LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ಕೊರತೆ ನೀಗಿಸಿ ಮಾರಾಟ ಮಾಡುತ್ತಿದೆ: ಸಚಿವ ಕೆ.ಜೆ.ಜಾರ್ಜ್

ಚಿಕ್ಕಬಳ್ಳಾಪುರ: ಕಳೆದ ವರ್ಷ ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಎದುರಾಗಿದ್ದರಿಂದ ಬೇರೆರಾಜ್ಯಗಳಿಂದ ವಿದ್ಯುತ್ ಖರೀದಿಸಿ ವಿದ್ಯುತ್ಪೂರೈಕೆ ಮಾಡುವಂತಹ ಪರಿಸ್ಥಿತಿ ಉಂಟಾಗಿತ್ತು, ಅಲ್ಲದೆ ಉತ್ತರಪ್ರದೇಶ ಮತ್ತು ಪಂಜಾಬ್ ರಾಜ್ಯಗಳಿಂದ ವಿದ್ಯುತ್ ಶಕ್ತಿಯನ್ನು ಬೇಸಿಗೆಯಲ್ಲಿ ಸಾಲವಾಗಿ ಪಡೆದು ಮರು ದಿನಗಳಲ್ಲಿ ವಾಪಸ್ಸು ಮಾಡುವ ಒಪ್ಪಂದದ ಮೇರೆಗೆ ವಿದ್ಯುತ್ ಪಡೆಯಲಾಗಿತ್ತು.

ಅಂತಹ ಸಂಕಷ್ಠದಪರಿಸ್ಥಿತಿಯನ್ನು ಸರ್ಕಾರ ಸಮರ್ಥವಾಗಿ ಎದುರಿಸಿ ರೈತರಿಗೆ, ನಾಗರಿಕರಿಗೆ, ಕೈಗಾರಿಕೆಗಳಿಗೆವಿದ್ಯುತ್ ಪೂರೈಸುವ ಕಾರ್ಯವನ್ನು ಮಾಡಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಾಗಿ ಬೇರೆ ರಾಜ್ಯಗಳಿಗೆ ಪೂರೈಸುವ ಸ್ಥಿತಿಗೆ ತಲುಪಿದ್ದೇವೆ ಎಂದು ಇಂದನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ಅವರು ಚಿಕ್ಕಬಳ್ಳಾಫುರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ ಕಳೆದ ವರ್ಷ ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಎದುರಾಗಿದ್ದರಿಂದ ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿಸಿ ವಿದ್ಯುತ್ ಪೂರೈಕೆ ಮಾಡುವಂತಹ ಪರಿಸ್ಥಿತಿ ಉಂಟಾಗಿತ್ತು, ಅಲ್ಲದೆ ಉತ್ತರ ಪ್ರದೇಶ ಮತ್ತು ಪಂಜಾಬ್ ರಾಜ್ಯಗಳಿಂದ ವಿದ್ಯುತ್ ಶಕ್ತಿಯನ್ನು ಬೇಸಿಗೆಯಲ್ಲಿ ಸಾಲವಾಗಿ ಪಡೆದು ಮರು ದಿನಗಳಲ್ಲಿ ವಾಪಸ್ಸು ಮಾಡುವ ಒಪ್ಪಂದದ ಮೇರೆಗೆ ವಿದ್ಯುತ್ ಪಡೆಯಲಾಗಿತ್ತು.

ವಿದ್ಯುತ್ ಉಳಿತಾಯ ಮಾಡಿ ಸೇಲ್ ಮಾಡುವ ಸ್ತಿತಿಗೆ ತಲುಪಿದ್ದೇವೆ ನಮ್ಮ ಸರ್ಕಾರ ಕುಸುಮ ಸೌರ ವಿದ್ಯುತ್ ಯೋಜನೆಯನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮುಂದಾಗಿ ಸಹಾಯಧನವನ್ನು ಹೆಚ್ಚಿಸಿದೆ. ಈ ಯೋಜನೆಯು ಅನುಷ್ಠಾನಗೊಂಡಲ್ಲಿ ರೈತರ ವಿದ್ಯುತ್ ಬೇಡಿಕೆಯ ಎಲ್ಲ ಸಮಸ್ಯೆಗಳು ಪರಿಹಾರವಾಗಲಿದೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ 871 ಎಕರೆ ಜಾಗವನ್ನು ಗುರ್ತಿಸಿ ನೀಡುವಂತೆ ತಿಳಿಸಲಾಗಿದೆ. ಈ ಪೈಕಿ ಈಗಾಗಲೇ 240 ಎಕರೆ ಜಾಗವನ್ನು ನೀಡಲಾಗಿದೆ. ಈಜಾಗದಲ್ಲಿ ಮೊದಲನೆ ಹಂತದಲ್ಲಿ 18 ಉಪ ಕೇಂದ್ರಗಳಿಂದ 137 ಮೆಗಾವ್ಯಾಟ್ ಹಾಗೂ 2ನೇ ಹಂತದಲ್ಲಿ 6 ಉಪಕೇಂದ್ರಗಳಿಂದ 37 ಮೆಗಾವ್ಯಾಟ್ ವಿದ್ಯುತ್‍ನ್ನು ಇಲ್ಲಿಯೇ ಉತ್ಪಾದಿಸಿ ಜಿಲ್ಲೆಯಲ್ಲಿ ಒಟ್ಟು 174 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುವುದು. ಈ ರೀತಿ ಉತ್ಪಾದನೆಯಾದ ವಿದ್ಯುತ್ ನ್ನು ವಿದ್ಯುತ್ ಉಪ ಕೇಂದ್ರದಿಂದ 500 ಮೀಟರ್ ಅಂತದ ಸ್ಥಳೀಯ ರೈತರಿಗೆ, ಸರ್ಕಾರಿ ಶಾಲೆ, ಅಂಗನವಾಡಿಗಳು ಹಾಗೂ ಇತರ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ಅನ್ನು ಪೂರೈಸಲಾಗುವುದು.

ಇನ್ನು ಇದೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ಕ್ಕೆ ಆಗಮಿಸಿದ್ದ ಇಂದಿನ ಸಚಿವರಿಗೆ ರೈತ ಸಂಘಟನೆಗಳು ರೈತರಿಗೆ ಹಾಕುವ ಟಿಸಿಗಳಿಗೆ ಅಧಿಕ ಹಣ ವಸೂಲಿ ಮಾಡುತ್ತಿರುವುದನ್ನ ನಿಲ್ಲಿಸಬೇಕೆಂದು ಮನವಿ ಸಲ್ಲಿಸಿದರೆ ವಿದ್ಯುತ್ ಗುತ್ತಿಗೆ ನೌಕರರು ಇಲಾಖೆ ನಮಗೆ ನೀಡಬೇಕಿರುವ ಬಿಲ್ ಬಾಕಿಯನ್ನು ಪಾವತಿಸುವಂತೆ ಆದೇಶ ಮಾಡಲು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಗೌರಿಬಿದನೂರು ಶಾಸಕ ಕೆ.ಹೆಚ್ ಪುಟ್ಟಸ್ವಾಮಿ ಗೌಡ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬಿಳಗಿ, ತಾಂತ್ರಿಕ ನಿರ್ದೇಶಕ ಹೆಚ್.ಜೆ.ರಮೇಶ್, ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು