LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕೆಐಎಡಿಬಿ ಸಿಎ ಸೈಟು ಹಂಚಿಕೆ ವಿಚಾರ ಖರ್ಗೆ ಗುರಿಯಾಗಿಸಲು ಸೂಚನೆ

ಬೆಂಗಳೂರು: ಕೆಐಎಡಿಬಿ ನಿಗಮ ಸಿಎ ಸೈಟು ಹಂಚಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಗುರಿಯಾಗಿಸಲು ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನ ಹಿನ್ನೆಲೆ. ಮುಂದೆ ಎದುರಾಗಲಿರುವ ಚುನಾವಣೆಗಳಿಗೆ ಭದ್ರ ಬುನಾದಿ ಹಾಕಿಕೊಳ್ಳಲು ಖರ್ಗೆ ಕುಟುಂಬ ಟಾರ್ಗೆಟ್ ಮಾಡಿಕೊಳ್ಳಲೇಬೇಕೆಂದು ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ನಾಯಕರ ಮುಖಾಂತರ ಪ್ರಬಲ ದಲಿತಾಸ್ತ್ರ ಪ್ರಯೋಗ ಮಾಡುವ ಮೂಲಕ ಖರ್ಗೆ ಕುಟುಂಬ ಟಾರ್ಗೆಟ್ ಮಾಡಲು ಸೂಚನೆ ನೀಡಲಾಗಿದೆ.ಬಿಜೆಪಿ ಉನ್ನತ ಮೂಲಗಳಿಂದಲೇ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಾಜ್ಯದ ಎಲ್ಲಾ ಬಿಜೆಪಿ ನಾಯಕರುಗಳು ಕಲ್ಯಾಣ ಕರ್ನಾಟಕ ಭಾಗದತ್ತ ಗಮನಹರಿಸಬೇಕು. ಅಲ್ಲಿ ಈಗಾಗಲೇ ಪಕ್ಷಕ್ಕೆ ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಭಾರೀ ಪ್ರಮಾಣದಲ್ಲಿ ಹಿನ್ನಡೆಯಾಗಿದೆ. 40 ವಿಧಾನಸಭಾ ಕ್ಷೇತ್ರಗಳ ಪೈಕಿ ನಮ್ಮ ಸಾಧನೆ ಕಳಪೆಯಾಗಿದ್ದು, 5 ಕ್ಕೆ 5 ಲೋಕಸಭಾ ಕ್ಷೇತ್ರಗಳಲ್ಲೂ ಸೋಲುಂಡಿದ್ದೇವೆ.

ಈ ಸೋಲಿನಿಂದ ಮೈ ಕೊಡವಿಕೊಂಡು ಎದ್ದು ಬರಬೇಕು ಅಂದರೆ, ನಾವು ಅಲ್ಲಿ ಸಂಘಟನೆಯಲ್ಲಿ ಬಲವರ್ಧನೆ ಮಾಡಿಕೊಳ್ಳಲೇಬೇಕು. ನಮಗೆ ಸಿಗುವ ಪ್ರತಿಯೊಂದು ಸಣ್ಣ ಸಣ್ಣ ವಿಚಾರಗಳನ್ನು ಅಸ್ತ್ರವಾಗಿ ಪರಿವರ್ತನೆ ಮಾಡಿಕೊಳ್ಳಲೇಬೇಕು ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.ಈಗ ಖರ್ಗೆ ಕುಟುಂಬಕ್ಕೆ ಕೆಐಎಡಿಬಿ ನಿಗಮದ ವತಿಯಿಂದ ಹಂಚಿಕೆಯಾಗಿರುವ...

ಸೈಟು ಪ್ರಬಲ ಅಸ್ತ್ರವಾಗಿ ಮಾಡಿಕೊಳ್ಳಬೇಕು. ಇದರಿಂದ ಇಡೀ ಖರ್ಗೆ ಕುಟುಂಬವೇ ಟಾರ್ಗೆಟ್ ಮಾಡಬಹುದು. ಇತ್ತ ರಾಜಭವನದವರೆಗೂ ಪ್ರಕರಣ ತಲುಪಿಸಿ. ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆಗೆ ಮುಜುಗರ ಆಗಬೇಕು. ಈ ರೀತಿ ಮಾಡಲೇಬೇಕು ಎಂದು ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ ಎನ್ನಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು