LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

'ಕುಡ್ಲ ನಮ್ದು ಊರು' ಟ್ರೇಲರ್ ಮತ್ತು ಆಡಿಯೋ ಬಿಡುಗಡೆ

ಬಹುತೇಕ ದಕ್ಷಿಣ ಕನ್ನಡ ಜಿಲ್ಲೆಯ ಕಡಲತಡಿಯ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಕುಡ್ಲ ನಮ್ದು ಊರು ಸಿನೆಮಾ ತೆರೆಗೆ ಬರಲು ತಯಾರಾಗುತ್ತಿದೆ. ಸದ್ಯ ಅಂತಿಮ ಹಂತದ ಪೋಸ್ಟ್            ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ಕುಡ್ಲ ನಮ್ದು ಊರು ಚಿತ್ರತಂಡ ಇದೀಗ ಸಿನೆಮಾದ ಟ್ರೇಲರ್ ಮತ್ತು ಆಡಿಯೋವನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾ. ಮ. ಹರೀಶ್, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ?ದ ಅಧ್ಯಕ್ಷ ಉಮೇಶ್ ಬಣಕಾರ್, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್ ಕೆ. ವಿಶ್ವನಾಥ್, ನಟ ಚೇತನ್ ರಾಜ್ (ಭಜರಂಗಿ ಚೇತನ್) ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಸಮಾರಂಭದಲ್ಲಿ ಹಾಜರಿದ್ದು, ಕುಡ್ಲ ನಮ್ದು ಊರು ಸಿನೆಮಾದ ಟ್ರೇಲರ್ ಮತ್ತು ಹಾಡುಗಳನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಕೃತಾರ್ಥ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ನಿರ್ಮಾಣವಾಗಿರುವ ಕುಡ್ಲ ನಮ್ದು ಊರು ಸಿನೆಮಾವನ್ನು ಯುವ ಪ್ರತಿಭೆ ದುರ್ಗಾಪ್ರಸಾದ್ (ಅಲೋಕ್) ಮತ್ತು ಆರ್ಯ ಡಿ. ಕೆ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ. ಯುವನಟ ದುರ್ಗಾಪ್ರಸಾದ್ ಕುಡ್ಲ ನಮ್ದು ಊರು? ಸಿನೆಮಾದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ಉಳಿದಂತೆ ರಮೇಶ್, ಪ್ರಕಾಶ್ ತುಮ್ಮಿನಾಡು, ಸ್ವರಾಜ್ ಶೆಟ್ಟಿ, ಶ್ರೇಯಾ ಶೆಟ್ಟಿ, ಅನಿಕಾ ಶೆಟ್ಟಿ, ನಯನ ಸಾಲಿಯಾನ್, ನಿರೀಕ್ಷಾ ಶೆಟ್ಟಿ, ದಿಲೀಪ್ ಕಾರ್ಕಳ, ಪ್ರಜ್ವಲ್ ಮೊದಲಾದವರು ಕುಡ್ಲ ನಮ್ದು ಊರು ಸಿನೆಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಕುಡ್ಲ ನಮ್ದು ಊರು ಸಿನೆಮಾದ ಟ್ರೇಲರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಚಿತ್ರದ ನಾಯಕ ನಟ ಕಂ ನಿರ್ದೇಶಕ ದುರ್ಗಾಪ್ರಸಾದ್ (ಅಲೋಕ್), ಸಿನೆಮಾದ ಟೈಟಲ್ಲೇ ಹೇಳುವಂತೆ, ಇದೊಂದು ಅಪ್ಪಟ ದಕ್ಷಿಣ ಕನ್ನಡದ ಕರಾವಳಿ ಸೊಗಡಿನ ಸಿನೆಮಾ.

ಇಡೀ ಸಿನೆಮಾವನ್ನು ಕರಾವಳಿ ಮತ್ತು ಅಲ್ಲಿನ ಜನ-ಜೀವನವನ್ನು ಹಿನ್ನೆಲೆಯಾಗಿ ಇಟ್ಟುಕೊಂಡು ತೆರೆಗೆ ತರಲಾಗುತ್ತಿದೆ. ಕರಾವಳಿ ಭಾಗದಲ್ಲಿ ನಡೆದ ಒಂದಷ್ಟು ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು, ಅದನ್ನು ಸಿನೆಮಾ ರೂಪದಲ್ಲಿ ತೆರೆಗೆ ತರುತ್ತಿದ್ದೇವೆ. 1990ರ ದಶಕದ ಹುಡುಗರ ಬಾಲ್ಯ, ಅವರ ಅನುಭವವನ್ನು ಈ ಸಿನೆಮಾ ನೆನಪಿಸುತ್ತದೆ. ಬಹುತೇಕ ಕರಾವಳಿ ಭಾಗದ ಸ್ಥಳೀಯ ಕಲಾವಿದರೇ ಈ ಸಿನೆಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇದು ಕರಾವಳಿಯ ಕಥೆಯಾದರೂ, ಕರ್ನಾಟಕದ ಎಲ್ಲಾ ಭಾಗದ ಜನರಿಗೂ ತಲುಪುವಂತಿದೆ. ಹಾಗಾಗಿ ಈ ಸಿನೆಮಾವನ್ನು ತುಳು ಭಾಷೆಯ ಬದಿಗೆ ಕನ್ನಡ ಭಾಷೆಯಲ್ಲೇ ನಿರ್ಮಿಸಿದ್ದೇವೆ. ಪ್ರೀತಿ, ಸ್ನೇಹ, ಆಕ್ಷನ್, ಕಾಮಿಡಿ ಹೀಗೆ ಎಲ್ಲಾ ಥರದ ಮನರಂಜನಾತ್ಮಕ ಅಂಶಗಳೂ ಈ ಸಿನೆಮಾದಲ್ಲಿದೆ ಎಂದು ಕುಡ್ಲ ನಮ್ದು ಊರು ಸಿನೆಮಾದ ಕಥಾಹಂದರದ ಬಗ್ಗೆ ವಿವರಣೆ ನೀಡಿದರು.

ಕುಡ್ಲ ನಮ್ದು ಊರು ಸಿನೆಮಾದ ಮತ್ತೊಬ್ಬ ನಟ ರಮೇಶ್ ಮಾತನಾಡಿ, ಈ ಸಿನೆಮಾದಲ್ಲಿ ನಾನು ನಾಯಕನ ತಮ್ಮನ ಪಾತ್ರದಲ್ಲಿ ಅಭಿನಯಿಸಿದ್ದೇನೆ. ದಾವಣಗೆರೆಯ ಮೂಲದ ಐಟಿ ಹಿನ್ನೆಲೆಯವನಾದರೂ, ಈ ಸಿನೆಮಾದ ಪಾತ್ರಕ್ಕಾಗಿ ದಕ್ಷಿಣ ಕನ್ನಡ ಶೈಲಿಯ ಕನ್ನಡವನ್ನು ಕಲಿಯಬೇಕಾಯಿತು. ಸಾಕಷ್ಟು ಅಡೆ-ತಡೆಗಳನ್ನು ಎದುರಿಸಿ ಈ ಸಿನೆಮಾವನ್ನು ಮಾಡಿ ಮುಗಿಸಿದ್ದೇವೆ. ಹಣಕಾಸಿನ ತೊಂದರೆಯಿಂದಾಗಿ ಮಧ್ಯದಲ್ಲಿ ಸಿನೆಮಾ ಚಿತ್ರೀಕರಣಕ್ಕೆ ತೊಂದರೆಯಾಗಿತ್ತು. ಕೊನೆಗೆ ಹೇಗೋ, ಅಂದುಕೊಂಡಂತೆ ಸಿನೆಮಾ ಮಾಡಿದ್ದೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕುಡ್ಲ ನಮ್ದು ಊರು ಸಿನೆಮಾದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ನಟಿ ಶ್ರೇಯಾ ಶೆಟ್ಟಿ ಮಾತನಾಡಿ, ನಾನು ಈ ಸಿನೆಮಾದಲ್ಲಿ ನಾಯಕಿಯ ಸೋದರಿಯ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಸಾಕಷ್ಟು ಎಮೋಶನ್ಸ್ ಇರುವಂಥ ಪಾತ್ರವಿದು. ಸಿನೆಮಾ ಕೂಡ ತುಂಬ ಸೊಗಸಾಗಿ ಮೂಡಿಬಂದಿದೆ ಎಂದರು.ಕುಡ್ಲ ನಮ್ದು ಊರು ಸಿನೆಮಾದಲ್ಲಿ ಮೂರು ಹಾಡುಗಳಿದ್ದು, ಈ ಹಾಡುಗಳಿಗೆ ನಿತಿನ್ ಶಿವರಾಮ್ ಸಂಗೀತ ಸಂಯೋಜಿಸಿದ್ದಾರೆ. ಸಿನೆಮಾಕ್ಕೆ ಶ್ರೀಶಾಸ್ತ ಹಿನ್ನೆಲೆ ಸಂಗೀತ, ಮಯೂರ್ ಆರ್. ಶೆಟ್ಟಿ ಛಾಯಾಗ್ರಹಣ, ನಿಶಿತ್ ಪೂಜಾರಿ ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. ಚಿತ್ರಕ್ಕೆ ರಕ್ಷಿತ್ ಎಸ್. ಜೋಗಿ ನೃತ್ಯ ಮತ್ತು ಚಂದ್ರು ಬಂಡೆ ಸಾಹಸ ಸಂಯೋಜಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಕುಡ್ಲ ನಮ್ದು ಊರು ಸಿನೆಮಾದ ಚಿತ್ರೀಕರಣ ನಡೆಸಲಾಗಿದೆ.

ಸದ್ಯ ಟ್ರೇಲರ್ ಮತ್ತು ಆಡಿಯೋ ಬಿಡುಗಡೆ ಮಾಡುವ ಮೂಲಕ ಕುಡ್ಲ ನಮ್ದು ಊರು ಸಿನೆಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಹೊಸವರ್ಷದ ಆರಂಭದಲ್ಲಿ ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ ಸಿನೆಮಾವನ್ನು ಬಿಡುಗಡೆ ಮಾಡಿ ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು