LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕುತೂಹಲದಲ್ಲಿ ದರ್ಶನ್, ನಾಗೇಂದ್ರ ಜಾಮೀನು

ಬೆಂಗಳೂರು: ಇಂದು ರೇಣುಕಾಸ್ವಾಮಿ ಹತ್ಯೆ ಆರೋಪಿ ನಟ ದರ್ಶನ್ ಹಾಗೂ ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪಿ ಮಾಜಿ ಸಚಿವ ನಾಗೇಂದ್ರ ಅವರ ಜಾಮೀನು ಸಂಬಂಧಪಟ್ಟಂತೆ ತೀರ್ಪು ಹೊರಬೀಳಲಿದ್ದು, ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್‍ನಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರ ಜಾಮೀನು ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ. ಬಹುತೇಕ ಮಧ್ಯಾಹ್ನದ ವೇಳೆಗೆ ಜಾಮೀನು ತೀರ್ಪು ಬರುವ ಸಾಧ್ಯತೆಯಿದೆ. ಹಾಗಾಗಿ ಇವತ್ತು ಸಿಟಿ ಸಿವಿಲ್ ನ್ಯಾಯಾಲಯದತ್ತ ಚಿತ್ತ ನೆಟ್ಟಿದೆ.
ಈಗಾಗಲೇ ನಾಗೇಂದ್ರ ವಿರುದ್ಧ ಇಡಿ ಅಧಿಕಾರಿಗಳು ಪ್ರಾಸಿಕ್ಯೂಷನ್‍ಗೆ ಅನುಮತಿ ಪಡೆದಿದ್ದಾರೆ.

ಸದ್ಯ ಸೆಂಟ್ರಲ್ ಜೈಲಲ್ಲಿರೋ ಮಾಜಿ ಸಚಿವರಿಗೆ ಬೇಲ್ ಸಿಕ್ಕಿದರಷ್ಟೇಪರಪ್ಪನ ಅಗ್ರಹಾರದಿಂದ ರಿಲೀಸ್ ಆಗಲಿದ್ದಾರೆ.ಮತ್ತೊಂದೆಡೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ತೀರ್ಪು ಸಹ ಇಂದೇ ಪ್ರಕಟವಾಗಲಿದ್ದು, ಅತ್ತ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ತೀವ್ರವಾಗಿ ಚಡಪಡಿಸುತ್ತಿದ್ದಾರೆ ಎನ್ನಲಾಗಿದೆ.

ನಿನ್ನೆ ರಾತ್ರಿಯಿಂದಲೇ ಜಾಮೀನು ತೀರ್ಪಿಗೆ ಸಂಬಂಧಪಟ್ಟಂತೆ ರಾತ್ರಿಯಿಡಿ ನಿದ್ರೆಯಿಲ್ಲದೆ ಚಡಪಡಿಸಿರುವ ದರ್ಶನ್ ಇಂದು ಬೆಳಿಗ್ಗೆ ಉಪಹಾರವನ್ನು ಸೇವಿಸಿದೆ ಜೈಲುಸಿಬ್ಬಂದಿಯನ್ನು ಪದೇ ಪದೇ ಜಾಮೀನು ಅರ್ಜಿ ವಿಚಾರವಾಗಿ ಏನಾಯಿತು ಎಂದು ಪ್ರಶ್ನೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಜೈಲು ಸಿಬ್ಬಂದಿ ಮಾತ್ರ ತಮಗೇನು ತಿಳಿಯದು ಎಂಬ ಉತ್ತರ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು