LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕೆಪಿಎಸ್‌ಸಿ ಮುಚ್ಚುವೆ ಹೇಳಿಕೆ ಪ್ರಕರಣ 

ಮುಖ್ಯಮಂತ್ರಿಗೆ ಶಾಸನದ ಗಂಧಗಾಳಿ ಗೊತ್ತಿಲ್ಲ: ಎಚ್ಡಿಕೆ ಕಿಡಿ



ನವದೆಹಲಿ: ಕೆಪಿಎಸ್‌ಸಿಯನ್ನು ಮುಚ್ಚಲು ಕಾನೂನು ತಜ್ಞರ ಜತೆ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಹರಿಹಾಯ್ದಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಮುಖ್ಯಮಂತ್ರಿಗೆ ಶಾಸನದ ಮಹತ್ವವೇ ಗೊತ್ತಿಲ್ಲದಂತಿದೆ ಎಂದು ಟೀಕಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಕರ್ನಾಟಕ ಲೋಕಸೇವಾ ಆಯೋಗ  ವನ್ನು ಶಾಸನಬದ್ಧವಾಗಿ ಮುಚ್ಚುತ್ತೇವೆ ಎನ್ನುವ ಮುಖ್ಯಮಂತ್ರಿ ಹೇಳಿಕೆ ಕೇವಲ ಹತಾಶೆಯಿಂದಷ್ಟೇ ಕೂಡಿಲ್ಲ, ಅದು ಬುದ್ಧಿಗೇಡಿತನ, ಹೊಣೆಗೇಡಿತನ ಮತ್ತು ಅಜ್ಞಾನದ ಪರಮಾವಧಿ. ಇವರ ವರಸೆ ಹೇಗಿದೆ ಎಂದರೆ 'ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ!'; 'ನೆಗಡಿ ಬಂದರೆ ಮೂಗಿಗೇ ಕತ್ತರಿ ಹಾಕಿದಂತೆ!!' ಎಂದು ಲೇವಡಿ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST