LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಕಾಮಗಾರಿಗಳನ್ನು ಒಡೆದು ಹಾಕುವುದು ಕ್ರಿಮಿನಲ್ ಅಪರಾಧ: ಶ್ರೀನಿವಾಸ್

ಕನಕಪುರ: ನರೇಗಾ ಯೋಜನೆಯಲ್ಲಿ ಅನಾವಶ್ಯಕವಾಗಿ ಕಾಮಗಾರಿಗಳನ್ನು ಕೈಗೊಂಡು ಒಡೆದು ಹಾಕುವುದು ಕ್ರಿಮಿನಲ್ ಅಪರಾಧವಾಗಿದ್ದು, ಕಾಮಗಾರಿ ಒಡೆದು ಹಾಕಿರುವವರು ಮರು ನಿರ್ಮಾಣ ಮಾಡಬೇಕು,ಇಲ್ಲ ಸರ್ಕಾರಕ್ಕೆ ಹಣವಾಪಸ್ ಕಟ್ಟಬೇಕು ಎಂದು ನರೇಗಾ ಜಿಲ್ಲಾ ಸಂಯೋಜಕ ಶ್ರೀನಿವಾಸ್ ಸೂಚನೆ ನೀಡಿದರು.

ತಾಲೂಕಿನ ಕಸಬಾ ಹೋಬಳಿಯ ನಾರಾಯಣಪುರ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆದ 2023-2024 ನೇ ಸಾಲಿನ ಸಾಮಾಜಿಕ ಲೆಕ್ಕಪರಿಶೋಧನಾ ವಿಶೇಷ ಗ್ರಾಮ ಸಭೆಯಲ್ಲಿ ವರದಿಯನ್ನು ಮಂಡಿಸಿ ಮಾತನಾಡಿದ ಅವರು ಕೆಲವು ಫಲಾನುಭವಿಗಳು ಅನಾವಶ್ಯಕವಾಗಿ ಕಾಮಗಾರಿಗಳನ್ನು ಕೈಗೊಂಡು ನಂತರ ಅದನ್ನು ಒಡೆದು ಹಾಕಿದ್ದಾರೆ ಈ ರೀತಿ ಹಣ ಫೋಲು ಮಾಡಿದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲು ಅವಕಾಶ ಇದ್ದು ಹಾಗಾಗಿ ಕಾಮಗಾರಿ ಒಡೆದು ಹಾಕಿರುವವರು ಮರು ನಿರ್ಮಾಣ ಮಾಡಬೇಕು ಇಲ್ಲದಿದ್ದರೆ ಸರ್ಕಾರಕ್ಕೆ ಹಣ ಮರುಪಾವತಿ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.

ಗ್ರಾ. ಪಂ. ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಲ್ಲಿ 849 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಗ್ರಾ. ಪಂ. 671 ಕಾಮಗಾರಿಯಿಂದ 2.13.86.698 ರೂಪಾಯಿ ಹಣ ಖರ್ಚಾಗಿದೆ,ಅರಣ್ಯ ಇಲಾಖೆ 23 ಕಾಮಗಾರಿಗಳಿಂದ 23,48.344 ಖರ್ಚು,ತೋಟಗಾರಿಕೆ ಇಲಾಖೆಯ 71 ಕಾಮಗಾರಿಳಿಂದ 7,45,538 ಖರ್ಚಾಗಿದೆ ಕೃಷಿ ಇಲಾಖೆ ಯ 10 ಕಾಮಗಾರಿಗಳಿಂದ 2.76.559 ರೂಪಾಯಿಖರ್ಚಾಗಿದೆ,ಒಟ್ಟಾರೆಯಾಗಿ 849 ಕಾಮಗಾರಿಗಳನ್ನು ಕೈಗೊಂಡು 2.65.19151 ಖರ್ಚಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಇಂಜಿನಿಯರ್ ಶಿವಪ್ರಸಾದ್ ಮಾತನಾಡಿ ನರೇಗಾ ಯೋಜನೆಯಲ್ಲಿ ರೈತರಿಗೆ ಅನುಕೂಲವಾಗುವ ಸಾಕಷ್ಟು ಕಾರ್ಯಕ್ರಮಗಳಿದ್ದು ರೈತರು ತಮಗೆ ಅನುಕೂಲವಾಗುವ ಕಾಮಗಾರಿಗಳನ್ನು ಕೈಗೊಳ್ಳಬೇಕು,ಅನಾವಶ್ಯಕವಾಗಿ ಯಾವುದೇ ಕಾಮಗಾರಿಗಳನ್ನು ಕೈಗೊಂಡು ಸರ್ಕಾರದ ಹಣವನ್ನು ಪೋಲು ಮಾಡಬೇಡಿ ಎಂದು ಸಲಹೆಯನ್ನು ನೀಡಿದರು.

ನೂಡಲ್ ಅಧಿಕಾರಿಯಾದ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಮಧುಮಾಲ, ಅಭಿವೃದ್ಧಿ ಅಧಿಕಾರಿ ಮಹಾಂತೇಶ್, ಗ್ರಾಮ ಪಂಚಾಯತಿ ಅಧ್ಯಕ್ಷ ಚಾಮುಂಡಿ, ಉಪಾಧ್ಯಕ್ಷೆ ಗಿರಿಜಮ್ಮ, ಸದಸ್ಯರಾದ ರೇಣುಕಪ್ಪ, ಕಮಲಮ್ಮ, ಮಾಜಿ ಅಧ್ಯಕ್ಷ ಗುರುರಾಜ, ಎಸ್ ಡಿ ಎ ಸುರೇಶ್, ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು ಸಿಬ್ಬಂದಿಗಳು ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು