LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಕಳ್ಳನ ಸಹಚರನೆಂದು ತಪ್ಪಾಗಿ ತಿಳಿದು 'ಸೆಕ್ಯೂರಿಟಿ ಗಾರ್ಡ್' ಕೈ ಕತ್ತರಿಸಿದ ಉದ್ರಿಕ್ತ ಗುಂಪು!

ರಾಮನಗರ: ಕಳ್ಳನೊಬ್ಬನನ್ನು ಹಿಡಿದಿದ್ದ ಜನರ ಗುಂಪೊಂದು, ಆತನ ಸಹಚರ ಎಂದು ತಪ್ಪಾಗಿ ತಿಳಿದು 24 ವರ್ಷದ ಸೆಕ್ಯೂರಿಟಿ ಗಾರ್ಡ್ ಎಡಗೈ ಕತ್ತರಿಸಿರುವ ಘಟನೆ ಕನಕಪುರ ಬಳಿಕ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಸಂತ್ರಸ್ತನನ್ನು ಕನಕಪುರದ ಬೇಲಿಕೊತ್ತನೂರು ಗ್ರಾಮದ ಎಸ್. ವಿನಯ್ ಎಂದು ಗುರುತಿಸಲಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದುರದೃಷ್ಟವಶಾತ್ ಮಣಿಕಟ್ಟಿನಲ್ಲಿ ತುಂಡಾಗಿರುವ ಕೈಯನ್ನು ಉಳಿದ ತೋಳಿಗೆ ಜೋಡಿಸಲು ಸಾಧ್ಯವಾಗಿಲ್ಲ. ಕೃತಕ ಕೈ ಅಳವಡಿಕೆಗೆ ವೈದ್ಯರು ಸಲಹೆ ಮಾಡಿದ್ದಾರೆ.

ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಎರಡನೇ ಹಂತದಲ್ಲಿರುವ Pyrodynamics ಕಂಪನಿಯ ಆವರಣದ ಹೊರಗಡೆ ಗುರುವಾರ ರಾತ್ರಿ 10-30 ರಿಂದ 10-40ರ ಸುಮಾರಿನಲ್ಲಿ ಈ ಘಟನೆ ನಡೆದಿದೆ.

ಕಚೇರಿ ಆವರಣದಲ್ಲಿ ಕರ್ತವ್ಯದಲ್ಲಿದ್ದ ವಿನಯ್ 'ಕಳ್ಳ ಕಳ್ಳ' ಎಂದು ಯಾರೋ ಕೂಗಿದ್ದರಿಂದ ಹೊರಗೆ ಬಂದಿದ್ದರು. ಕಂಪನಿಯಲ್ಲಿ ಕಳ್ಳತನ ನಡೆದಿದೆ ಎಂದು ಭಾವಿಸಿ ಹೊರಗೆ ಬಂದು ನೋಡಿದಾಗ ಕಳ್ಳನೆಂದು ಆರೋಪಿಸಲಾದ ಮಾಗಡಿ ನಿವಾಸಿ ಚೇತನ್ ನಿಗೆ ಜನರ ಗುಂಪೊಂದು ಥಳಿಸುತ್ತಿರುವುದು ಕಂಡು ಬಂದಿದೆ.

ಈ ಮಧ್ಯೆ ಚೇತನ್ ಸಹಚರ ಎಂದು ತಪ್ಪಾಗಿ ತಿಳಿದ ಗುಂಪು ಮಚ್ಚಿನಿಂದ ವಿನಯ್ ಎಡಗೈ ಕತ್ತರಿಸಿದೆ. ಗಾಯಗೊಂಡ ವಿನಯ್ ಫ್ಯಾಕ್ಟರಿಗೆ ತೆರಳಿ ತನ್ನ ಸಹೋದರ ತೇಜಸ್ ಗೌಡನಿಗೆ ಸಹಾಯಕ್ಕಾಗಿ ಕರೆ ಮಾಡಿದ್ದಾನೆ. ಅಲ್ಲದೇ 112 ಗೆ ಕರೆ ಮಾಡಿದ್ದು, ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿನಯ್ ನನ್ನು ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆಂಬ್ಯುಲೆನ್ಸ್ ನಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು