LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕರ್ತವ್ಯ ನಿರತ ಡಾಕ್ಟರ್ ಗೆ ಚೂರಿ ಇರಿತ, ವ್ಯಕ್ತಿಯ ಬಂಧನ

ಚೆನ್ನೈ: ಆಘಾತಕಾರಿ ಘಟನೆಯೊಂದರಲ್ಲಿ ಗಿಂಡಿಯಲ್ಲಿರುವ ಕಲೈಂಜರ್ ಸೆಂಟಿನರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆಂಕೊಲಾಜಿ ವಿಭಾಗದ ವೈದ್ಯರೊಬ್ಬರಿಗೆ ವ್ಯಕ್ತಿಯೊಬ್ಬ ಬುಧವಾರ ಬೆಳಗ್ಗೆ ಚಾಕುವಿನಿಂದ ಇರಿದಿದ್ದಾನೆ. ಆರೋಪಿಯನ್ನು ಪೆರುಗುಳತ್ತೂರಿನ ವಿಘ್ನೇಶ್ ಎಂದು ಗುರುತಿಸಲಾಗಿದೆ.

ಬೆಳಗ್ಗೆ 10:30ರ ಸುಮಾರಿಗೆ ಆಸ್ಪತ್ರೆಗೆ ಬಂದಿದ್ದ ಈತ ಹೊರರೋಗಿ ಕೊಠಡಿಯಲ್ಲಿ ಆಂಕೊಲಾಜಿ ವಿಭಾಗದ ಸಹ ಪ್ರಾಧ್ಯಾಪಕ ಡಾ.ಬಾಲಾಜಿ ಅವರಿಗೆ ಏಳು ಬಾರಿ ಇರಿದು, ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆದಾಗ್ಯೂ, ಸಾರ್ವಜನಿಕರು ಮತ್ತು ಇತರ ಆಸ್ಪತ್ರೆಯ ನೌಕರರು ಆತನನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ. ಈ ಸಂಬಂಧ ಮುಂದಿನ ತನಿಖೆ ನಡೆಯುತ್ತಿದೆ.

ವಿಘ್ನೇಶ್ ಅವರ ತಾಯಿ ಕಳೆದ ಕೆಲವು ತಿಂಗಳುಗಳಿಂದ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆದಿದ್ದರು ಮತ್ತು ಆರು ಬಾರಿ ಕಿಮೋಥೆರಪಿ ಚಿಕಿತ್ಸೆಗೆ ಒಳಗಾಗಿದ್ದರು. ಶ್ವಾಸಕೋಶದ ಸಮಸ್ಯೆ ಎದುರಿಸುತ್ತಿದ್ದರಿಂದ ಅವರನ್ನು ಮನೆಗೆ ಕರೆದೊಯ್ದಿದ್ದರು. ಕೆಲ ದಿನಗಳ ಹಿಂದೆ ಆಕೆಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ನಂತರ ಆತ ಇಂದು ಗಿಂಡಿಯಲ್ಲಿರುವ ಕಲೈಂಜರ್ ಸೆಂಟಿನರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿದಾಗ ಡಾ.ಬಾಲಾಜಿ ಅವರ ಕೊಠಡಿಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಎಲ್.ಪಾರ್ಥಸಾರಥಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದಾಳಿಯ ನಂತರ ತಕ್ಷಣವೇ ಬಾಲಾಜಿ ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಅವರು ಹೃದ್ರೋಗಿಯಾಗಿದ್ದಾರೆ ಎಂದು ಪಾರ್ಥಸಾರಥಿ ತಿಳಿಸಿದ್ದಾರೆ. ಘಟನೆಯ ಕುರಿತು ವಿವರವಾದ ವರದಿಯನ್ನು ಕೇಳಲಾಗಿದೆ. ಡಾ.ಬಾಲಾಜಿ ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಆರೈಕೆ ಖಾತ್ರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹೇಳಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆ ಪಡೆಯಲು ಬರುವವರಿಗೆ ಸರ್ಕಾರಿ ವೈದ್ಯರು ನಿಸ್ವಾರ್ಥ ಮತ್ತು ಹಗಲು-ರಾತ್ರಿ ಎನ್ನದೇ ಸೇವೆ ಮಾಡುತ್ತಾರೆ. ಅವರ ಸುರಕ್ಷತೆ ಖಾತ್ರಿಪಡಿಸುವುದು ಕರ್ತವ್ಯವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು