LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

`ಕಾಂಗ್ರೆಸ್‍ನಿಂದ ಓಲೈಕೆ ರಾಜಕಾರಣ'

ಮೈಸೂರು: ರೇಷ್ಮೆ ಬೆಳೆಗಾರರನ್ನು ಮಧ್ಯವರ್ತಿಗಳು ಶೋಷಿಸುತ್ತಿದ್ದು, ರೈತರಿಗೆ ಸರಿಯಾದ ದರ ದೊರೆಯುತ್ತಿಲ್ಲ. ಈ ಸಮಸ್ಯೆಯನ್ನು ಕೇಂದ್ರ ಸರ್ಕಾರ ನಿವಾರಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್ ಮನವಿ ಮಾಡಿದರು.ಕೇಂದ್ರ ರೇಷ್ಮೆ ಮಂಡಳಿಯ ಅಮೃತ ಮಹೋತ್ಸವದಲ್ಲಿ ಪಾಲ್ಗೊಂಡ ಡಾ.ಕೆ.ಸುಧಾಕರ್, ರೇಷ್ಮೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇಂದ್ರ ಜವಳಿ ಸಚಿವ ಗಿರಿರಾಜ್ ಸಿಂಗ್ ಗಮನಕ್ಕೆ ತಂದರು.

ಮಧ್ಯವರ್ತಿಗಳಿಂದಾಗಿ ರೇಷ್ಮೆ ಬೆಳೆಗಾರರಿಗೆ ಸರಿಯಾದ ಬೆಲೆ ದೊರೆಯುತ್ತಿಲ್ಲ. ಮಧ್ಯವರ್ತಿಗಳ ಹಸ್ತಕ್ಷೇಪವನ್ನು ತಪ್ಪಿಸುವ ಮೂಲಕ ರೈತರ ಸಮಸ್ಯೆಯನ್ನು ನಿವಾರಿಸಬೇಕು. ಮಧ್ಯವರ್ತಿಗಳ ಶೋಷಣೆಯನ್ನು ತಪ್ಪಿಸಿ, ವರ್ತಕರು ಹಾಗೂ ರೈತರು ಬದುಕುವಂತೆ ಮಾಡಬೇಕು ಎಂದು ಮನವಿ ಮಾಡಿದರು.
ಕೋವಿಡ್ ನಂತರದ ಕಾಲವನ್ನು ಅಮೃತ ಕಾಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಇದೇ ಕಾಲದಲ್ಲಿ ರೇಷ್ಮೆ ಮಂಡಳಿ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಸುಮಾರು 26 ರಾಜ್ಯಗಳಲ್ಲಿ ರೇಷ್ಮೆ ಬೆಳೆಯಲಾಗುತ್ತಿದೆ.

ಕರ್ನಾಟಕದಲ್ಲಿ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ರೇಷ್ಮೆ ಬೆಳೆಯಾಗುತ್ತಿದೆ. ನಾನು ಕೂಡ ಈ ಭಾಗದವನೇ ಆಗಿರುವುದರಿಂದ ರೇಷ್ಮೆ ಬೆಳೆಗಾರರ ಕಷ್ಟಗಳು ತಿಳಿದಿದೆ. ನನ್ನ ತಾತ ಕೂಡ ರೇಷ್ಮೆ ಬೆಳೆಯುತ್ತಿದ್ದರು. ರೇಷ್ಮೆ ಕೃಷಿ ಹಿಂದಿಗಿಂತಲೂ ಹೆಚ್ಚಾಗಿದೆ. ಹಾಗೆಯೇ ನವೀನ ಕ್ರಮಗಳಿಂದಾಗಿ ಹೆಚ್ಚು ಇಳುವರಿ ದೊರೆಯುತ್ತಿದೆ ಎಂದರು.

ಓಲೈಕೆ ರಾಜಕಾರಣ: ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓಲೈಕೆ ರಾಜಕಾರಣ ಕಾಂಗ್ರೆಸ್‍ನ ರಕ್ತದಲ್ಲೇ ಇರುವುದರಿಂದ ರಾಜ್ಯದಲ್ಲಿ ಕೋಮುಗಲಭೆ ನಡೆಯುತ್ತಿದೆ. ಗಣೇಶನ ಮೂರ್ತಿಯನ್ನು ಕೂಡ ಬಂಧಿಸಿ ಕರೆದೊಯ್ದಿದ್ದು ಇಂತಹ ಘಟನೆ ಎಲ್ಲೂ ನಡೆದಿಲ್ಲ. ನನ್ನ ಕ್ಷೇತ್ರದಲ್ಲೂ ಗಣೇಶ ಮೆರವಣಿಗೆಗೆ ಕಾಂಗ್ರೆಸ್ ಸರ್ಕಾರ ತಡೆ ಒಡ್ಡಿದೆ. ನಾವೇನೋ ಬೇರೆ ದೇಶದಲ್ಲಿ ಗಣೇಶ ಉತ್ಸವ ಮಾಡುತ್ತಿದ್ದೇವೆ ಎಂಬ ಭಾವನೆ ಬಂದಿದೆ. ಅನೇಕ ಯುವಕರು ಬಂದು ಅವರ ನೋವು ತೋಡಿಕೊಂಡಿದ್ದಾರೆ. ಅಧಿಕಾರಿಗಳು ಗಣೇಶೋತ್ಸವಕ್ಕೆ ಏಕೆ ಅಡ್ಡಿ ಮಾಡುತ್ತಿದ್ದಾರೆ ಎಂದು ಸರ್ಕಾರ ವಿಮರ್ಶೆ ಮಾಡಿಕೊಳ್ಳಲಿ ಎಂದರು.

ದ್ವೇಷದ ರಾಜಕಾರಣ: ಕೋವಿಡ್ ಕುರಿತ ಮಧ್ಯಂತರ ವರದಿಯನ್ನು ನೀಡಲಾಗಿದೆ. ತಪ್ಪಿತಸ್ಥರು ಇದ್ದರೆ ಅವರಿಗೆ ಶಿಕ್ಷೆ ನೀಡಲಿ. ನಮ್ಮ ಸರ್ಕಾರ ಇದ್ದಾಗ ದ್ವೇಷದ ರಾಜಕಾರಣ ಅಥವಾ ತನಿಖಾ ಅಸ್ತ್ರ ಪ್ರಯೋಗ ಮಾಡಿಲ್ಲ. ಬಿಜೆಪಿ ಬಂದ ನಂತರ ಜಾರಿ ನಿರ್ದೇಶನಾಲಯ, ಸಿಬಿಐ ಬಂದಿಲ್ಲ. ಅದು ಹಿಂದೆಯೂ ಇತ್ತು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ಈ ಎಲ್ಲ ಸಂಸ್ಥೆಗಳು ಸ್ವತಂತ್ರವಾಗಿತ್ತು, ಈಗ ಸ್ವತಂತ್ರವಾಗಿಲ್ಲ ಎಂಬ ಅಭಿಪ್ರಾಯವನ್ನು ಕಾಂಗ್ರೆಸ್ ನಾಯಕರು ಹುಟ್ಟುಹಾಕಿದ್ದಾರೆ. ಇಡೀ ಸರ್ಕಾರ ಕಾಂಗ್ರೆಸ್ ಕೈಯಲ್ಲಿದೆ. ಕುರ್ಚಿ ಹೋದ ನಂತರ ಮುಂದೇನು ಮಾಡುತ್ತಾರೆ ಅವರೇ ದ್ವೇಷದ ರಾಜಕಾರಣವನ್ನು ಎಲ್ಲರಿಗೂ ಕಲಿಸುತ್ತಿದ್ದಾರೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು