LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಬ್ಬಿಣ ಅದಿರು ರಫ್ತು ನಿಷೇಧ ಹಿಂಪಡೆಯಲು ಮನವಿ

ಬೆಂಗಳೂರು: ರಾಜ್ಯದ ಕಿರು ಬಂದರುಗಳ ಮೂಲಕ ಕಬ್ಬಿಣ ಅದಿರು ರಫ್ತು ನಿಷೇಧಿಸುವ ಆದೇಶವನ್ನು ಹಿಂಪಡೆಯುವಂತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರಿಗೆ ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ್ ರಾಯ್ ಪುರ ಅವರು ಮನವಿ ಸಲ್ಲಿಸಿದರು.
ನಗರದ ವಿಧಾನಸೌಧ ಮೂರನೇ ಮಹಡಿಯಲ್ಲಿರುವ ಸಚಿವರ ಕಚೇರಿಯಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ತಿಳಿಸಿದರು.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿರುವ ತುರ್ತು ಸಮುದ್ರ ಕೊರೆತ ಪ್ರತಿಬಂಧಕ ಕಾಮಗಾರಿಗಳಿಗೆ ಹೆಚ್ಚುವರಿ ಒಟ್ಟು ೧೫ ಕೋಟಿ ರೂಪಾಯಿಗಳು ಅನುದಾನ ನೀಡುವಂತೆ ಸಚಿವರಿಗೆ ಕೆಎಂಬಿ ಸಿಇಒ ಅವರು ಪ್ರಸ್ತಾವನೆ ಸಲ್ಲಿಸಿದರು.
೨೦೨೪-೨೫ನೇ ಹಣಕಾಸು ವರ್ಷಕ್ಕೆ ಸಾಗರಮಾಲ ಯೋಜನೆಗೆ ರಾಜ್ಯದ ಪಾಲಿನ ಅನುದಾನವನ್ನು ಬಿಡುಗಡೆಗೊಳಿಸುವಂತೆ ಹಾಗೂ ೫ ಸಾಗರಮಾಲಾ ಯೋಜನೆಗಳಿಗೆ ಸರ್ಕಾರದಿಂದ ಮರು ಮಂಜೂರಾತಿ ನೀಡುವಂತೆ ಸಚಿವರಿಗೆ ಜಯರಾಮ್ ರಾಯ್ ಪುರ ಅವರು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ಮಾಲೀಕತ್ವದಲ್ಲಿರುವ ತದಡಿ ಬಂದರು ಲಿಮಿಟೆಡ್ ಅನ್ನು, ಕರ್ನಾಟಕ ಜಲಸಾರಿಗೆ ಮಂಡಳಿಗೆ ವರ್ಗಾಯಿಸುವ ಬಗ್ಗೆ ಸಚಿವರಿಗೆ ಒತ್ತಾಯಿಸಿದರು.
ಸಮುದ್ರ ವಿಮಾನ ಸೇವೆಗಳ ಕಾರ್ಯಾಚರಣೆಯು ಆಕರ್ಷಕ ಪ್ರವಾಸೋದ್ಯಮ ಚಟುವಟಿಕೆಗಳಲ್ಲಿ ಒಂದಾಗಿದ್ದು, ಸಾಕಷ್ಟು ಪ್ರಾವಸಿಗರನ್ನು ಗಮನ ಸೆಳೆಯುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಈ ಯೋಜನೆಯನ್ನು ಪರಿಗಣಿಸಿ, ಇದಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಚಿವರಿಗೆ ಕೆಎಂಬಿ ಸಿಇಒ ಅವರು ತಿಳಿಸಿದರು.
ಕರ್ನಾಟಕ ಜಲಸಾರಿಗೆ ಮಂಡಳಿಗೆ ೬೦ ನೌಕರರನ್ನು ನೇಮಕಾತಿಯನ್ನು ಮಾಡಿಕೊಳ್ಳುತ್ತಿದೆ. ಈ ನೇಮಕಾತಿ ಕರ್ನಾಟಕದ ಕಡಲತೀರಗಳ ಅಭಿವೃದ್ಧಿ, ನೌಕಾಯಾನ ಮತ್ತು ಬಂದರುಗಳ ನಿರ್ವಹಣೆ ಕುರಿತು ಹೆಚ್ಚು ಗಮನ ಹರಿಸಲು ಪ್ರಸ್ತುತ ಅವಶ್ಯಕವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಈ ನೇಮಕಾತಿಯನ್ನು ಅದಷ್ಟು ಬೇಗ ಪರಿಗಣಿಸಿ, ಅನುಮೋದನೆ ನೀಡುವಂತೆ ಸಚಿವರಿಗೆ ತಿಳಿಸಿದರು.
ಸಭೆಯಲ್ಲಿ ಮೂಲಸೌಲಭ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಾರ್ಯದರ್ಶಿ ಡಾ.ಎನ್. ಮಂಜುಳ, ಕರ್ನಾಟಕ ಜಲಸಾರಿಗೆ ಮಂಡಳಿಯ ನಿರ್ದೇಶಕ ಕ್ಯಾ.ಸಿ.ಸ್ವಾಮಿ, ಚೀಫ್ ಇಂಜಿನಿಯರ್ ಪ್ರಸನ್ನ ಕುಮಾರ್ ಶೇಟ್ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು