LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕಾಂಗ್ರೆಸ್ ಶಕ್ತಿ ಬಿಜೆಪಿಯವರಿಗೂ ಗೊತ್ತಿದೆ ಡಿಸಿಎಂ ಡಿಕೆಶಿ

ಬೆಳಗಾವಿ: "ಕಾಂಗ್ರೆಸ್ ಪಕ್ಷದ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ನಮಗಿಂತ ಚನ್ನಾಗಿ ಬಿಜೆಪಿಯವರಿಗೂ ಗೊತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.ಬೆಳಗಾವಿ ಸರ್ಕಿಟ್ ಹೌಸ್‍ನಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಬಿಜೆಪಿಯ ಬೆಳಗಾವಿ ಚಲೋ ಬಗ್ಗೆಕೇಳಿದಾಗ, "ಈಗ ಆ ಮಾತು ಏಕೆ. ಯಾರಾದರೂ ಕೆಡಿಸುವ ಪ್ರಯತ್ನ ಮಾಡಲಿ. ಕಾಂಗ್ರೆಸ್ ಪಕ್ಷದ ಶಕ್ತಿ ಅವರಿಗೂ ಗೊತ್ತಿದೆ. ನಮಗೂ ಗೊತ್ತಿದೆ. ಮೊದಲು ಐತಿಹಾಸಿಕ ಕಾರ್ಯಕ್ರಮ ಮಾಡುವ ಮೂಲಕ ಇತಿಹಾಸದ ಪುಟ ಸೇರೋಣ" ಎಂದು ತಿಳಿಸಿದರು. "ಬೆಳಗಾವಿಯು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದೆ. ಹೀಗಾಗಿ ಬೆಳಗಾವಿಯಲ್ಲಿ ದೀಪಾಲಂಕಾರ ಮಾಡಲಾಗಿದ್ದು, ಸಾರ್ವಜನಿಕರು ಈ ವೈಭವವನ್ನು ಕಣ್ತುಂಬಿಕೊಳ್ಳಬೇಕು" ಎಂದರು.

"ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಈ ಕಾರ್ಯಕ್ರಮವನ್ನು ಪಕ್ಷದ ದೃಷ್ಟಿಯಿಂದ ನೋಡಬೇಡಿ. ಕಾಂಗ್ರೆಸ್ ಪಕ್ಷ ಯಾವುದೇ ಕಾರ್ಯಕ್ರಮ ಮಾಡಿದರು, ಪಕ್ಷದ ಕಾರ್ಯಕ್ರಮವನ್ನಾಗಿ ಮಾಡುವುದಿಲ್ಲ. ದೇಶದ ಇತಿಹಾಸ ಹಾಗೂ
ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು ಎನ್ನುವುದನ್ನು ಗಮನದಲ್ಲಿಟ್ಟು ಕೊಂಡು ಕಾರ್ಯಕ್ರಮ ಮಾಡುತ್ತದೆ. ಹೀಗಾಗಿ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡುತ್ತೇನೆ" ಎಂದು ಹೇಳಿದರು.

"ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕರು ಎಂದು ಎನಿಸಿಕೊಂಡವರು ಈ ಕಾರ್ಯಕ್ರಮಕ್ಕೆ ಆಗಮಿಸಬೇಕು. ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಜನರನ್ನು ಕರೆತನ್ನಿ ಎಂದು ಹೇಳುವುದಿಲ್ಲ. ನೂರು ಜನರನ್ನು ಕರೆದುಕೊಂಡು ಬಂದರೂ ಸಾಕು. ಕಾರ್ಯಕ್ರಮ ನಡೆಯುವ ಜಾಗಗಳಿಗೆ ಭೇಟಿ ನೀಡಿ ಪೂರ್ವ ಸಿದ್ಧತೆ ಪರಿಶೀಲನೆ ಮಾಡುತ್ತಿದ್ದೇನೆ. ಮಂಗಳವಾರ (ಇಂದು) ಎಲ್ಲಾ ಸಿದ್ಧತೆ ಪೂರ್ಣಗೊಳ್ಳಲಿದೆ" ಎಂದು ತಿಳಿಸಿದರು.

ಕಾರ್ಯಕ್ರಮಗಳ ವಿವರದ ಬಗ್ಗೆ ಕೇಳಿದಾಗ, "26ರಿಂದ ಅಧಿಕೃತ ಕಾರ್ಯಕ್ರಮ ಆರಂಭವಾಗಲಿದೆ. 26ರಂದು ಬೆಳಗ್ಗೆ ಕೆಲವು ಸ್ಥಳಗಳಲ್ಲಿ ಉದ್ಘಾಟನಾ ಕಾರ್ಯಕ್ರಮಗಳಿವೆ. 1924ರಲ್ಲಿ ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ ಡಿ. 26ರ ಮಧ್ಯಾಹ್ನ 3 ಗಂಟೆಗೆ ನಡೆದಿತ್ತು. 26ರಂದು ಅದೇ ಸಮಯಕ್ಕೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. 27ರಂದು ಬೆಳಗ್ಗೆ 10.30ಕ್ಕೆ ಸರ್ಕಾರದ ವತಿಯಿಂದ ಸುವರ್ಣಸೌಧ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು. ಅಂದು ಸುವರ್ಣ ಸೌಧದಲ್ಲಿ  ಫೋಟೋ ಸೆಷನ್, ಭೋಜನ ಕೂಟವಿದೆ. 27ರಂದು ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದೆ" ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು