LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikmagalur

ಕಸ್ತೂರಿ ರಂಗನ್ ವರದಿ ವಿರೋಧಿಸಿ  ಇಂದು ಶೃಂಗೇರಿ ಪಟ್ಟಣ ಬಂದ್ 


ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿಯ ಸಾಗಣೆ ಮತ್ತು ಜಾರಿಯನ್ನು ತೀವ್ರವಾಗಿ ವಿರೋಧಿಸಿ ಇಂದು ಚಿಕ್ಕಮಗಳೂರು ಜಿಲ್ಲೆಯ 
ಶೃಂಗೇರಿ ಪಟ್ಟಣದಲ್ಲಿ ಸಂಪೂರ್ಣ ಬಂದ್ ಆಚರಿಸಲಾಗುತ್ತಿದೆ. ಬೆಳಿಗ್ಗೆ 6 ಗಂಟೆಯಿAದ ಆರಂಭವಾಗಿರುವ ಈ ಬಂದ್ ಸಂಜೆ 6 ಗಂಟೆಯವರೆಗೆ ಮುಂದುವರಿಯಲಿದೆ. ಪಟ್ಟಣದ ಅಂಗಡಿ ಮುಗ್ಗಟ್ಟುಗಳು ಮತ್ತು ವಾಣಿಜ್ಯ ವಹಿವಾಟುಗಳು ಸ್ವಯಂಪ್ರೇರಿತವಾಗಿ ಬಂದ್ ಆಗಿದ್ದು, ಸಾರ್ವಜನಿಕ ಜೀವನ ಹಾಗೂ ವ್ಯಾಪಾರ ವಹಿವಾಟು ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ಸ್ಥಳೀಯರು ಮತ್ತು ವಿವಿಧ ಸಂಘಟನೆಗಳ ಒಕ್ಕೂಟದಿಂದ ಶೃಂಗೇರಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಈಗಾಗಲೇ ಆರಂಭವಾಗಿದ್ದು, ಸಾವಿರಾರು ಜನರು ಭಾಗವಹಿಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಲಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಕ್ಷೇತ್ರಕ್ಕೆ ಬರದಂತೆ ಸಂಘಟಕರು ಮನವಿ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST