LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕಾರ್ತಿಕ ಸಂಭ್ರಮೋತ್ಸವದಲ್ಲಿ ಸಾಧಕರಿಗೆ ಸನ್ಮಾನ

ಬೆಂಗಳೂರು: ಕನ್ನಡ ಜಾನಪದ ಪರಿಷತ್ ಗೋವಿಂದರಾಜನಗರ ಮತ್ತು ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರಗಳ ವತಿಯಿಂದ ಶ್ರೀ ರಾಮ ಭಜನಾ ಮಂದಿರ ಟ್ರಸ್ಟ್ ಮತ್ತು ವಿಜಯನಗರದ ಉದಯ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ವಿಜಯನಗರದ ಉದಯ ಕಾಲೇಜು ಸಭಾಂಗಣದಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ, ಜಾನಪದ ಕಾರ್ತಿಕ ಸಂಭ್ರಮ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಗುರುವಾರ ನಡೆಯಿತು.

ಶ್ರೀ ಅನಂತ ಭಾಗ್ವತ್, - ಸಂಗೀತ ಕ್ಷೇತ್ರ, ಶ್ರೀ ರವಿದಾಸ್ ಬಿಂಡಿಗನವಿಲೆ - ಮಾಧ್ಯಮ ಕ್ಷೇತ್ರ, ಡಾ. ಜಿ.ವೈ. ಪದ್ಮನಾಗರಾಜ್(ವ್ಯವಸ್ಥಾಪಕ ಸಂಪಾದಕರು, ಇಂದುಸಂಜೆ ಪತ್ರಿಕೆ) ಮಾಧ್ಯಮ ಕ್ಷೇತ್ರ, ಶ್ರೀಮತಿ ನೇತ್ರಾವತಿ ಮಂಜುನಾಥ್ - ನೃತ್ಯ ಕ್ಷೇತ್ರಶ್ರೀ ಹೆಚ್.ಕೆ. ಪಾಪಣ್ಣ ಜಾನಪದ ಕ್ಷೇತ್ರ, ಶ್ರೀಮತಿ ನಾಗವೇಣಿ ಮುತ್ತವ್ವನವರ - ಶಿಕ್ಷಣ ಕ್ಷೇತ್ರ, ಶ್ರೀ ವೆಂಕಟರಾಜು ಸಂಗೀತ ಕ್ಷೇತ್ರ, ಶ್ರೀ ಕುವರ ಯಲ್ಲಪ್ಪ ಸಾಹಿತ್ಯ ಕ್ಷೇತ್ರ, ಡಾ|| ನೈಲಾ - ವೈದ್ಯಕೀಯ ಕ್ಷೇತ್ರ, ಶ್ರೀಮತಿ ಸಂಗೀತ ಆರ್. - ಯೋಗ ಶಿಕ್ಷಣ ಕ್ಷೇತ್ರ, ಶ್ರೀ ಅಂಜನಪ್ಪ ಹೆಚ್. - ಜಾನಪದ ಕ್ಷೇತ್ರ, ವೇಣುಗೋಪಾಲ್ ಪರಿಸರ - ಪರಿಸರ ಕ್ಷೇತ್ರದ ಒಟ್ಟು ಹನ್ನೆರಡು ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕನ್ನಡ ಜಾನಪದ ಪರಿಷತ್ತು ರಾಜ್ಯಾಧ್ಯಕ್ಷರು ಐ.ಸಿ.ಸಿ.ಆರ್ ಭಾರತ ಸರ್ಕಾರದ ಸದಸ್ಯರಾದ ಜಾನಪದ ಎಸ್ ಬಾಲಾಜಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ರಮಣಶ್ರೀ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ನಾಡೋಜ ಷಡಕ್ಷರಿ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ನಡೆಸಿಕೊಟ್ಟರು. ಕರ್ನಾಟಕ ವಿಚಾರ ವೇದಿಕೆ ಅಧ್ಯಕ್ಷರಾದ ಪಾಲನೇತ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಸತ್ಯಮೂರ್ತಿ ಸ್ವಾಗತ ಕೋರಿದರು, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ರ. ನರಸಿಂಹಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಚಾರ ವೇದಿಕೆ ಅಧ್ಯಕ್ಷರಾದ ಪಾಲನೇತ್ರ, ಕನ್ನಡ ಜಾನಪದ ಪರಿಷತ್ತು ಕೇಂದ್ರ ಜಿಲ್ಲಾಧ್ಯಕ್ಷರಾದ ಡಾ. ರಿಯಾಜ್ ಪಾಷ, ಭಾರತ್ ವಿಕಾಸ್ ಪರಿಷತ್ ಅಧ್ಯಕ್ಷ ರಘುನಾಥ್ ಗೋವಿಂದರಾಜನಗರ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಉಮೇಶ್ ಕುಮಾರ್ ಶೆಟ್ಟಿ, ಉದಯ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಗಿರೀಶ, ಸಿನಿಮಾ ನಿರ್ದೇಶಕರು ಹಾಗೂ ನಾಟಕ ಅಕಾಡಮಿ ಸದಸ್ಯರಾದ ರವೀಂದ್ರನಾಥ್ ಸಿರಿವರ, ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಉಪ ಆಯುಕ್ತರಾದ ಪಿ. ರವೀಂದ್ರ, ಚೈತ್ರ ಸಂದೇಶ್ ಎಜುಕೇಷನಲ್ ಟ್ರಸ್ಟ್ ಸಂಸ್ಥಾಪಕ ಕಾರ್ಯದರ್ಶಿ ಸಂದೇಶ್, ಬೆಂಗಳೂರು ನಗರ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಅಂಬಿಕಾ ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿ. ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ನಾಡಿನ ಹೆಸರಾಂತ, ಅಂತರರಾಷ್ಟ್ರೀಯ ಗಾಯಕ ಸಂತವಾಣಿ ಸುಧಾಕರ್, ಕು. ದತ್ತಶ್ರೀ ಮತ್ತು ತಂಡದವರು ಜಾನಪದ ಗೀತ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಉದಯ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸ್ಥಳೀಯ ನಾಗರಿಕರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು