LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಕುಲದಲ್ಲಿ ಕೀಳ್ಯಾವುದೋ' ಕ್ಲೈಮ್ಯಾಕ್ಸ್

ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶದ ಚಿತ್ರೀಕರಣ ರಾಮನಗರದ ಸಮೀಪ ಅದ್ದೂರಿಯಾಗಿ ನೆರವೇರಿತು.

ವಿನೋದ್ ಮಾಸ್ಟರ್ ಸಾಹಸ ನಿರ್ದೇಶನದಲ್ಲಿ ನಾಯಕ ಮಡೆನೂರ್ ಮನು, ನಾಯಕಿ ಮೌನ ಗುಡ್ಡಮನೆ, ಶರತ್ ಲೋಹಿತಾಶ್ವ, ಕರಿ ಸುಬ್ಬು, ಡ್ರ್ಯಾಗನ್ ಮಂಜು, ಸೀನ ಮುಂತಾದವರು ಸಾಹಸ ಸನ್ನಿವೇಶದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಬಿಡುವಿನ ವೇಳೆ ಚಿತ್ರತಂಡದ ಸದಸ್ಯರು ಸಿನಿಮಾ ಕುರಿತು ಮಾಹಿತಿ ನೀಡಿದರು.

ಹೆಸರೆ ಹೇಳುವಂತೆ 'ಕುಲದಲ್ಲಿ ಕೀಳ್ಯಾವುದೊ' ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ ಎಂದು ಮಾತಾನಾಡಿದ ನಿರ್ದೇಶಕ ರಾಮನಾರಾಯಣ್, ಹಿರಿಯ ನಿರ್ದೇಶಕ ಯೋಗರಾಜ್ ಭಟ್ ಅವರ ಮಾರ್ಗದರ್ಶನದಲ್ಲಿ ಸಂತೋಷ್ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರದ ಸಾಹಸ ಸನ್ನಿವೇಶದ ಚಿತ್ರೀಕರಣ ವಿನೋದ್ ಮಾಸ್ಟರ್ ಅವರ ಸಾಹಸ ನಿರ್ದೇಶನದಲ್ಲಿ ಅದ್ದೂರಿಯಾಗಿ ನಡೆಯುತ್ತಿದೆ. ಮಡೆನೂರ್ ಮನು, ಶರತ್ ಲೋಹಿತಾಶ್ವ, ಡ್ರ್ಯಾಗನ್ ಮಂಜು, ಕರಿಸುಬ್ಬು, ಮೌನ ಗುಡ್ಡೆಮನೆ, ಸ್ಥಳೀಯ ಪ್ರತಿಭೆ ಸೀನ ಮುಂತಾದವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಸೋನಾಲ್ ಮೊಂತೆರೊ ಅವರು ಚಿತ್ರದ ವಿಶೇಷಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣವಾಗಿದ್ದು, ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬರುತ್ತಿದೆ ಎಂದರು.ಶರತ್ ಲೋಹಿತಾಶ್ವ, ಕರಿಸುಬ್ಬು, ಡ್ರ್ಯಾಗನ್ ಮಂಜು, ಸೀನ, ಸಾಹಸ ನಿರ್ದೇಶಕ ವಿನೋದ್ ಮಾಸ್ಟರ್ ಹಾಗೂ ಛಾಯಾಗ್ರಾಹಕ ಮನು ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಚಿತ್ರಕ್ಕೆ ಕಥೆ ಬರೆದಿದ್ದು, ಗೀತರಚನೆಕಾರರಾಗಿ, ನಿರ್ದೇಶಕರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ನಿರ್ದೇಶನ ಮಾಡುತ್ತಿದ್ದಾರೆ. ಯೋಗರಾಜ್ ಭಟ್ ಹಾಗೂ ಜಯಂತ್ ಕಾಯ್ಕಿಣಿ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು ಮನೋಮೂರ್ತಿ ಸಂಗೀತ ನೀಡುತ್ತಿದ್ದಾರೆ. ಮಡೆನೂರ್ ಮನು, ಮೌನ ಗುಡ್ಡೆಮನೆ, ಯೋಗರಾಜ್ ಭಟ್, ಹರೀಶ್ ರಾಜ್, ಶರತ್ ಲೋಹಿತಾಶ್ವ, ತಬಲನಾಣಿ, ಸೋನಾಲ್ ಮೊಂತೆರೊ, ಕರಿಸುಬ್ಬು, ಡ್ಯಾಗನ್ ಮಂಜು, ಸೀನ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು