ಕಲಾವಿದರು ಪ್ರತಿಭಟನೆ ಬೆಂಬಲ ಸೂಚಿಸಿದ್ದಾರೆ.ಕರ್ನಾಟಕದಲ್ಲಿನ ಉದ್ಯೋಗಗಳ ಮೇಲೆ ಮೊದಲ ಹಕ್ಕು ಮತ್ತು ಆದ್ಯತೆ ಕನ್ನಡಿಗರಿಗೆ ಸಿಗಬೇಕು. ಈ ಹೋರಾಟದಲ್ಲಿ ನಾನು ಭಾಗವಹಿಸುತ್ತೇನೆ ಎಂದು ಪೂಜಾ ಗಾಂಧಿ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು