LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಾಲ್ತುಳಿತಕ್ಕೆ ಮಹಿಳೆ ಸಾವು ಪ್ರಕರಣ ಅಲ್ಲು ಅರ್ಜುನ್ ಬಿಡುಗಡೆ ಒಂದು ರಾತ್ರಿ ಜೈಲಲ್ಲಿ ಕಳೆದ ನಟ

ಅಮರಾವತಿ: `ಪುಷ್ಪ 2' ಪ್ರೀಮಿಯರ್ ಶೋ ವೇಳೆ ಚಿತ್ರಮಂದಿರದ ಬಳಿ ಕಾಲ್ತುಳಿತಕ್ಕೆ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಒಂದೇ ದಿನಕ್ಕೆ ಜೈಲಿನಿಂದ ಹೊರಬಂದ ನಟ ಅಲ್ಲು ಅರ್ಜುನ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.ನನ್ನ ಎಲ್ಲಾ ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಚಿಂತಿಸುವ ಏನೂ ಇಲ್ಲ. ನಾನು ಮತ್ತೊಮ್ಮೆ ಮೃತರ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಇದು ದುರದೃಷ್ಟಕರ ಘಟನೆಯಾಗಿದೆ. ನಡೆದಿದ್ದಕ್ಕಾಗಿ ನಾವು ವಿಷಾದಿಸುತ್ತೇವೆ ಎಂದು ನಟ ಮಾತನಾಡಿದ್ದಾರೆ.

ನಾನು ಕಾನೂನು ಪಾಲಿಸುವ ನಾಗರಿಕನಾಗಿದ್ದು, ತನಿಖೆಗೆ ಎಲ್ಲ ರೀತಿಯಲ್ಲೂ ಸಹಕರಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.ಹೈದರಾಬಾದ್‍ನ ಸಂಧ್ಯಾ ಥಿಯೇಟರ್‍ನಲ್ಲಿ ಡಿಸೆಂಬರ್ 4 ರಂದು ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಚಂಚಲಗುಡ ಜೈಲಿನಲ್ಲಿ ಒಂದು ರಾತ್ರಿ ಕಳೆದರು. ನಿನ್ನೆ ತಡರಾತ್ರಿಯವರೆಗೂ ಜಾಮೀನು ಆದೇಶದ ಪ್ರತಿಯನ್ನು ಅಧಿಕಾರಿಗಳು ಸ್ವೀಕರಿಸದ ಕಾರಣ ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದರೂ ಅವರನ್ನು ಬಿಡುಗಡೆ ಮಾಡಲಾಗಿರಲಿಲ್ಲ.

ಅಲ್ಲು ಅರ್ಜುನ್ ಬಂಧನವಾದ ಕೆಲವೇ ಗಂಟೆಗಳಲ್ಲಿ ಸಂತ್ರಸ್ತೆಯ ಪತಿ ಪ್ರಕರಣವನ್ನು ಹಿಂಪಡೆಯಲು ಸಿದ್ಧ ಎಂದು ಹೇಳಿದ್ದರು. `ನಾನು ಪ್ರಕರಣವನ್ನು ಹಿಂಪಡೆಯಲು ಸಿದ್ಧನಿದ್ದೇನೆ. ನನಗೆ ಬಂಧನದ ಬಗ್ಗೆ ತಿಳಿದಿರಲಿಲ್ಲ. ಅಲ್ಲು ಅರ್ಜುನ್ ಅವರಿಗೂ ನನ್ನ ಹೆಂಡತಿ ಸಾವನ್ನಪ್ಪಿರುವುದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದರು.

ಬ್ಲಾಕ್‍ಬಸ್ಟರ್ `ಪುಷ್ಪಾ 2: ದಿ ರೂಲ್' ನ ಪ್ರಥಮ ಪ್ರದರ್ಶನದಲ್ಲಿ ಸಾವಿರಾರು ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಥಿಯೇಟರ್ ಮುಂದೆ ನೆರೆದಿದ್ದರು. ಈ ವೇಳೆ ನೂಕುನುಗ್ಗಲಿನಿಂದಾದ ಕಾಲ್ತುಳಿತಕ್ಕೆ 35 ವರ್ಷದ ಮಹಿಳೆ ಸಾವನ್ನಪ್ಪಿದ್ದರು. ಅವರ ಎಂಟು ವರ್ಷದ ಮಗ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಘಟನೆಯ ನಂತರ, ಮಹಿಳೆಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ನಗರ ಪೆÇಲೀಸರು ಅಲ್ಲು ಅರ್ಜುನ್, ಅವರ ಭದ್ರತಾ ತಂಡ ಮತ್ತು ಥಿಯೇಟರ್ ಆಡಳಿತದ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‍ಎಸ್) ವಿವಿಧ ವಿಭಾಗಗಳ ಅಡಿಯಲ್ಲಿ ಚಿಕ್ಕಡಪಲ್ಲಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು