LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಕೆಎಸ್​​ಡಿಎಲ್​​ ಅಧಿಕಾರಿ ಆತ್ಮಹತ್ಯೆ

ಬೆಂಗಳೂರು: ಡೆತ್​ನೋಟ್ ಕೈಯಲ್ಲಿ ಹಿಡಿದುಕೊಂಡೇ ಕೆಎಸ್​​ಡಿಎಲ್​​  ಅಧಿಕಾರಿ ನೇಣಿಗೆ ಶರಣಾಗಿರುವಂತಹ ಘಟನೆ ಡಿಸೆಂಬರ್​ 28ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನೇಶ್ವರ ಬ್ಲಾಕ್​​ನಲ್ಲಿರುವ ಮನೆಯಲ್ಲಿ ಅಮೃತ್ ಶಿರೂರ್(40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತನಿಖೆ ನಡೆಸಿದ್ದಾರೆ.

ಶಿವಮೊಗ್ಗದ ಶಿರಾಳಕೊಪ್ಪ ನಿವಾಸಿಯಾಗಿರುವ ಅಮೃತ್ ಶಿರೂರ್, ಕೆಎಸ್​ಡಿಎಲ್​ನಲ್ಲಿ ಮೆಟೀರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. 2019ರಲ್ಲಿ ಎರಡನೇ ಮದುವೆಯಾಗಿದ್ದರು. ಕೌಟುಂಬಿಕ ವಿಚಾರದಲ್ಲಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಕೈಯಲ್ಲಿ ಡೆತ್​ನೋಟ್​ ಹಿಡಿದುಕೊಂಡು ನೇಣಿಗೆ ಶರಣಾಗಿರುವ ಅಮೃತ್​​, ತಂದೆ-ತಾಯಿಗೆ ಒಳ್ಳೆಯ ಮಗನಾಗಲಿಲ್ಲ, ಪತ್ನಿಗೆ ಒಳ್ಳೆಯ ಗಂಡನಾಗಲಿಲ್ಲ. ನನ್ನ ಸಾವಿಗೆ ನಾನೇ ಕಾರಣ, ಯಾರೂ ಕಾರಣರಲ್ಲ ಎಂದು ಡೆತ್​ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಡೆತ್​ನೋಟ್ ವಶಕ್ಕೆ ಪಡೆದು ಎಫ್​ಎಸ್​ಎಲ್​​ಗೆ ಪೊಲೀಸರು ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಶವ ಹಸ್ತಾಂತರ ಮಾಡಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST