LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ: ಕುಮಾರಸ್ವಾಮಿ

ಬೆಂಗಳೂರು: ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನ ಪರಿಷತ್​​ನಲ್ಲಿ ನಿನ್ನೆ ಘಟನಾವಳಿಗಳು ಹಾಗೂ ನಂತರ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಬಂಧನದ ನಂತರದ ಬೆಳವಣಿಗೆಗಳನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸುದೀರ್ಘ ಸಂದೇಶ ಪ್ರಕಟಿಸಿರುವ ಅವರು, ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ ಎಂದು ಪ್ರಶ್ನಿಸಿದ್ದಾರೆ.

ಗೌರವಾನ್ವಿತ ಸಚಿವೆ ಬಗ್ಗೆ ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಕದ್ದು. ಎಲ್ಲದ್ದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ. ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ. ಸರಕಾರದಲ್ಲಿರುವ ಕೆಲವರು ಈ ಘಟನೆಗೆ ಜ್ವಾಲೆ ಸ್ವರೂಪ ನೀಡಿ ಪ್ರಚೋದಿಸುತ್ತಿರುವುದು ಕಳವಳಕಾರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಮೀಸಲಾತಿಗಾಗಿ ಪಂಚಮಸಾಲಿ ಮುಖಂಡರು ಸುವರ್ಣಸೌಧದ ಮುಂದೆ ಪ್ರತಿಭಟಿಸಿದ್ದಕ್ಕೆ ಪೊಲೀಸರಿಂದ ಲಾಠಿಚಾರ್ಜ್ ಮಾಡಿಸಿ ಪೌರುಷ ಮೆರೆದಿತ್ತು ಕಾಂಗ್ರೆಸ್ ಸರಕಾರ. ಅಂದು ಪೊಲೀಸರ ಪ್ರತಾಪ ಹೇಳತೀರದು. ಗೇಟಿನಲ್ಲಿಯೇ ತಡೆದು ಆ ಪಂಚಮಸಾಲಿ ಜನರಿಗೆ ರಕ್ತ ಬರುವಂತೆ ಲಾಠಿ ಬೀಸಿದ ಪೊಲೀಸರೇ, ಈ ಗೂಂಡಾಗಳು ಸುವರ್ಣಸೌಧದೊಳಕ್ಕೆ ಹೇಗೆ ಬಂದರು? ಅಥವಾ ಅವರೇ ನಿಮ್ಮ ಕಣ್ತಪ್ಪಿಸಿ ಒಳ ನುಸಳಿದರೋ ಅಥವಾ ಸರಕಾರವೇ ಷಡ್ಯಂತ್ರ ಮಾಡಿ ಒಳ ನುಗ್ಗಿಸಿತೋ? ಇಲ್ಲವೇ ಯಾವುದಾದರೂ ಕಲ್ಲು ಬಂಡೆಯ ಕರಾಮತ್ತು, ಕುಮ್ಮಕ್ಕು ಇದೆಯಾ ಎಂದು ಕುಮಾರಸ್ವಾಮಿ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಸದನದ ಕಾರಿಡಾರಿನಲ್ಲಿಯೇ ಆ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್​​ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ‘ಬಂಡೆ’ ಬೆಂಬಲವಿದೆ ಎಂದೇ ಅರ್ಥ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ.

ಆ ಗೌರವಾನ್ವಿತ ಸಚಿವೆಯ ಆಪ್ತ ಸಹಾಯಕ ಶಾಸಕರ ಮೇಲೇರಿ ಹೋಗುವ, ಕಾರಿಡಾರಿನ ಕಬ್ಬಿಣದ ಬಾಗಿಲನ್ನೇ ಮುರಿಯಲೆತ್ನಿಸಿ ಹಲ್ಲೆಗೆ ಯತ್ನಿಸುವ ದೃಶ್ಯಗಳು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ರಾಜ್ಯದಲ್ಲಿ ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ ಎನ್ನುವುದಕ್ಕೆ ಆ ದೃಶ್ಯಗಳೇ ಸಾಕ್ಷಿ ಎಂದು ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಸುವರ್ಣಸೌಧಕ್ಕೆ ನುಗ್ಗಿದ ಗೂಂಡಾಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ರೌಡಿಪಟ್ಟಿ ತೆರೆಯಬೇಕು. ಸಮಾಜದ ಶಾಂತಿಗೆ ಬೆದರಿಕೆಯಾಗಿರುವ ಆ ಕಿಡಿಗೇಡಿಗಳನ್ನು ಸುವರ್ಣಸೌಧ, ವಿಧಾನಸೌಧದಿಂದ ಶಾಶ್ವತವಾಗಿ ನಿರ್ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು