LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ: ಮಹಾದೇವಪ್ಪ

ದೊಡ್ಡಬಳ್ಳಾಪುರ: ಕರ್ನಾಟಕ ಏಕೀಕರಣ ಚಳುವಳಿ ಕನ್ನಡಿಗರನ್ನು ಒಗ್ಗೂಡಿಸಿತು. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಲು ಬೆಳೆಸಲು ಸಹಕಾರಿಯಾಯಿತು ಎಂದು ಪ್ರಾಧ್ಯಾಪಕ ಮತ್ತು ಕವಿ ಕೆ.ಎಂ. ಮಹಾದೇವಪ್ಪ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಕರ್ನಾಟಕ ಏಕೀಕರಣ ಚಳುವಳಿ ಎಂಬ ವಿಷಯ ಕುರಿತು ಉಪನ್ಯಾಸ ಮತ್ತು ಕಲಾವಿದರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು .ಕನ್ನಡ ಭಾಷಿಗರ ನಾಡನ್ನು ಒಗ್ಗೂಡಿಸಲು ಭಾರತ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲೇ ಕರ್ನಾಟಕ ಏಕೀಕರಣ ಹೋರಾಟ ಪ್ರಾರಂಭವಾಯಿತು. ಹಲವು ಹೋರಾಟಗಳು, ಹೋರಾಟಗಾರರ ಶ್ರಮದಿಂದ ಕನ್ನಡ ನಾಡು ಒಂದು ರಾಜ್ಯವಾಗಿ ಉದಯವಾಯಿತು ಎಂದರು.

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎಚ್.ಪಿ.ಮಲ್ಲಾರಾಜು ಮಾತನಾಡಿ, ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರು ಸಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಕನ್ನಡ ಶಾಲೆಗಳಲ್ಲಿ ಓದಿದವರು ಖ್ಯಾತ ವಿಜ್ಞಾನಿಗಳು ಆಗಿದ್ದಾರೆ. ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ ಮತ್ತು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ ದೊರೆಯಬೇಕೆಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ  ಪ್ರೊ .ಕೆ.ಆರ್.ರವಿಕಿರಣ್ ಮಾತನಾಡಿ, ಕನ್ನಡ ನಾಡಿನ ಪ್ರತಿಯೊಬ್ಬರು ಕನ್ನಡದ ಅಸ್ಮಿತೆ ಮತ್ತು ಅನನ್ಯತೆ ಬಗ್ಗೆ ಹೆಮ್ಮೆ ಪಡಬೇಕು. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ನಮ್ಮೆಲ್ಲರ ಆದ್ಯತೆಯ ವಿಚಾರವಾಗಬೇಕು. ಕನ್ನಡ ಕಾರ್ಯಕ್ರಮಗಳು ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗಿರಬಾರದು. ಪ್ರತಿದಿನವು ಕನ್ನಡತನ ನಮ್ಮ ಬದುಕಿನ ಭಾಗಬೇಕು. ಕನ್ನಡಿಗರಿಗೆ ಕನ್ನಡ ಭಾಷೆಯಲ್ಲಿ ಜ್ಞಾನವನ್ನು ನೀಡಿದರೆ ಹೆಚ್ಚು ಪರಿಣಾಮಕಾರಿಯಾಗಿ ಅರ್ಥವಾಗುತ್ತದೆ, ಮಾತೃಭಾಷೆಯಿಂದ ಜ್ಞಾನ ಹೆಚ್ಚಾಗುತ್ತದೆ ಎಂದು ಅನೇಕ ಸಂಶೋಧನೆಗಳು ತಿಳಿಸಿವೆ ಎಂದರು.

ಕಲಾವಿದರಿಗೆ ಸನ್ಮಾನ : ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಲಾವಿದರುಗಳಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ರಾಮಕೃಷ್ಣ, ಕುಮಾರ್, ಶೋಭಾಕುಮಾರ್, ಅಣ್ಣಪ್ಪ, ಸತ್ಯಜಿತ್ ಅವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕಸಬಾ ಹೋಬಳಿ ಅಧ್ಯಕ್ಷ ಪಿ.ಡಿ.ದಾದಾಪೀರ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಹಣಬೆ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಹರೀಶ್, ವೆಂಕಟೇಶ್, ಪಂಚಾಯಿತಿ ಅಧಿಕಾರಿ ಗಂಗರಾಜು, ಮುಖ್ಯಶಿಕ್ಷಕಿ ಶಾಂತಮ್ಮ, ಶಿಕ್ಷಕ ಮತ್ತು ಕಲಾವಿದ ಹಣಬೆ ನಾಗರಾಜು, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಸಿ.ಅಣ್ಣಯ್ಯ, ಸಿಬ್ಬಂದಿಯವರಾದ ಮಹಾದೇವಸ್ವಾಮಿ, ಶಶಿಕಾಂತ್, ಶಾರದಮ್ಮ, ಯಮುನಾವ್ವ ಖನ್ನಾಳ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು