LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕುತೂಹಲ ಮೂಡಿಸಿದೆ "ನಾಟ್ ಔಟ್" ಟ್ರೇಲರ್ ಡಾರ್ಕ್ ಹ್ಯೂಮರ್ ಕಾಮಿಡಿ ಜಾನರ್ ನ ಈ ಚಿತ್ರ ಜುಲೈ 19 ರಂದು ತೆರೆಗೆ

ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ.ರವಿಕುಮಾರ್ ಹಾಗೂ ಶಂಶುದ್ದೀನ್ ಎ ನಿರ್ಮಿಸಿರುವ, ಅಂಬರೀಶ್ ಎಂ ನಿರ್ದೇಶನದ ಹಾಗು ಅಜಯ್ ಪೃಥ್ವಿ, ರಚನಾ ಇಂದರ್ ನಾಯಕ, ನಾಯಕಿಯಾಗಿ ನಟಿಸಿರುವ "ನಾಟ್ ಔಟ್" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ನಟ ಶ್ರೀನಗರ ಕಿಟ್ಟಿ, ನಿರ್ದೇಶಕ ಸಿಂಪಲ್ ಸುನಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಕೇವಲ ನಾಲ್ಕು ಗಂಟೆಗಳಲ್ಲಿ ಮಗುವನ್ನು ಆಂಬುಲೆನ್ಸ್ ನಲ್ಲಿ ಕರೆತಂದ ಚಾಲಕ ಹನೀಫ್ ಮೂವರು ಸೇರಿ ಟ್ರೇಲರ್ ಬಿಡುಗಡೆ ಮಾಡಿ, ಚಿತ್ರಕ್ಕೆ ಶುಭ ಕೋರಿದರು.

ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಮೊಟ್ಟಮೊದಲಬಾರಿಗೆ ಒಂದು ಹೊಸ ಯೋಜನೆಗೆ "ನಾಟ್ ಔಟ್" ಚಿತ್ರತಂಡ ಕೈ ಹಾಕಿದ್ದಾರೆ. ಪ್ರೇಕ್ಷಕರಿಗೆ ಸಿನಿಮಾದ ಗುಣಮಟ್ಟವನ್ನು ದೃಢೀ ಪಡಿಸುವ ಉದ್ದೇಶದಿಂದ. ಫಸ್ಟ್ ಆಫ್ ಸಿನಿಮಾ ಉಚಿತವಾಗಿ ಪ್ರೇಕ್ಷಕರಿಗೆ ನೋಡಲು ಅವಕಾಶ. ಸೆಕೆಂಡ್ ಹಾಫ್ ಸಿನಿಮಾ ನೋಡುವ ಕುತೂಹಲ ಇದರೆ ಮಧ್ಯಂತರದಲ್ಲಿ ಟಿಕೆಟ್ ಖರೀದಿ ಮಾಡಬೇಕಾಗುತ್ತದೆ. ಟ್ರೇಲರ್ ಬಿಡುಗಡೆ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

"ನಾಟ್ ಔಟ್" ಲಾಕ್ ಡೌನ್ ನಲ್ಲಿ ನಾನು ಬರೆದ ಕಥೆ ಎಂದು ಮಾತನಾಡಿದ ನಿರ್ದೇಶಕ ಅಂಬರೀಶ್, ನನ್ನ ಕಥೆಯನ್ನು ಮೆಚ್ಚಿ ರಾಷ್ಟ್ರಕೂಟ ಪಿಕ್ಚರ್ಸ್ ಅವರು ನಿರ್ಮಾಣಕ್ಕೆ ಮುಂದಾದರು. ಟೊರೊಂಟೊದಲ್ಲಿ ಅಭಿನಯ ಕಲಿತು ಬಂದಿರುವ ಅಜಯ್ ಪೃಥ್ವಿ, ರಚನಾ ಇಂದರ್, ರವಿಶಂಕರ್, ಕಾಕ್ರೋಜ್ ಸುಧೀ ಮುಖ್ಯಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಡಾರ್ಕ್ ಹ್ಯೂಮರ್ ಕಾಮಿಡಿ ಜಾನರ್ ನ ಚಿತ್ರವಾಗಿದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದರು.

ನನ್ನದು ಈ ಚಿತ್ರದಲ್ಲಿ ಆಂಬುಲೆನ್ಸ್ ಚಾಲಕನ ಪಾತ್ರ. ಚಿತ್ರ ತುಂಬಾ ಚೆನ್ನಾಗಿ ಮೂಡಿಬಂದಿದೆ. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. ಈ ಚಿತ್ರದ ನನ್ನ ಪಾತ್ರವನ್ನು ಎಲ್ಲಾ ಆಂಬುಲೆನ್ಸ್ ಚಾಲಕರಿಗೆ ಅರ್ಪಿಸುತ್ತಿದ್ದೇನೆ ಎಂದು ನಾಯಕ ಅಜಯ್ ಪೃಥ್ವಿ ತಿಳಿಸಿದರು.
ನನ್ನದು ಈ "ನಾಟ್ ಔಟ್" ನಲ್ಲಿ ನರ್ಸ್ ಪಾತ್ರ ಎಂದರು ರಚನಾ ಇಂದರ್. ಕಾಕ್ರೋಜ್ ಸುಧೀ, ಅಶ್ವಿನ್ ಹಾಸನ್, ಪ್ರಶಾಂತ್ ಸಿದ್ದಿ, ಸಲ್ಮಾನ್ ಮುಂತಾದ ಕಲಾವಿದರು ಹಾಗೂ ಕಾರ್ಯಕಾರಿ ನಿರ್ಮಾಪಕ ಕುಮಾರ್ ಚಿತ್ರದ ಕುರಿತು ಮಾಹಿತಿ ನೀಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು