LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆ ಅರಿಯಲು ಕನ್ನಡ ದಿನಪತ್ರಿಕೆ, ಪುಸ್ತಕಗಳ ಓದುವ ಹವ್ಯಾಸ ಬೆಳೆಸಿಕೊಳ್ಳಲು ಕರೆ

ದೊಡ್ಡಬಳ್ಳಾಪುರ: ಜಗತ್ತಿನ ಬದಲಾವಣೆಯಲ್ಲಿ ಶಿಕ್ಷಣ ಮಹತ್ವದ ಪಾತ್ರ ವಹಿಸಿದೆ. ಶಿಕ್ಷಣವು ವ್ಯಕ್ತಿಯ ಜ್ಞಾನವನ್ನು ಹೆಚ್ಚಿಸುವುದರ ಜೊತೆಗೆ ಜೀವನದಲ್ಲಿ ಆತ್ಮವಿಶ್ವಾಸವನ್ನು ಮೂಡಿಸುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ  ಪ್ರೊ .ಬಿ.ಎನ್.ಕೃಷ್ಣಪ್ಪ ತಿಳಿಸಿದರು.
ಅವರು ದೊಡ್ಡಬಳ್ಳಾಪುರ ನಗರದ ವಿದ್ಯಾನಿಧಿ ಪದವಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳಿಗೆ ಪದವಿಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ
ಮಾತನಾಡಿದರು.

ಪದವಿ ಪಡೆದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮತ್ತು ಉದ್ಯೋಗ ಪಡೆಯಲು ವಿಪುಲವಾದ ಅವಕಾಶಗಳಿವೆ. ಬೆಂಗಳೂರುಗ್ರಾಮಾಂತರ ಜಿಲ್ಲೆಯಲ್ಲಿ ಬಹು
ರಾಷ್ಟ್ರೀಯ ಕಂಪನಿಗಳು ಪ್ರಾರಂಭವಾಗುತ್ತಿವೆ. ಇವುಗಳ ಸದುಪಯೋಗವನ್ನು ಯುವಕರು ಪಡೆದುಕೊಳ್ಳಬೇಕು. ವೃತ್ತಿ ಜೀವನದಲ್ಲಿ ಸಹ ಉತ್ಸಾಹ ಲವಲವಿಕೆ ಹೊಂದಿರಬೇಕು ಎಂದರು.

ವಿದ್ಯಾರ್ಥಿಗಳು ನಮ್ಮ ನಾಡುನುಡಿಯ ಹಿರಿಮೆಯನ್ನು ಅರಿಯ ಬೇಕು. ಕನ್ನಡ ನಾಡು ನುಡಿಯ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ಕನ್ನಡ ಪ್ರಜ್ಞೆ ಮತ್ತು ಕರ್ನಾಟಕ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳ ಬೇಕು. ಕನ್ನಡ ದಿನಪತ್ರಿಕೆಗಳನ್ನು ಮತ್ತು ಕನ್ನಡ ಪುಸ್ತಕಗಳನ್ನು ಓದುವಹವ್ಯಾಸ ನಿರಂತರವಾಗಿ ಇರಬೇಕು.
ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತುಪರಂಪರೆಯನ್ನು ನಾವು ಅರಿಯುವುದರೊಂದಿಗೆ ನಮ್ಮ ಜೊತೆಯವರಿಗೂ ಅರಿವು ಮೂಡಿಸಬೇಕು. ಕನ್ನಡಿಗರು ಎಷ್ಡೇ ಭಾಷೆ ಕಲಿತರೂ ಕನ್ನಡ ಭಾಷೆಯನ್ನು ಮರೆಯಬಾರದು ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಮಾನವೀಯ ಗುಣಗಳನ್ನು ಅಳವಡಿಸಿಕೊಂಡಾಗ ಮಾತ್ರ ನಾವು ಕಲಿತ ವಿದ್ಯೆಗೆ ಮತ್ತು ಹುದ್ದೆಗೆ ಗೌರವ ಬರುತ್ತದೆ. ಸ್ಪರ್ಧಾತ್ಮಕ ಕಾಲದಲ್ಲಿ ಪ್ರತಿಭೆಗೆ ಮನ್ಬಣೆ ದೊರೆಯುತ್ತದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿಗೆ ಅನುಗುಣವಾಗಿ ವಿದ್ಯೆ ಮತ್ತು ಕೌಶಲ್ಯವನ್ನು ಪಡೆಯಬೇಕು.

ಬಸವಣ್ಣ ಮತ್ತು ಶರಣರು ಕಾಯಕ ಪ್ರಜ್ಞೆಯಮಹತ್ವವನ್ನು ಸಾರಿದರು. ಬಸವಣ್ಣ ನವರ ಆರ್ಥಿಕ ಮತ್ತು ಸಾಮಾಜಿಕ ಚಿಂತನೆ ಸಮಾಜ ಬದಲಾವಣೆಗೆ ಸಹಕಾರಿ ಆಯಿತು ಎಂದರು.ಕಾರ್ಯಕ್ರಮದಲ್ಲಿ ವಿದ್ಯಾನಿಧಿ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ .ದಿನೇಶ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಆರ್.ರಂಗನಾಥ, ಉಪನ್ಯಾಸಕರುಗಳಾದ ಜಯರಾಮ್, ಚೇತನ್, ತೇಜಸ್ವಿನಿ, ಶಿವಾನಂದ್, ಶ್ರೀಧರ್, ಶಮಬೇಗಂ ಮುಂತಾದವರು ಭಾಗವಹಿಸಿದ್ದರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು