LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೃಷಿ ಅರ್ಥಶಾಸ್ತ್ರಜ್ಞರ ಸಮ್ಮೇಳನಕ್ಕೆ ಮೋದಿ ಚಾಲನೆ

ದೆಹಲಿ: ಪ್ರಧಾನಿ ಮೋದಿ ಅವರು ಇಂದು ದೆಹಲಿಯಲ್ಲಿ 32ನೇ ಅಂತರರಾಷ್ಟ್ರೀಯ ಕೃಷಿ ಅರ್ಥಶಾಸ್ತ್ರಜ್ಞರ ಸಮ್ಮೇಳನವನ್ನು (ಐಸಿಎಇ) ಉದ್ಘಾಟಿಸಿದರು. ಆಗಸ್ಟ್ 2 ರಿಂದ 7ವರೆಗೆ ಇಂಟನ್ರ್ಯಾಷನಲ್ ಅಸೋಸಿಯೇಷನ್ ಆಫ್ ಅಗ್ರಿಕಲ್ಚರಲ್ ಎಕನಾಮಿಸ್ಟ್ಸ್ ತ್ರೈವಾರ್ಷಿಕ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 65 ವರ್ಷಗಳ ನಂತರ ಭಾರತದಲ್ಲಿ ಇಂತಹ ಸಮಾವೇಶವನ್ನು ಆಯೋಜಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ನೀವೆಲ್ಲರೂ ವಿಶ್ವದ ವಿವಿಧ ದೇಶಗಳಿಂದ ಬಂದಿದ್ದೀರಿ. 120 ಮಿಲಿಯನ್ ರೈತರ ಪರವಾಗಿ ನಾನು ನಿಮ್ಮನ್ನು ಸ್ವಾಗತಿಸುತ್ತೇನೆ. ಭಾರತದ 30 ದಶಲಕ್ಷಕ್ಕೂ ಹೆಚ್ಚು ಮಹಿಳಾ ರೈತರು ಹಾಗೂ ದೇಶದ 30 ದಶಲಕ್ಷ ಮೀನುಗಾರರ ಪರವಾಗಿ 550 ದಶಲಕ್ಷ ಪ್ರಾಣಿಗಳು ವಾಸಿಸುವ ಹಾಗೂ ಈ ಕೃಷಿ ಪ್ರಧಾನ ಮತ್ತು ಪ್ರಾಣಿಗಳನ್ನು ಪ್ರೀತಿಸುವ ಈ ದೇಶಕ್ಕೆ ಸ್ವಾಗತ ಎಂದು ಹೇಳಿದರು.

ಇಂಟನ್ರ್ಯಾಷನಲ್ ಅಸೋಸಿಯೇಷನ್ ಆಫ್ ಅಗ್ರಿಕಲ್ಚರಲ್ ಎಕನಾಮಿಸ್ಟ್ಸ್ ಆಯೋಜಿಸಿರುವ ಈ ಆರು ದಿನಗಳ ಸಮ್ಮೇಳನದಲ್ಲಿ ಸುಸ್ಥಿರ ಕೃಷಿ-ಆಹಾರ ವ್ಯವಸ್ಥೆಗಳ ಬಗ್ಗೆ ಚರ್ಚೆ ನಡೆಯಲಿದೆ. ಒಟ್ಟು 75 ದೇಶಗಳ ಸುಮಾರು 1,000 ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನಮ್ಮ ಹವಮಾನದ ಬಗ್ಗೆಯೂ ಈ ಕಾರ್ಯಕ್ರಮದಲ್ಲಿ ಚರ್ಚೆಯಾಗಬೇಕಿದೆ. ಹಾಗೂ ನೈಸರ್ಗಿಕ ಸಂಪನ್ಮೂಲಗಳ ಅವನತಿ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು ಮತ್ತು ಸಂಘರ್ಷಗಳಂತಹ ಜಾಗತಿಕ ಸವಾಲುಗಳನ್ನು ಎದುರಿಸುವ ಮತ್ತು ಸುಸ್ಥಿರ ಕೃಷಿಯ ಅಗತ್ಯಗಳನ್ನು ನಿಭಾಯಿಸುವ ಬಗ್ಗೆ ಈ ಸಮ್ಮೇಳದಲ್ಲಿ ಚರ್ಚಿಸಬೇಕಾಗಿದೆ.

ಸಮ್ಮೇಳನವು ಜಾಗತಿಕ ಕೃಷಿಕರು ಅನುಭವಿಸುತ್ತಿರುವ ಸವಾಲುಗಳ ಬಗ್ಗೆ ಭಾರತದ ಕೃಷಿಗಳು ಹೇಗೆ ಸಹಾಯವಾಗಿದೆ ಹಾಗೂ ಪೂರಕವಾಗುವ ವಿಧಾನಗಳ ಬಗ್ಗೆ ತಿಳಿಸಲಿದ್ದಾರೆ. ICAE 2024 ಯುವ ಸಂಶೋಧಕರು ಮತ್ತು ಪ್ರಮುಖ ವೃತ್ತಿಪರಿಗೆ ಈ ವೇದಿಕೆ ತುಂಬಾ ಸಹಾಯವಾಗಲಿದೆ. ಸಂಶೋಧನಾ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ. ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ನೀತಿ ರಚನೆ ಪರಿಣಾಮ ಏನು ಎಂಬ ಬಗ್ಗೆ ಇಲ್ಲಿ ತಿಳಿಸಲಾಗುತ್ತದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು