LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಅಪರ್ಣಾ ನುಡಿನಮನ

ದೊಡ್ಡಬಳ್ಳಾಪುರ: ಸರಳ, ಸುಸ್ಪಷ್ಟ ಕನ್ನಡವನ್ನು ಬಳಸಿ ಕಾರ್ಯಕ್ರಮಗಳ ನಿರೂಪಣೆಯ ಮೂಲಕ ಗಮನ ಸೆಳೆದಿದ್ದ ನಿರೂಪಕಿ ಹಾಗೂ ನಟಿ ಅಪರ್ಣಾ ಅವರ ನಿಧನ ಹಿನ್ನಲೆ ಇಲ್ಲಿನ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಶುಕ್ರವಾರ ನುಡಿನಮನ ಹಾಗೂ ಶ್ರದ್ದಾಂಜಲಿ ಕಾರ್ಯಕ್ರಮ ನಡೆಯಿತು.
ಅಪರ್ಣಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೌನಾಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು.

ಬಳಿಕ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಪ್ರೊ .ರವಿಕಿರಣ್ ಕೆ.ಆರ್, ಅಪರ್ಣಾ ಅವರು ಕನ್ನಡ ಕಿರುತೆರೆಯಲ್ಲಿ ಕಾರ್ಯಕ್ರಮ ನಿರೂಪಕಿಯಾಗಿ ಜನಪ್ರಿಯತೆ ಪಡೆದವರು. ದೂರದರ್ಶನದ ಮೂಲಕ ಆರಂಭವಾದ ಅವರ ನಿರೂಪಣಾ ಪಯಣ ಆಕಾಶವಾಣಿ, ಹಲವು ಖಾಸಗಿ ವಾಹಿನಿಗಳಲ್ಲೂ ಗಮನ ಸೆಳೆದಿತ್ತು. ಸರ್ಕಾರಿ ಕಾರ್ಯಕ್ರಮಗಳ ಅಚ್ಚುಕಟ್ಟಾದ ನಿರೂಪಣೆಗೂ ಅವರು ಹೆಸರಾಗಿದ್ದರು. ಬೆಂಗಳೂರು ಮೆಟ್ರೋ ಉದ್ಘೋಷಕಿಯಾಗಿಯೂ ಅವರ ದನಿ ಎಲ್ಲ ಕನ್ನಡಿಗರ ಮನೆ-ಮನವನ್ನು ಮುಟ್ಟಿತ್ತು ಎಂದು ಸ್ಮರಿಸಿದರು.

ಭಾಷೆಯ ಘನತೆಗೆ ಯಾವುದೇ ಲೋಪವಾಗದಂತೆ ಸಮರ್ಥವಾಗಿ ಭಾಷೆಯನ್ನು ಬಳಕೆ ಮಾಡುವ ಕೌಶಲ ಹೊಂದಿದ್ದ ಅವರು, ಸರಳ, ಸ್ಪಷ್ಟ ಹಾಗೂ ಅಪಭ್ರಂಶರಹಿತ ಹಿತಕಾರಿ ಕನ್ನಡವನ್ನು ಬಳಕೆ ಮಾಡುತ್ತಿದ್ದ ರೀತಿಯೇ ವಿಭಿನ್ನ. ಕನ್ನಡ ಸಿನಿಮಾ ಕ್ಷೇತ್ರದಲ್ಲೂ ತನ್ನದೇ ಆದ ವಿಶಿಷ್ಟ ಛಾಪನ್ನು ಅವರು ಮೂಡಿಸಿದ್ದರು ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಮಾತನಾಡಿ, ಕನ್ನಡಿಗರು ಎಂದೂ ಮರೆಯದ ದನಿ ಅಪರ್ಣ ಅವರದ್ದು. ದೂರದರ್ಶನ ವಾಹಿನಿಯ ಹಲವು ಕಾರ್ಯಕ್ರಮಗಳನ್ನು ಅವರು ಪ್ರಸ್ತುತಪಡಿಸುತ್ತಿದ್ದ ರೀತಿ ಅತ್ಯಂತ ಮನನೀಯವಾಗಿತ್ತು ಎಂದರು.
ಕಾರ್ಯಕ್ರಮದಲ್ಲಿ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿಆರ್.ರಮೇಶ್, ಕಾರ್ಯದರ್ಶಿ ಅರವಿಂದ್, ಸಂಘಟನಾ ಕಾರ್ಯದರ್ಶಿ ನರೇಂದ್ರ, ಮುಖಂಡರಾದ ಉದಯ್, ವಿನಯ್ ಕುಮಾರ್, ಶಿವಾನಂದ್, ಶಕುಂತಲಾ ಮತ್ತಿತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು