LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಕೆಎಎಸ್ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ನೋಂದಣಿ- ಓಎಂಆರ್ ಶೀಟ್​ ನಂಬರ್ ಅದಲು ಬದಲು

ವಿಜಯಪುರ: ಕರ್ನಾಕದಾದ್ಯಂತ ಕರ್ನಾಟಕ ಲೋಕ ಸೇವಾ ಆಯೋಗದಿಂದ ನಡೆಸುತ್ತಿದ್ದ ಕೆಎಎಸ್​​ ಶ್ರೇಣಿಯ ಗ್ರೂಪ್​ ಎ ಹಾಗೂ ಗ್ರೂಪ್​ ಬಿ ಹುದ್ದೆಗಳಿಗೆ ಇಂದು ನಡೆಸಲಾಗುತ್ತಿದ್ದ ಪರೀಕ್ಷೆಯಲ್ಲಿ ದೊಡ್ಡ ಎಡವಟ್ಟು ಉಂಟಾಗಿದೆ. ಓಎಂಆರ್ ಶೀಟ್​​ನಲ್ಲಿ ನೊಂದಣಿ ಸಂಖ್ಯೆ ಅದಲು ಬದಲು ಆರೋಪ ಕೇಳಿಬಂದಿದ್ದು, ಪರೀಕ್ಷೆ ಬರೆಯದೆ ಪರೀಕ್ಷಾರ್ಥಿಗಳು ಹೊರ ಬಂದಿದ್ದಾರೆ. ಈಗಾಗಲೇ ಪ್ರಶ್ನೆ ಪತ್ರಿಕೆಯಲ್ಲಿ ಎಡವಟ್ಟು ಆಗಿದ್ದರಿಂದ ಕೆಪಿಎಎಸ್​​ ಮತ್ತೊಮ್ಮೆ ಪರೀಕ್ಷೆ ನಡೆಸುತಿತ್ತು. ಆದರೆ ಇದೀಗ ಮತ್ತೆ ಅದೇ ಎಡವಟ್ಟು ಮಾಡಿದೆ. ಇದರಿಂದ ಅಭ್ಯರ್ಥಿಗಳು ಪ್ರತಿಭಟನೆ ಮಾಡಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ 32 ಪರೀಕ್ಷಾ ಕೇಂದ್ರಗಳಲ್ಲಿ 12,741 ಪರೀಕ್ಷಾರ್ಥಿಗಳು ಗೆಜೆಟೆಡ್‌ ಪ್ರೊಬೇಷನರಿ ಗ್ರೂಪ್​​ ಎ ಹಾಗೂ ಬಿ ಹುದ್ದೆಗಳಿಗಾಗಿ ಪರೀಕ್ಷೆ ಬರೆಯುತ್ತಿದ್ದಾರೆ. ಈ ಪೈಕಿ ನಗರದ ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಎರಡು ಪರೀಕ್ಷಾ ಕೇಂದ್ರಗಳು ಮರಾಠಿ ಮಹಾವಿದ್ಯಾಲಯ ಹಾಗೂ ವಿಕಾಸ ಮಹಾವಿದ್ಯಾಲಯದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳ ನೋಂದಣಿ ಸಂಖ್ಯೆ ಹಾಗೂ ಓಎಂಆರ್ ಶೀಟ್​​ನಲ್ಲಿನ ನಂಬರ್ ಅದಲು ಬದಲಾಗಿರುವುದು ಕಂಡು ಬಂದಿದೆ. ಇದನ್ನು ವಿರೋಧಿಸಿ ಸಿಕ್ಯಾಬ್ ಸಂಸ್ಥೆಯ ಪರೀಕ್ಷಾ ಕೇಂದ್ರಗಳಲ್ಲಿನ ಹಲವಾರು ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯದೆ ಹೊರ ಬಂದಿದ್ದಾರೆ.

ಆಗ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹಾಗೂ ಜಿಲ್ಲಾ ಪಂಚಾಯತಿ ಸಿಇಓ ರಿಶಿ ಆನಂದ ಪರೀಕ್ಷಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಪರೀಕ್ಷಾರ್ಥಿಗಳ ನೋಂದಣಿ ನಂಬರ್ ಹಾಗೂ ಓಎಂಆರ್ ಶೀಟ್​​ನಲ್ಲಿನ ನಂಬರ್ ಬದಲಾಗಿದೆ ಎಂದು ಕೆಪಿಎಸ್​ಸಿ ಅಧಿಕಾರಿಗಳ ಜೊತೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹಾಗೂ ಜಿಲ್ಲಾ ಪಂಚಾಯತಿ ಸಿಇಓ ರಿಶಿ ಆನಂದ ಮಾತನಾಡಿದರು.

ಈ ವಿಚಾರವಾಗಿ ಪರೀಕ್ಷಾರ್ಥಿಗಳ ನೋಂದಣಿ ನಂಬರ್​ನ್ನು ಓಎಂಆರ್ ಶೀಟ್​ನಲ್ಲಿ ಪ್ರತ್ಯೇಕವಾಗಿ ನೋಂದಾಯಿಸಲು ಕೆಪಿಎಸ್​ಸಿ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಇದೇ ವಿಚಾರವನ್ನು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹಾಗೂ ಜಿಲ್ಲಾ ಪಂಚಾಯತಿ ಸಿಇಓ ರಿಶಿ ಆನಂದ ಪರೀಕ್ಷಾರ್ಥಿಗಳಿಗೆ ತಿಳಿ ಹೇಳಿದ್ದಾರೆ. ಓಎಂಆರ್ ಶೀಟ್​ನಲ್ಲಿ ಪರೀಕ್ಷಾರ್ಥಿಗಳ ನೋಂದಣಿ ನಂಬರ್​​ ನಮೂದಿಸಲು ಸೂಚನೆ ನೀಡಿ ಪರೀಕ್ಷೆ ಬರೆಯುವಂತೆ ಮನವೊಲಿಕೆ ಮಾಡಿದ್ದಾರೆ.

ಇನ್ನು ಪರೀಕ್ಷೆ ಬರೆಯದೇ ವಿಳಂಬವಾಗಿರುವ ಸಮಯವನ್ನು ಹೆಚ್ಚುವರಿ ನೀಡಲಾಗುತ್ತದೆ ಎಂದು ಸಹ ಭರವಸೆ ನೀಡಿದ್ದಾರೆ. ಅಧಿಕಾರಿಗಳು ಸಮಸ್ಯೆ ಬಗೆ ಹರಿಸಿದ ಬಳಿಕ ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯುವುದಕ್ಕೆ ತೆರಳಿದರು. ಇನ್ನು ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಇನ್ನು ವಿಜಯಪುರ ಬಳಿಕ ಕೋಲಾರದ ಪರೀಕ್ಷಾ ಕೇಂದ್ರದಲ್ಲೂ ಇದೇ ಎಡವಟ್ಟಾಗಿದೆ. ಪ್ರವೇಶ ಪತ್ರದ ಸಂಖ್ಯೆ, ಓಎಂಆರ್​ ಸಂಖ್ಯೆ ಹೊಂದಾಣಿಕೆ ಆಗದ ಆರೋಪ ಕೇಳಿಬಂತು. ಹೀಗಾಗಿ ಪರೀಕ್ಷಾ ಕೇಂದ್ರದಿಂದ ಹೊರಬಂದು ಪರೀಕ್ಷಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಪ್ರವೇಶ ಪತ್ರ, ಓಎಂಆರ್​ ಶೀಟ್​​ನಲ್ಲಿ ಬೇರೆ ರಿಜಿಸ್ಟರ್​ ನಂಬರ್ ಇದೆ. ಬೇರೆ ಬೇರೆ ರಿಜಿಸ್ಟರ್ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಪರೀಕ್ಷೆ ಬರೆಯಿರಿ ಇಲ್ಲವಾದರೆ ಬಿಡಿ ಎಂದು ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಪರೀಕ್ಷಾರ್ಥಿಗಳಿಗೆ ಧಮ್ಕಿ ಹಾಕಿದ ಆರೋಪ ಮಾಡಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು