LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಕಳಪೆ ಔಷಧ ಪೂರೈಕೆ ತಡೆ, ಗುಣಮಟ್ಟವಿಲ್ಲದ ಔಷಧ ಪೂರೈಸುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್  ಮನವಿ

ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಳಪೆ ಔಷಧ ತಯಾರಿಕೆ, ಪೂರೈಕೆ ತಡೆಯಲು ಡ್ರಗ್ ಆ್ಯಂಡ್ ಕಾಸ್ಮೆಟಿಕ್ 1940 ಕಾಯ್ದೆಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮನವಿ ಮಾಡಿದ್ದಾರೆ.

ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಜೆಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ಕಳೆದ ಡಿಸೆಂಬರ್ ನಲ್ಲಿ ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದರು. ಅದಕ್ಕೆ ಪಶ್ಚಿಮ ಬಂಗಾಳ ಮೂಲದ ಔಷಧ ಉತ್ಪಾದನೆ ಮತ್ತ ಪೂರೈಕೆ ಸಂಸ್ಥೆ ಪೂರೈಸಿದ್ದ ಲ್ಯಾಕ್ಟೇಟ್ ರಿಂಗರ್ ದ್ರಾವಣದ ಗುಣಮಟ್ಟ ಸರಿಯಿಲ್ಲದ್ದೇ ಕಾರಣ ಎಂಬ ಅಂಶ ಪತ್ತೆಯಾಗಿತ್ತು. ಹೀಗಾಗಿ ಕಳಪೆ ಔಷಧ ಪೂರೈಕೆ ತಡೆ ಹಾಗೂ ಗುಣಮಟ್ಟವಿಲ್ಲದ ಔಷಧ ಪೂರೈಸುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಡ್ರಗ್ ಆ್ಯಂಡ್ ಕಾಸ್ಮೆಟಿಕ್-1940 ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಮನವ ಮಾಡಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ಕರ್ನಾಟಕದಲ್ಲಿ 894 ಔಷಧ ಮಾದರಿಗಳನ್ನು ಪರಿಶೀಲಿಸಲಾಗಿದ್ದು, ಈ ಪೈಕಿ 601 ಮಾದರಿಗಳು ಹೊರ ರಾಜ್ಯದ್ದಾಗಿವೆ. ಈ ಅಂತರವನ್ನು ನಿವಾರಿಸಲು ಕೇಂದ್ರೀಕೃತ ಡೇಟಾಬೇಸ್ ಅನ್ನು ರಚಿಸಬೇಕು. ಎಲ್ಲಾ ಕೇಂದ್ರ ಮತ್ತು ರಾಜ್ಯ ಪ್ರಯೋಗಾಲಯಗಳಿಂದ ಔಷಧ ಪರೀಕ್ಷೆಗಳನ್ನು ನಡೆಸಬೇಕು.

ಪರೀಕ್ಷೆ ವೇಳೆ ಔಷಧಿಗಳ ಕಳಪೆ ಗುಣಮಟ್ಟದ್ದು ಎಂದು ಕಂಡು ಬಂದರೆ ರಾಜ್ಯಗಳನ್ನು ಅವುಗಳನ್ನು ನಿಷೇಧಿಸಬಹುದು. ಆದರೆ, ಕ್ರಿಮಿನಲ್ ಮೊಕದ್ದಮೆಗೆ ಸಮಯ ತೆಗೆದುಕೊಳ್ಳುತ್ತಿವೆ. ಈ ನಡುವೆ ತಯಾರಕರು ಔಷಧಿಗಳನ್ನು ಉತ್ಪಾದಿಸುವುದು, ಮಾರಾಟ ಮಾಡುವುದನ್ನು ಮುಂದುವರೆಸುತ್ತಿದ್ದಾರೆ. ಇದು ಸಾರ್ವಜನಿಕ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುತ್ತದೆ. ಕೇಂದ್ರೀಕೃತ ಡೇಟಾಬೇಸ್ ರಚನೆಯ ಮಾಡಿದರೆ, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಲಿಮಿಟೆಡ್ (KSMSCL) ನಂತಹ ಔಷಧ ನಿರೀಕ್ಷಕರು ಮತ್ತು ಖರೀದಿ ಸಂಸ್ಥೆಗಳಿಗೆ ದೇಶಾದ್ಯಂತ ತಯಾರಕರ ಗುಣಮಟ್ಟದ ಇತಿಹಾಸವನ್ನು ಪತ್ತೆಹಚ್ಚಲು ಅನುವು ಮಾಡಿಕೊಡುತ್ತದೆ.

ಸದ್ಯ ಇರುವ ಕಾಯ್ದೆಯಂತೆ ಯಾವುದೇ ಔಷಧ ಉತ್ಪಾದನೆ ಘಟಕ ಸ್ಥಾಪನೆಗೆ ಅನುಮತಿ ಹಾಗೂ ಸಂದರ್ಭ ಬಂದಾಗ ಘಟಕಗಳ ಪರಿಶೀಲನೆ ನಡೆಸುವ ಅಧಿಕಾರ ಆಯಾ ರಾಜ್ಯದ ಔಷಧ ನಿಯಂತ್ರಕ ಅಧಿಕಾರಿಗಳಿಗೆ ಮಾತ್ರ ಇದೆ. ಅಲ್ಲದೆ, ಯಾವ ಸಂಸ್ಥೆ ಕಪ್ಪುಪಟ್ಟಿಗೆ ಸೇರಿದೆ ಎಂಬ ಮಾಹಿತಿ ಇಲ್ಲ ರಾಜ್ಯಗಳಿಗೂ ದೊರೆಯುತ್ತಿಲ್ಲ ಎಂದು ಹೇಳಿದ್ದಾರೆ

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು