LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಕೆಎಸ್‍ಆರ್‍ಟಿಸಿ ಬಸ್‍ಗೆ ಕಾರು ಡಿಕ್ಕಿ ಮೂವರು ದುರ್ಮರಣ

ಬೆಂಗಳೂರು: ಕಾರು ಡಿವೈಡರ್‍ಗೆ ಗುದ್ದಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್‍ಗೆ ಡಿಕ್ಕಿ ಹೊಡೆದು ಮಹಿಳೆ ಸೇರಿ ಮೂವರು ಸಾವನ್ನಪ್ಪಿರುವ ದುರ್ಘಟನೆ ರಾಮನಗರ ತಾಲೂಕಿನ ಸಂಗಬಸವನದೊಡ್ಡಿ ಬಳಿಯ ಎಕ್ಸ್‍ಪ್ರೆಸ್ ವೇಯಲ್ಲಿ ನಡೆದಿದೆ.

ಶಿವಾಜಿನಗರದದ ಲಿಯಾಕತ್ (50), ಅಸ್ಮಾ (38), ನೂರ್ (40) ಮೃತ ಪಟ್ಟ ದುರ್ದೈವಿಗಳಾಗಿದ್ದಾರೆ.ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿದೆ.
ಅಪಘಾತದಿಂದ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಕೂಡ ಆಗಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ರಾಮನಗರ ಸಂಚಾರ ಪೊಲೀಸರು ಸ್ಥಳೀಯರ ಸಹಾಯದಿಂದ ಮೃತದೇಹಗಳನ್ನು ಹೊರ ತೆಗೆದು ರಾಮನಗರ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಡೆಲ್ಲಿ ರಿಜಿಸ್ಟ್ರೇಷನ್ ನಂಬರ್ ಹೊಂದಿರುವ ಹ್ಯೂಂಡಯ್ ಐ ಟೆನ್ ಕಾರಿನಲ್ಲಿ ಮೈಸೂರಿಗೆ ಸಂಬಂಧಿಕರ ಕಾರ್ಯಕ್ರಮವೊಂದಕ್ಕೆ ನಿನ್ನೆ ರಾತ್ರಿ 9.30ರ ವೇಳೆ ತೆರಳುತ್ತಿದ್ದಾಗ ಡಿವೈಡರ್‍ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಅಪಘಾತತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಷ್ಟೇ ಮುತುವರ್ಜಿ ವಹಿಸಿದರೂ ಅಪಘಾತಗಳು ನಿಲ್ಲುತ್ತಿಲ್ಲ.

ರಾಜ್ಯದ ಪೊಲೀಸ್ ಇಲಾಖೆಯೇ ಜೀವ ಉಳಿಸುವಂತಹ ನಿಟ್ಟಿನಲ್ಲಿ ಸ್ಪೀಡ್ ಡಿಟೆಕ್ಟರ್ಗಳನ್ನು ಅಳವಿಡಿಸಿ ಗಂಟೆಗೆ 100 ಕಿಲೋಮೀಟರ್‍ಗಿಂತ ಹೆಚ್ಚು ವೇಗವಾಗಿ ಹೋದರೆ ದಂಡ ವಿಧಿಸುವಂತೆ ಮಾಡಿದ್ದಾರೆ.ಆದರೆ ಈ ಅಪಘಾತದ ಸಂದರ್ಭದಲ್ಲಿ ಕಾರಿನ ವೇಗದ ಮಿತಿ ಗಂಟೆಗೆ 70 ಕಿಲೋಮೀಟರ್ ಕೂಡ ದಾಟಿರಲಿಲ್ಲ ಎನ್ನಲಾಗಿದೆ.ಹೀಗಾಗಿ ಅಪಘಾತಕ್ಕೆ ನಿಖರ ಕಾರಣವೇನೆಂಬುದರ ಬಗ್ಗೆ ರಾಮನಗರ ಸಂಚಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು