LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಕಸ್ಟಡಿ" ಚಿತ್ರದಲ್ಲಿ ನಟಿ ಪ್ರಿಯಾ

ಬೃಂದಾವನ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಾಗೇಶ್ ಕುಮಾರ್ ಯು ಎಸ್ ನಿರ್ಮಾಣದ ಹಾಗೂ ಜೆ.ಜೆ.ಶ್ರೀನಿವಾಸ್ ನಿರ್ದೇಶನದ "ಕಸ್ಟಡಿ" ಚಿತ್ರದ ಪ್ರಮುಖಪಾತ್ರದಲ್ಲಿ "ಭೀಮ" ಚಿತ್ರದ ಗಿರಿಜಾ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ಪ್ರಿಯ ನಟಿಸುತ್ತಿದ್ದಾರೆ. ನಗರದ ಟೊರಿನೊ ಫ್ಯಾಕ್ಟರಿ ಆವರಣದಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.

ನಮ್ಮ ಸಂಸ್ಥೆಯ ಮೂಲಕ "ಗಜಾನನ ಗ್ಯಾಂಗ್" ಸೇರಿದಂತೆ ನಾಲ್ಕು ಚಿತ್ರಗಳನ್ನು ನಿರ್ಮಿಸಿದ್ದೇನೆ. "ಕಸ್ಟಡಿ" ಐದನೇ ಚಿತ್ರ. ಸ್ನೇಹಿತ ಜೆ.ಜೆ.ಶ್ರೀನಿವಾಸ್, ಈ ಚಿತ್ರದ ಕಥೆ ಹೇಳಿದರು. ಕಥೆ ಇಷ್ಟವಾಯಿತು. ಈ ಚಿತ್ರದ ಪ್ರಮುಖಪಾತ್ರವನ್ನು "ಭೀಮ" ಖ್ಯಾತಿಯ ಪ್ರಿಯ ಅವರು ಮಾಡಿದರೆ ಚೆನ್ನಾಗಿರುತ್ತದೆ ಎಂದರು. ಪ್ರಿಯ ಅವರ ಪತಿ ಅವಿನಾಶ್ ನನ್ನ ಮಿತ್ರ. ಅವರ ಮೂಲಕ ಪ್ರಿಯ ಅವರನ್ನು ಸಂಪರ್ಕ ಮಾಡಿ ಈ ಚಿತ್ರದ ಕಥೆ ಹೇಳಲಾಯಿತು. ಕೆಲವೇ ದಿನಗಳಲ್ಲಿ ಚಿತ್ರಕ್ಕೆ ಚಾಲನೆ ನೀಡಲಾಯಿತು. ಸದ್ಯ ಚಿತ್ರೀಕರಣ ಬಿರುಸಿನಿಂದ ಸಾಗಿದೆ ಎಂದು ನಿರ್ಮಾಪಕ ನಾಗೇಶ್ ಕುಮಾರ್ ಯು ಎಸ್ ತಿಳಿಸಿದರು.

"ಕಸ್ಟಡಿ" ಸೈಬರ್ ಕ್ರೈಮ್ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ ಎಂದು ಮಾತು ಆರಂಭಿಸಿದ ನಿರ್ದೇಶಕ ಜೆ ಜೆ.ಶ್ರೀನಿವಾಸ್, ಮಕ್ಕಳಿಂದ ವೃದ್ಧರವರೆಗೂ ಎಲ್ಲರೂ ಬಳಸುವ ಮೊಬೈಲ್ ಸುತ್ತ ಈ ಚಿತ್ರದ ಕಥೆ ನಡೆಯುತ್ತದೆ. ಸೈಬರ್ ಕ್ರೈಮ್ ನ ಕುರಿತಾದ ಕಥೆಗಳು ಸಾಕಷ್ಟು ಬಂದಿದೆಯಾದರೂ ಈ ಕಥೆ ಸ್ವಲ್ಪ ವಿಭಿನ್ನ. ಒಂದು ವರ್ಷದ ಹಿಂದೆ ಈ ಚಿತ್ರದ ಕಥೆ ಸಿದ್ದವಾಗಿತ್ತು.

ಈ ಚಿತ್ರದಲ್ಲಿ ಖಡಕ್ ಪೊಲೀಸ್ ಅಧಿಕಾರಿ ಪಾತ್ರದ ಅನ್ವೇಷಣೆಯಲ್ಲಿದ್ದಾಗ "ಭೀಮ" ಖ್ಯಾತಿಯ ಪ್ರಿಯ ಅವರು ಈ ಪಾತ್ರ ಮಾಡಬಹುದು ಅನಿಸಿತು. ಪ್ರಿಯ ಅವರು ಕಥೆ ಕೇಳಿ ಒಪ್ಪಿಕೊಂಡರು. ಕೆಲವೇ ದಿನಗಳಲ್ಲಿ ಚಿತ್ರೀಕರಣ ಆರಂಭಿಸಲಾಯಿತು. ಈಗ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಕಾಕ್ರೋಜ್ ಸುಧೀ ಸಹ ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿಯಿಸಿದ್ದಾರೆ. ನಾನು ಸಹ ನಿರ್ದೇಶನದ ಜತೆಗೆ ನಟನಾಗೂ ಅಭಿನಯಿಸುತ್ತಿದ್ದೇನೆ ಎಂದರು.

ಚಿತ್ರದಲ್ಲಿ ನಟಿಸುತ್ತಿರುವ ನಾಗೇಂದ್ರ ಅರಸ್, ಚಿಂಗಾರಿ ಮಹಾದೇವ್, ಮ್ಯಾಜಿಕ್ ರಮೇಶ್, ಮಧು ಕೆ.ಆರ್ ಪೇಟೆ, ಪವನ್ ಕುಮಾರ್, ಆರಾಧ್ಯ, ಕುಮಾರ್ ಶ್ರೀನಿವಾಸಮೂರ್ತಿ, ವಿನ್ಯಾ, ಅಶ್ವಿತಾ, ಆರಾಧ್ಯ, ತೇಜಸ್ವಿನಿ ಹಾಗೂ ಛಾಯಾಗ್ರಾಹಕ ಶಂಕರ್, ಸಾಹಸ ನಿರ್ದೇಶಕ ನರಸಿಂಹ "ಕಸ್ಟಡಿ" ಕುರಿತು ಮಾತನಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು