LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರ್ನಾಟಕ  ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ: ೧೫ ಸಾಹಿತಿಗಳು ವಿವಿಧ ಪ್ರಶಸ್ತಿಗಳಿಗೆ ಆಯ್ಕೆ

ಬೆಂಗಳೂರು: ಕರ್ನಾಟಕ   ಸಾಹಿತ್ಯ ಅಕಾಡೆಮಿಯ ೨೦೨೨ರ ಸಾಲಿನ ‘ವರ‍್ಷಿಕ ಗೌರವ ಪ್ರಶಸ್ತಿ, ಸಾಹಿತ್ಯ ಶ್ರೀ ಪ್ರಶಸ್ತಿ ಮತ್ತು ೨೦೨೧ನೇ ಸಾಲಿನ ಪುಸ್ತತ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಸಾಹಿತಿಗಳಾದ ಆರ್.ಕೆ. ಹುಡಗಿ, ಅಗ್ರಹಾರ ಕೃಷ್ಣಮರ‍್ತಿ, ಇಂದಿರಾ ಹೆಗ್ಗಡೆ, ರಂಜಾನ್‌ ರ‍್ಗಾ ಹಾಗೂ ತುಂಬಾಡಿ ರಾಮಯ್ಯ ಸೇರಿದಂತೆ ೧೫ ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬುಧವಾರ ನಗರದ ಸಾಹಿತ್ಯ ಅಕಾಡಮಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡಮಿ ಅಧ್ಯಕ್ಷ ಪ್ರೊ.ಎಲ್.ಎನ್.ಮುಕುಂದರಾಜ್ ಅವರು, ಹಿರಿಯ ಸಾಹಿತಿ ರಂಜಾನ್ ರ‍್ಗಾ ಸೇರಿ ೫ ಮಂದಿ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ೧೦ ಮಂದಿ ಸಾಹಿತ್ಯ ಶ್ರೀ ಪ್ರಶಸ್ತಿ, ೧೭ ಜನರಿಗೆ ೨೦೨೧ನೆ ಪುಸ್ತಕ ಬಹುಮಾನ, ೮ ಜನರಿಗೆ ದತ್ತಿ ಬಹುಮಾನ ಪುರಸ್ಕೃತರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ, ೨೦೨೨ನೆ ಸಾಲಿನ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿಗೆ ಸಾಹಿತಿಗಳಾದ ಆರ್.ಕೆ.ಹುಡಗಿ, ಅಗ್ರಹಾರ ಕೃಷ್ಣಮರ‍್ತಿ, ಇಂದಿರಾ ಹೆಗಡೆ, ರಂಜಾನ್ ರ‍್ಗಾ, ತುಂಬಾಡಿ ರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ರೂ,೫೦ ಸಾವಿರ ನಗದು ಬಹುಮಾನ ಒಳಗೊಂಡಿದೆ. ಈ ಬಾರಿ ಪ್ರಶಸ್ತಿಗಳಿಗೆ ವಿಭಾಗವಾರು ಸಾಹಿತಿಗಳನ್ನು ಗುರುತಿಸಿ, ಆಯ್ಕೆ ಮಾಡಲಾಗಿದೆ’ ಎಂದು ತಿಳಿಸಿದರು.

೨೦೨೨ರ ‘ಸಾಹಿತ್ಯ ಶ್ರೀ’ ಪ್ರಶಸ್ತಿಗೆ ಬಂಜಗೆರೆ ಜಯಪ್ರಕಾಶ್, ರೂಮಿ ಹರೀಶ್, ಎಂ.ಜಿ. ಮಂಜುನಾಥ, ದಾಸನೂರು ಕೂಸಣ್ಣ, ರಾಜಶೇಖರ ಹತಗುಂದಿ, ಎಚ್.ಎನ್.ಆರತಿ, ಸಾರಿಕಾದೇವಿ ಕಾಳಗಿ, ಮಹೇಶ್ ಹರವೆ, ಅನಸೂಯ ಕಾಂಬ್ಳೆ ಹಾಗೂ ಚಲಂ ಹಾಡ್ಲಹಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರದಿಂದ ಐವರು, ಸೃಜನೇತರ ಸಾಹಿತ್ಯ ಕ್ಷೇತ್ರದಿಂದ ನಾಲ್ವರು ಹಾಗೂ ಸಾಹಿತ್ಯ ಪರಿಚಾರಿಕೆಗೆ ಸಂಬಂಧಿಸಿದಂತೆ ಒಬ್ಬರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ರೂ.೨೫ ಸಾವಿರ ಒಳಗೊಂಡಿದೆ ಎಂದು ಮಾಹಿತಿ ನೀಡಿದರು.

೨೦೨೧ರ ಪುಸ್ತಕ ಬಹುಮಾನಕ್ಕೆ ವಿರ‍್ಶಕರ ಅಭಿಪ್ರಾಯ ಆಧರಿಸಿ ೧೭ ಕೃತಿಗಳನ್ನು ಆಯ್ಕೆ ಮಾಡಲಾಗಿದೆ. ಈ ಬಹುಮಾನವು ತಲಾ ರೂ.೨೫ ಸಾವಿರ ನಗದು ಬಹುಮಾನ ಒಳಗೊಂಡಿದೆ. ೨೦೨೧ರ ವಿವಿಧ ದತ್ತಿ ಬಹುಮಾನಗಳಿಗೆ ಎಂಟು ಕೃತಿಗಳು ಆಯ್ಕೆಯಾಗಿವೆ. ಡಿಸೆಂಬರ್‌ನಲ್ಲಿ ಕಲ್ಯಾಣ ರ‍್ನಾಟಕ ಅಥವಾ ಉತ್ತರ ರ‍್ನಾಟಕ ಪ್ರದೇಶದಲ್ಲಿ ಸಮಾರಂಭ ನಡೆಯುವ ಸಾಧ್ಯತೆಗಳಿದ್ದು, ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು