LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕಾನೂನಾತ್ಮಕ ಸಭೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಬಗ್ಗೆ ಸಿಎಂ ಪ್ರತಿಕ್ರಿಯೆ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಕಾನೂನಾತ್ಮಕವಾಗಿ ಮಾಡುತ್ತಿದ್ದೇನೆ. ಯಾರದ್ದೋ ಹೇಳಿಕೆ ಆಧರಿಸಿ ಸಭೆ ಮಾಡಲು ಆಗುವುದಿಲ್ಲ. ಸಭೆ ಮುಂದೂಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದರರು ಆಗಿರುವ ರಾಜವಂಶಸ್ಥ ಯದುವೀರ್ ಹೇಳಿಕೆ ಮುಖ್ಯವೋ ಕಾನೂನು ಮುಖ್ಯವೋ? ನಾನು ಕಾನೂನು ಪ್ರಕಾರವೇ ಇವತ್ತಿನ ಸಭೆ ಮಾಡುತ್ತಿದ್ದೇನೆ. ಕೋರ್ಟ್‍ನಲ್ಲಿ ತಡೆಯಾಜ್ಞೆ ತೆರವು ಆಗಿದ್ದಕ್ಕೆ ಸಭೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.

ಮುಡಾ ಮಾಜಿ ಆಯುಕ್ತ ದಿನೇಶ್ ಅಮಾನತು ವಿಚಾರ ಗೊತ್ತಿಲ್ಲ. 2009ರ ಹಿಂದಿನ ಬಡಾವಣೆಗೆ 50:50 ಬದಲಿ ನಿವೇಶನ ಅನ್ವಯ ಆಗುವುದಿಲ್ಲ. ಈ ಅಂಶ ಉಲ್ಲೇಖದ ಬಗ್ಗೆ ನನಗೆ ಮಾಹಿತಿ ಇಲ್ಲ. ಮುಡಾ ಆದೇಶದ ಅಂಶಗಳು ಏನು ಎಂಬುದು ಸಹ ಗೊತ್ತಿಲ್ಲ.ಗೊತ್ತಿಲ್ಲದನ್ನು ನಾನು ಹೇಗೆ ವಿವರವಾಗಿ ಹೇಳಲಿ. ಆದೇಶದಲ್ಲಿ ಏನಿದೆ ಎಂದು ನೋಡಿಕೊಂಡು ಮಾತನಾಡುತ್ತೇನೆ ಎಂದು ಹೇಳಿದರು.

ಸರ್ಕಾರಕ್ಕೆ ಕೊರೊನಾ ಹಗರಣದ ಮಧ್ಯಂತರ ವರದಿ ಸಲ್ಲಿಕೆ ವಿಚಾರವಾಗಿ ಮಾತನಾಡಿದ ಅವರು, ಮುಂದಿನ ಸಚಿವ ಸಂಪುಟದ ಮುಂದೆ ವರದಿ ಮಂಡಿಸುತ್ತೇನೆ. ಸಂಪುಟದಲ್ಲಿ ಚರ್ಚೆ ಮಾಡಿ ಮುಂದಿನ ತೀರ್ಮಾನ ಹೇಳುತ್ತೇನೆ. ವರದಿಯಲ್ಲಿ ಏನಿದೆ ಎಂಬುದನ್ನು ನಾನು ನೋಡಿಲ್ಲ. ಎಷ್ಟು ಪ್ರಮಾಣದ ಭ್ರಷ್ಟಾಚಾರ ಆಗಿದೆ ಎಂಬುದು ಗಮನಕ್ಕೆ ಬಂದಿಲ್ಲ. ನನ್ನ ಗಮನಕ್ಕೆ ಬರದೆ ಸುಧಾಕರ್‍ಗೆ ಮಾಹಿತಿ ಕೊಟ್ಟವರು ಯಾರು? ಕುಂಬಳಕಾಯಿ ಕಳ್ಳ ಅಂದ್ರೆ ಏಕೆ ಹೆಗಲು ಮುಟ್ಟಿಕೊಳ್ಳಬೇಕು? ಕೆ.ಸುಧಾಕರ್‍ಗೆ ಸುಳ್ಳು ವರದಿ ಎಂದು ಹೇಗೆ ಗೊತ್ತಾಗುತ್ತದೆ?. ಸುಧಾಕರ್ ತಪ್ಪು ಮಾಡಿರುವುದು ಮಾನಸಿಕವಾಗಿ ಗೊತ್ತಿದೆ. ಹೀಗಾಗಿ ಅವನು ಆ ರೀತಿ ಮಾತನಾಡುತ್ತಿದ್ದಾನೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಆಗದ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ, ಮಾಹಿತಿ ಪಡೆಯುತ್ತೇನೆ. ಆದರೆ, ನಾವು ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ. ಮಾಹಿತಿ ಪಡೆದು ಚರ್ಚೆ ಮಾಡ್ತೇನೆ ಎಂದು ತಿಳಿಸಿದರು.ಮಾಜಿ ಸಚಿವ ಪಕ್ಷದ ಹಿರಿಯ ಮುಖಂಡ ಆರ್.ವಿ.ದೇಶಪಾಂಡೆ ಸಿಎಂ ಸಿದ್ದರಾಮಯ್ಯ ಮನಸು ಮಾಡಿದರೆ ನನ್ನನ್ನು ಮುಖ್ಯಮಂತ್ರಿ ಮಾಡಬಹುದು ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಸಿಎಂ ಮಾಡುವವರು ಯಾರು? ಹೈಕಮಾಂಡ್ ಹಾಗೂ ಶಾಸಕರು ಹಾಗಾಗಿ ನಾನು ಹೇಗೆ ಮಾಡಲಿ ಎಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ನಾನು ಯಾವುದೇ ಆತಂಕದಲ್ಲಿ ಇಲ್ಲ. ಎಂದಿನಂತೆಯೇ ಇದ್ದೇನೆ. ನನ್ನನ್ನು ನೋಡಿದರೆ ತಿಳಿಯುವುದಿಲ್ಲವೇ ಮುಡಾ ಬಗ್ಗೆ ಬಿಜೆಪಿಯವರು ಸುಳ್ಳು ಹೇಳಿ ಹೇಳಿ ಅವರಿಗೆ ನಾನು ಆತಂಕದಲ್ಲಿದ್ದೇನೆ ಎಂದು ಹೇಳುತ್ತಿದ್ದಾರೆ ಎಂದರು.ಚಾಮುಂಡಿ ಬೆಟ್ಟಕ್ಕೆ ಬಂದಿದ್ದೇನೆ. ಚಾಮುಂಡೇಶ್ವರಿ ದೇವಿ ದರ್ಶನ ಪಡೆಯುತ್ತೇನೆ. ಬೆಟ್ಟಕ್ಕೆ ಬಂದ ಮೇಲೆ ದರ್ಶನ ಮಾಡದಿರಲು ಸಾಧ್ಯವೇ ಎಂದು ಸುದ್ದಿಗಾರರ ಪರಶ್ನೆಗೆ ತಿರುಗೇಟು ನೀಡಿದರು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು