LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಕರ್ನಾಟಕ ಏಳು ಕೋಟಿ ಜನರ ಉಸಿರಾಗಲಿ: ಸಿಎಂ ಸಿದ್ದರಾಮಯ್ಯ

ಮೈಸೂರು: ಕನ್ನಡದ ವಾತಾವರಣವನ್ನು ವಿಸ್ತರಿ ಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿ ಸೋಣ. ಕರ್ನಾಟಕ ಬಹುತ್ವದ ಬೀಡು. ಬಹುತ್ವದ ನಾಡು ಕಟ್ಟುವ ವಿಚಾರದಲ್ಲಿ ರಾಜಿಯೇ ಇಲ್ಲ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋ ಧನಾ ಕೇಂದ್ರ ಜಂಟಿಯಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ "ಕರ್ನಾಟಕ ಸಾಂಸ್ಕೃತಿಕ ಮುನ್ನೋಟ: ಚಿಂತನಾ ಸಮಾವೇಶ" ವನ್ನು ಉದ್ಘಾಟಿಸಿ ಮಾತನಾಡಿದರು.

ದೇವರಾಜ ಅರಸರು 1973ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದರು. ನಾಮ ಕರಣಗೊಂಡು 50 ವರ್ಷದ ಸುವರ್ಣ ಸಂಭ್ರಮ ವನ್ನು ಬಿಜೆಪಿ ಸರ್ಕಾರ ಮಾಡಬೇಕಿತ್ತು. ಅವರು ಮಾಡಲಿಲ್ಲ. ಹೀಗಾಗಿ ನಾನು ಸುವರ್ಣ ಸಂಭ್ರಮ ವನ್ನು ಬಜೆಟ್ ನಲ್ಲೇ ಘೋಷಿಸಿ ಇದನ್ನು ಕನ್ನಡ ಜನೋತ್ಸವವನ್ನಾಗಿ ಆಚರಿಸಲಾಗುತ್ತಿದೆ ಎಂದರು.

ಕರ್ನಾಟಕ ಮತ್ತು ಕನ್ನಡ ಏಳು ಕೋಟಿ ಜನರ ಉಸಿರಾಗಲಿ. ಇಲ್ಲಿ ಬದುಕನ್ನು ಕಟ್ಟಿಕೊಂಡಿರುವ ಇತರೆ ಭಾಷಿಕರು ಕನ್ನಡ ಮಾತಾಡುವಂತಾದರೆ ಒಳ್ಳೆಯದು. ನಾವು ಯಾವ ಭಾಷೆಗೂ ದ್ವೇಷಿಗಳಲ್ಲ. ಸಾಧ್ಯವಿರುವಷ್ಟು ಭಾಷೆಗಳನ್ನೆಲ್ಲಾ ಕಲಿತರೆ ಒಳ್ಳೆಯದೆ. ಆದರೆ ಕರ್ನಾಟಕದಲ್ಲಿ ಕನ್ನಡದ ವಾತಾವರಣ ನಿರ್ಮಿಸಿ ಕನ್ನಡವನ್ನು ಪೂರ್ತಿಯಾಗಿ ಬಳಸಬೇಕು. ಇದು ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿ ಎಂದರು.

ತಮಿಳುನಾಡಿನಲ್ಲಿ ತಮಿಳಿನಲ್ಲಿ, ಕೇರಳದಲ್ಲಿ ಮಲಯಾಳಂನಲ್ಲಿ, ಆಂಧ್ರದಲ್ಲಿ ತೆಲುಗಿನಲ್ಲಿ, ಮಹಾರಾಷ್ಟ್ರದಲ್ಲಿ ಮರಾಠಿಯಲ್ಲೇ ವ್ಯವಹರಿಸುತ್ತಾರೆ. ಆದರೆ ನಮ್ಮಲ್ಲಿ ಕನ್ನಡ ಬಿಟ್ಟು ಅವರವರ ಭಾಷೆಯಲ್ಲೇ ಹೆಚ್ಚು ವ್ಯವಹರಿಸಲು ಉತ್ಸುಕರಾಗಿ ಉದಾರಿ ಅನ್ನಿಸಿಕೊಂಡಿದ್ದೇವೆ. ಇದು ಅಷ್ಟು ಸರಿಯಲ್ಲ. ಕನ್ನಡದ ವಾತಾವರಣವನ್ನು ಗಟ್ಟಿಗೊಳಿಸಬೇಕು ಎಂದು ಸಿಎಂ ಕರೆ ನೀಡಿದರು.

ಕರ್ನಾಟಕ ಬಹುತ್ವದ ಬೀಡು: ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ. ಕನ್ನಡ ನಾಡು ಬಹುತ್ವದ ಬೀಡು. ಇಲ್ಲಿ ಮನುಷ್ಯ ಪ್ರೀತಿಯ ಬಹುತ್ವ ಆಚರಿಸಲ್ಪಡುತ್ತದೆ. ಆದರೆ ವಿದ್ಯಾವಂತರೇ ಬಹುತ್ವ, ಜಾತ್ಯತೀತತೆ ಕೈಬಿಟ್ಟು ತಾರತಮ್ಯ , ಕಂದಾಚಾರವನ್ನು ಆಚರಿಸುತ್ತಿರುವುದು ದುರಂತ ಎಂದರು.
ಬಸವಣ್ಣನವರನ್ನು ನಾವು ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಿದ್ದು ಬಸವಣ್ಣನವರ ವೈಚಾರಿಕ ನಿಲುವುಗಳನ್ನು ನಾವು ಪಾಲಿಸಬೇಕು ಎನ್ನುವ ಉದ್ದೇಶದಿಂದ. ಸರ್ಕಾರಕ್ಕೆ ಕಿರೀಟ ಸಿಗುತ್ತದೆ ಎನ್ನುವ ಕಾರಣಕ್ಕೆ ಘೋಷಣೆ ಮಾಡಿದ್ದಲ್ಲ. ಬಸವಣ್ಣನ ಆಶಯಗಳು, ವಿಚಾರಗಳು, ವೈಚಾರಿಕತೆ ಯುವ ಪೀಳಿಗೆಗೆ ಹೆಚ್ಚೆಚ್ಚು ಗೊತ್ತಾಗಬೇಕು.

ಈ ಮಣ್ಣಿನ ಕನ್ನಡ-ಕರ್ನಾಟಕ-ಬಹುತ್ವ-ವೈಚಾರಿಕತೆ ಎಲ್ಲವೂ ಸೇರಿ ಆಗಿರುವ ಕನ್ನಡತನ ರೂಪುಗೊಂಡಿದೆ. ಈ ಕನ್ನಡತನವನ್ನು, ಇದು ರೂಪುಗೊಂಡ ಚರಿತ್ರೆಯನ್ನು ನಾವು ಈ ತಲೆಮಾರಿಗೆ ದಾಟಿಸುವ ಕೆಲಸವನ್ನು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಈ ಚಿಂತನಾ ಸಮಾವೇಶ ಆಯೋಜಿಸಲಾಗಿದೆ. ನಿಮ್ಮಂಥಾ ವಿಚಾರವಾದಿಗಳು ಒಟ್ಟಾಗಿ ಸೂಕ್ತವಾದ ಸಾಂಸ್ಕೃತಿಕ ಮುನ್ನೋಟವನ್ನು ನೀಡುತ್ತೀರಿ ಎನ್ನುವ ವಿಶ್ವಾಸವಿದೆ ಎಂದರು. "ಸುವರ್ಣ ಸಂಭ್ರಮ ಕರ್ನಾಟಕ-50: ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ"ದ ಅಂಗವಾಗಿ ಚಿಂತನಾ ಸಮಾವೇಶ ಆಯೋಜಿಸಲಾಗಿತ್ತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕನಕದಾಸ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಕಾ.ತ.ಚಿಕ್ಕಣ್ಣ, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ಮುಕ್ತ ವಿವಿ ಕುಲಪತಿಗಳಾದ ಪ್ರೊ .ಶರಣಪ್ಪ ವಿ.ಹಲ್ಸೆ, ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಧರಣೀದೇವಿ ಮಾಲಗತ್ತಿ, ವಿಧಾನ ಪರಿಷತ್ ಸದಸದಯರಾದ ಡಾ.ತಿಮ್ಮಯ್ಯ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಅರ್ಧ ಶತಮಾನದಿಂದ ಕನ್ನಡದ ವಿವೇಕವನ್ನು ವಿಸ್ತರಿಸುತ್ತಿರುವ ಹಿರಿಯ ಸಾಹಿತಿಗಳು, ಬರಹಗಾರರು, ಲೇಖಕರು, ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು, ನಾನಾ ಚಳವಳಿಗಳ ಕಾರ್ಯಕರ್ತರು, ಮುಖಂಡರುಗಳು ಚಿಂತನಾ ಸಮಾವೇಶದಲ್ಲಿ ಭಾಗವಹಿಸಿದ್ದರು.ರೈತ-ದಲಿತ-ಕಾರ್ಮಿಕ-ಮಹಿಳಾ ಮತ್ತು ಕೋಮುಸೌಹಾರ್ಧ ಹಾಗೂ ಸಂವಿಧಾನ ಉಳಿಸಿ ಚಳವಳಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಲವು ಮಹನೀಯರುಗಳು ಚಿಂತನಾ ಸಮಾವೇಶದಲ್ಲಿ ಉಪಸ್ಥಿತರಿದ್ದು ತಮ್ಮ ತಮ್ಮ ವಿಚಾರಗಳನ್ನು ಮಂಡಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು