LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕನ್ನಡ ನಿತ್ಯೋತ್ಸವ ಪ್ರಶಸ್ತಿ ಪ್ರದಾನ

ಆದರ್ಶ ಸುಗಮಸಂಗೀತ ಅಕಾಡೆಮಿ ವತಿಯಿಂದ ಕನ್ನಡ ರಾಜ್ಯೋತ್ಸವ ದ ಅಂಗವಾಗಿ ಏರ್ಪಡಿಸಿದ್ದ "ಮೊಳಗಲಿ ಕನ್ನಡ ಜಯಭೇರಿ "ಕಾರ್ಯಕ್ರಮದಲ್ಲಿ ಖ್ಯಾತ ಕೀಬೋರ್ಡ್ ಕಲಾವಿದ ಶ್ರೀ ಕೃಷ್ಣ ಉಡುಪ ಅವರಿಗೆ ಹಾಗೂ ಹಿರಿಯ ಕೊಳಲು ವಾದಕರಾದ ಶ್ರೀ ಜಿ ಎಲ್ ರಮೇಶ್ ಕುಮಾರ್ ಅವರಿಗೆ " ಕನ್ನಡ ನಿತ್ಯೋತ್ಸವ ಪ್ರಶಸ್ತಿ " ನೀಡಿ ಗೌರವಿಸಲಾಯಿತು.

ಅಮೆರಿಕದ ಸಂಸ್ಕೃತಿ ಪ್ರತಿಷ್ಠಾನ ದ ಸಂಸ್ಥಾಪಕರಾದ ಶ್ರೀ ಗುರುಪ್ರಸಾದ್ ಹಾಗೂ ಅನಸೂಯ ಪ್ರಸಾದ್ ಅವರು ಪ್ರಶಸ್ತಿ ಪ್ರದಾನ ಮಾಡಿದರು,ಹಿರಿಯ ಜಾನಪದ ಕಲಾವಿದ ಡಾ ಅಪ್ಪಗೆರೆ ತಿಮ್ಮರಾಜು,ಕೆ ಎಸ್ ನರಸಿಂಹ ಸ್ವಾಮಿ ಟ್ರಸ್ಟ್ ಅಧ್ಯಕ್ಷ ಡಾ.ಕಿಕ್ಕೇರಿ ಕೃಷ್ಣಮೂರ್ತಿ,ಮಹಾ ನಗರ ಪಾಲಿಕೆ ಎಂಜಿನಿಯರ್ ಶ್ರೀ ಚಂದ್ರಶೇಖರ್, ಗಾಯಕರಾದ ಶಿವಶಂಕರ್,ಶ್ರೀಧರ್,ಅಭಿಷೇಕ್ ರಾಮಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.

ಆದರ್ಶ ಸುಗಮಸಂಗೀತ ಅಕಾಡೆಮಿಯ ಕಲಾವಿದರು ದ ರಾ ಬೇಂದ್ರೆ ಅವರ ಒಂದೇ ಒಂದೇ ಕರ್ನಾಟಕ ಒಂದೇ,ಗೋವಿಂದ ಪೈ ಅವರ ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ,ಕುವೆಂಪು ಅವರ ಕನ್ನಡ ಎನೆ ಕುಣಿದಾಡುವುದೆನ್ನೆದೆ,ಸಿದ್ದಯ್ಯ ಪುರಾಣಿಕರ ಹೊತ್ತಿತೋ ಹೊತ್ತಿತು ಕನ್ನಡದ ದೀಪ, ದೊಡ್ಡರಂಗೇಗೌಡರ ಕಲ್ಪ ಕಲ್ಪದಲ್ಲಿ ಕನ್ನಡ ಮುಂತಾದ ಗೀತೆಗಳನ್ನು ಹಾಡಿ ರಂಜಿಸಿದರು,ಖ್ಯಾತ ಕಲಾವಿದರಾದ ವಿದ್ವಾನ್ ಸುದತ್ತ,ರಮೇಶ್,ಅಭಿಷೇಕ್ ಮುಂತಾದ ಕಲಾವಿದರು ವಾದ್ಯ ಸಹಕಾರ ನೀಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು