LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಾಂಗ್ರೆಸ್, ಬಿಜೆಪಿ ನಾಯಕರು ವಕ್ಫ್ ಬೋರ್ಡ್ ಆಸ್ತಿ ವಿವಾದವನ್ನು ಜ್ವಲಂತವಾಗಿರಿಸಿ ರಾಜಕೀಯ ಲಾಭ ಪಡೆಯುವ ದುರಾಲೋಚನೆ ಬಿಡಲಿ, ರೈತರಿಗೆ ನ್ಯಾಯ ಒದಗಿಸಲಿ: ಡಾ.ಮುಖ್ಯಮಂತ್ರಿ ಚಂದ್ರು ಆಗ್ರಹ

ಬೆಂಗಳೂರು: ವಿಜಯಪುರದಲ್ಲಿ ರೈತರ ಜಮಿನು ವಕ್ಫ್ ಬೋರ್ಡ್ಗೆ ಸೇರಿದ್ದು ಎಂದು ನೋಟಿಸ್ ನೀಡಲಾಗಿರುವ ಪ್ರಕರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಗೊಂದಲ ಸೃಷ್ಟಿಸಿದ್ದು, ಇದನ್ನೇ ಮುಂದಿಟ್ಟುಕೊAಡು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿವೆ ಎಂದು ಆಮ್ ಅದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಚಂದ್ರು ಅವರು, ವಕ್ಫ್ ಆಸ್ತಿ ವಿವಾದವನ್ನು ಜ್ವಲಂತವಾಗಿರಿಸಿ ರಾಜಕೀಯ ಲಾಭ ಪಡೆಯಲು ಎರಡು ಪಕ್ಷಗಳು ಹವ ಣಿಸುತ್ತಿವೆ. ವಕ್ಫ್ ಆಸ್ತಿಗೆ ಸಂಬAಧಿಸಿದ ದಾಖಲೆ ಗಳನ್ನು ಕಾಲಕ್ಕನುಗುಣವಾಗಿ ನವೀಕರಿಸದೆ ಗೊಂದಲಗಳನ್ನು ಸೃಷ್ಟಿಸಲಾಗಿದೆ. ರಾಜ್ಯದಲ್ಲಿ ಅನೇಕ ಸಮಸ್ಯೆಗಳಿವೆ, ಸಂಪುಟ ಸಚಿವರಿಗೆಲ್ಲ ಉಪಚುನಾವಣೆ ಉಸ್ತುವಾರಿ ಹೊರಿಸಲಾಗಿದೆ.

ರಾಜ್ಯದ ಆಡಳಿತ ಯಂತ್ರವೇ ಸ್ಥಗಿತಗೊಂಡಿದೆ. ಆದರೆ ಇದನ್ನು ವಕ್ಫ್ ಬೋರ್ಡ್ ಆಸ್ತಿ ವಿವಾದದ ಮೂಲಕ ಮರೆ ಮಾಚಲು ಪ್ರಯತ್ನಗಳು ನಡೆಯುತ್ತಿವೆ. ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರು ಪರಿಸ್ಥಿತಿಯನ್ನು ಅವಲೋಕಿಸಿ ರೈತರಿಗೆ ನ್ಯಾಯ ಒದಗಿಸುವ ಪ್ರಯತ್ನ ಮಾಡಬೇಕೆ ವಿನಃ ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ ಕೆಲಸವನ್ನು ಮಾಡಬಾರದು ಎಂದು ಆಕ್ರೋಶ ಹೊರಹಾಕಿದರು.

ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯವನ್ನು ತಮ್ಮ ಹಳೇ ಚಾಳಿಯನ್ನೇ ಮುಂದುವರಿಸಿದ್ದಾರೆ. ರಾಜ್ಯದ ಯಾವುದೇ ಮೂಲೆಯಲ್ಲಿ ಕೋಮು ವಿಚಾರಕ್ಕೆ ಸಂಬAಧಿಸಿ ವಿವಾದವಾದರೆ ಎಲ್ಲಿದ್ದರೂ ಓಡಿಬಂದು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಾರೆ. ಮಳೆಯಿಂದ ರಾಜಧಾನಿಗೆ ಸಾಕಷ್ಟು ಹಾನಿಯಾಗಿದೆ, ಇಲ್ಲಿನ ಜನ ಸಾಕಷ್ಟು ಸಮಸ್ಯೆಗಳ ಜೊತೆ ಹೋರಾಡುತ್ತಿದ್ದರು ತಲೆ ಕೆಡಿಸಿಕೊಳ್ಳದ ತೇಜಸ್ವಿ ಸೂರ್ಯ ವಿಜಯಪುರ ರೈತರ ಬಗ್ಗೆ ಹಠಾತ್ತನೆ ಕಾಳಜಿ ತೋರಿಸುತ್ತಿರುವುದು ಹಾಸ್ಯಾಸ್ಪದ.

ವಿಜಯಪುರದಲ್ಲಿ ಕೋಮು ಬೆಂಕಿ ಹತ್ತಿ ಮೈಕಾಯಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ, ಮಾತೆತ್ತಿದರೆ ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎನ್ನುತ್ತಾರೆ, ತಮ್ಮ ಅಸಮರ್ಥತೆಯನ್ನು ಮುಚ್ಚಿಡಲು ಇಂತಹ ವಿವಾದಗಳನ್ನು ಬಳಸಿಕೊಳ್ಳುವುದು ಬಿಜೆಪಿ ಮುಖಂಡರಿಗೆ ಸಾಮಾನ್ಯ ಎಂಬAತಾಗಿದೆ .ಹಲವು ದಶಕಗಳಿಂದ ರಾಜ್ಯವನ್ನಾಳಿದ ಮೂರು ಜೆಸಿಬಿ ಪಕ್ಷಗಳು ಈ ವಿಷಯದಲ್ಲಿ ಕೇವಲ ರಾಜಕಾರಣವನ್ನು ಮಾತ್ರ ಮಾಡಿಕೊಂಡು ಬಂದಿವೆ ಎಂದು ಮುಖ್ಯಮಂತ್ರಿ ಚಂದ್ರು ಕಿಡಿ ಕಾರಿದರು.

ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಸಾಕಷ್ಟು ಹಾನಿಯಾಗಿದೆ, ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು, ಕೇಂದ್ರ ಸರ್ಕಾರದ ಜೊತೆ ಮಾತನಾಡಿ ಇಲ್ಲಿನ ರೈತರಿಗೆ ಹೆಚ್ಚಿನ ಪರಿಹಾರ ಸಿಗುವಂತೆ ಮಾಡುವುದನ್ನು ಬಿಟ್ಟು ರಾಜ್ಯ ಸರ್ಕಾರವನ್ನು ಟೀಕಿಸುತ್ತಾ ಕಾಲ ಕಳೆಯುತ್ತಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಕೂಡ ಇಂತಹ ವಿವಾದಗಳನ್ನು ಪರಿಹರಿಸುವುದು ಬೇಕಿಲ್ಲ, ತಮಗೆ ರಾಜಕೀಯವಾಗಿ ಲಾಭವಾಗುತ್ತಾ ಎನ್ನುವುದನ್ನು ಮಾತ್ರ ನೋಡುತ್ತಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿದ್ದರೂ ಎಲ್ಲರಿಗೂ ಉಪ ಚುನಾವಣೆಯಲ್ಲಿ ಗೆಲ್ಲುವುದಷ್ಟೇ ಮುಖ್ಯವಾಗಿದೆ, ಇವರಿಗೆ ಜನರ ಸಂಕಷ್ಟಕ್ಕೆ ಸ್ಪಂದಿಸುವುದು ಬೇಕಿಲ್ಲ, ಅವರ ಮತಗಳಷ್ಟೇ ಮುಖ್ಯವಾಗಿವೆ ಎಂದು ಟೀಕಿಸಿದರು.

ವಿಜಯಪುರದಲ್ಲಿ ರೈತರು ನೋಟಿಸ್ ಪಡೆದಿರುವ ಬಗ್ಗೆ ಕೂಡಲೇ ಸ್ಪಷ್ಟನೆ ಕೊಡಲಿ. ಅಲ್ಲಿನ ರೈತರಿಗೆ ತಮ್ಮಜಾಗ ಕಳೆದುಕೊಳ್ಳುವ ಭಯ ಶುರುವಾಗಿದ್ದು, ಸಚಿವರು ಕೂಡಲೇ ಆ ರೈತರ ಜೊತೆ ಮಾತನಾಡಿ, ಅವರ ಆತಂಕ ದೂರ ಮಾಡುವ ಕೆಲಸ ಮಾಡಲಿ. ಇಂತಹ ವಿವಾದಗಳು ಮುಂದೆ ಬರದಂತೆ ನೋಡಿಕೊಳ್ಳಲು ಸರ್ಕಾರ ಕ್ರಮ ವಹಿಸಲಿ. ಅತಿವೃಷ್ಠಿಯಿಂದ ರಾಜ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತರಿಗೆ ನೆರವು ನೀಡಬೇಕು. ಯಾವ ರೈತರು ಬೆಳೆ ಕಳೆದುಕೊಂಡಿದ್ದಾರೋ ಅವರಿಗೆ ಕೂಡಲೇ ಪರಿಹಾರದ ಹಣ ಬಿಡುಗಡೆ ಮಾಡಲು ಕ್ರಮ ವಹಿಸಲಿ ಎಂದು ಒತ್ತಾಯಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು