LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಕಾನ್‍ಸ್ಟೇಬಲ್ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ

ಬೆಂಗಳೂರು: ವಿಧವೆ ಮದುವೆಯಾಗಿದ್ದ ಪೊಲೀಸ್ ಕಾನ್‍ಸ್ಟೇಬಲ್ ವಿರುದ್ಧವೇ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ.ಶೇಷಾದ್ರಿಪುರಂ ಠಾಣೆ ಕಾನ್‍ಸ್ಟೇಬಲ್ ಮನೋಜ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿದ್ದು, ಪ್ರಕರಣ ದಾಖಲಿಸಿರುವ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

ಕಳೆದ 2016 ರಲ್ಲಿ ಮಹಿಳೆಯ ಪತಿ ಕೊಲೆಯಾಗಿದ್ದು, ಈ ಸಂಬಂಧ ಶೇಷಾದ್ರಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆಗ ಆರೋಪಿ ಮನೋಜ್ ಶೇಷಾದ್ರಿಪುರಂ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿದ್ದ. ಪತಿಯ ಕೊಲೆ ಪ್ರಕರಣದ ಸಲುವಾಗಿ ಆರೋಪಿಗಳಿಗೆ ಸಮನ್ಸ್ ಜಾರಿಯಾಗಿತ್ತು. 2019 ರಲ್ಲಿ ಸಮನ್ಸ್ ಕಾಪಿ ಕೊಡಲು ಶೇಷಾದ್ರಿಪುರಂ ಠಾಣೆಗೆ ಮಹಿಳೆ ತೆರಳಿದ್ದರು. ಆ ಸಂದರ್ಭದಲ್ಲಿ ಮಹಿಳೆಯ ಫೋನ್‍ನಂಬರ್ ಪಡೆದಿದ್ದ ಕಾನ್ಸ್‍ಟೇಬಲ್ ಮನೋಜ್ ನಂತರ ದಿನಗಳಲ್ಲಿ ಆಕೆಯೊಂದಿಗೆ ಸಲುಗೆ ಬೆಳೆಸಿ ಇಬ್ಬರು 2024ರ ನವೆಂಬರ್ 28ರಂದು ರಿಜಿಸ್ಟರ್ ಮದುವೆಯಾಗಿದ್ದರು. ಈ ಸಂದರ್ಭದಲ್ಲಿ ಮನೋಜ್ ಕುಟುಂಬದವರು ಇದನ್ನು ವಿರೋಧಿಸಿದ್ದರು.

ಇತ್ತೀಚೆಗೆ ಬರುಬರುತ್ತಾ ಮನೋಜ್ ಮಹಿಳೆಗೆ ಕಿರುಕುಳ ನೀಡುತ್ತಾ ಅವಳ ಮೇಲೆ ಹಲ್ಲೆ ನಡೆಸಿದ್ದು, ಇದಾದ ನಂತರ ಆತನ ಮೊಬೈಲ್‍ನಲ್ಲಿ ಬೇರೆ ಮಹಿಳೆಯೊಂದಿಗೆ ಇಬ್ಬರು ಒಟ್ಟಿಗೆ ಇರುವುದು ಬೆಳಕಿಗೆ ಬಂದಿದೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ನಡೆಸಿದ ಪರಿಣಾಮ ಆಕೆ ವರದಕ್ಷಿಣೆ ಕಿರುಕುಳ ಹಾಗೂ ತನಗೆ ದೈಹಿಕ ಹಿಂಸೆ ನೀಡುತ್ತಿರುವುದಾಗಿ ದೂರು ನೀಡಿದ್ದಾಳೆ.
ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು