LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಕೆಎಸ್ ಶಿವರಾಮು ವಿರುದ್ಧ ದಾವಣಗೆರೆಯಲ್ಲಿ ನಿಂದನಾತ್ಮಕ ಹೇಳಿಕೆ ದೂರು ದಾಖಲು

ದಾವಣಗೆರೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದಲ್ಲಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆಎಸ್ ಶಿವರಾಮು ವಿರುದ್ಧ ದಾವಣಗೆರೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ. ದಾವಣಗೆರೆ ಜಿಲ್ಲಾ ಪಂಚಮಸಾಲಿ‌‌ ಸಮಾಜದ ಅಧ್ಯಕ್ಷ ಗೋಪನಾಳ್ ಅಶೋಕ ದಾವಣಗೆರೆ ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಂತರ ಮಾತನಾಡಿದ ಅವರು, ಪಂಚಮಸಾಲಿ ಸಮಾಜದವರು ಹೇಡಿಗಳಲ್ಲ. ಕೆಎಸ್ ಶಿವರಾಮು ತಕ್ಷಣವೇ ಸ್ವಾಮೀಜಿಗಳ ಬಗ್ಗೆ ನೀಡಿದ ಹೇಳಿಕೆಗೆ ಕ್ಷಮೆ ಯಾಚಿಸಬೇಕು ಎಂದು ಗೋಪನಾಳ್ ಅಶೋಕ ಆಗ್ರಹಿಸಿದ್ದಾರೆ.

ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ತೀವ್ರಗೊಳಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕೆಎಸ್​ ಶಿವರಾಮು, ಆ ವಿಚಾರವಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸ್ವಾಮೀಜಿ ಬಿಜೆಪಿ ಏಜೆಂಟ್​ರಂತೆ ವರ್ತಿಸುತ್ತಿದ್ದಾರೆ. ಕಾವಿ ಬಿಚ್ಚಿ ರಾಜಕೀಯಕ್ಕೆ ಬರಲಿ ಎಂದಿದ್ದರು.

ಮೈಸೂರಿನಲ್ಲಿ ಮಾತನಾಡಿದ್ದ ಶಿವರಾಮು, ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದರೆ ಕೈ ಕತ್ತರಿಸುತ್ತೇವೆ. ಸ್ವಾಮೀಜಿಗಳು ರಾಜಕೀಯ ಪುಢಾರಿ ರೀತಿ ನಡೆದುಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ಅವಹೇಳನಕಾರಿಯಾಗಿ ಮಾತನಾಡುತ್ತಾರೆ. ಅವರು ಸನ್ಯಾಸಿಯಾಗಿ ಒಂದು ಜಾತಿ ಪರವಾಗಿ ಕೆಲಸ ಮಾಡುವುದು ಸರಿಯಲ್ಲ. ಸ್ವಾಮೀಜಿಯಾಗಲು ನಾಲಾಯಕ್. ಕಾವಿ ಬಟ್ಟೆ ಬಿಚ್ವಿಟ್ಟು ಬರುವುದು ಉತ್ತಮ ಎಂದು ಕೆಎಸ್ ಶಿವರಾಮು ಹೇಳಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು