LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಕುಲದಲ್ಲಿ ಕೀಳ್ಯಾವುದೋ' ಚಿತ್ರ ಮುಹೂರ್ತ

ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ & ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಮುಹೂರ್ತ ಸಮಾರಂಭ ನವರಾತ್ರಿಯ ಶುಭ ಸಂದರ್ಭದಲ್ಲಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ನುಗ್ಗೇಹಳ್ಳಿ ಶ್ರೀವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.

ನಿರ್ಮಾಪಕಿ ವಿದ್ಯಾ ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಸಂತೋಷ್ ಕುಮಾರ್ ಎ.ಕೆ, ನಿರ್ದೇಶಕ ಕೆ.ರಾಮನಾರಾಯಣ್, ನಾಯಕ ಮಡೆನೂರು ಮನು ಹಾಗೂ ನಾಯಕಿ ಮೌನ ಗುಡ್ಡೆಮನೆ ಮುಂತಾದವರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಪ್ರಸ್ತುತ ಚಿತ್ರಕ್ಕೆ ರಾಮನಗರದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.

ಯೋಗರಾಜ್ ಭಟ್ ಚಿತ್ರಕ್ಕೆ ಕಥೆ ಬರೆದಿದ್ದು, ಗೀತರಚನೆಕಾರರಾಗಿ, ನಿರ್ದೇಶಕರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ನಿರ್ದೇಶನ ಮಾಡುತ್ತಿದ್ದಾರೆ. ಯೋಗರಾಜ್ ಭಟ್ ಹಾಗೂ ಜಯಂತ್ ಕಾಯ್ಕಿಣಿ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು ಮನೋಮೂರ್ತಿ ಸಂಗೀತ ನೀಡುತ್ತಿದ್ದಾರೆ.
ಮಡೆನೂರ್ ಮನು, ಮೌನ ಗುಡ್ಡೆಮನೆ, ದಿಗಂತ್, ಟಿ ಸೋನಾಲ್ ಮೊಂತೆರೊ,ಶರತ್ ಲೋಹಿತಾಶ್ವ, ತಬಲ ನಾಣಿ, ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು