LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಕೆಮಿಕಲ್ ಬ್ಲಾಸ್ಟ್ ಪ್ರಕರಣ 16ರವರೆಗೆ ಪ್ರತಾಪ್ ಪೊಲೀಸ್ ಕಸ್ಟಡಿಗೆ

ಮಧುಗಿರಿ : ಕೃಷಿಹೊಂಡದಲ್ಲಿ ಸೋಡಿಯಂ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ ಆರೋಪದ ಮೇಲೆ ಡ್ರೋನ್ ಪ್ರತಾಪ್ ನ ದಸ್ತಗಿರಿ ಮಾಡಲಾಗಿದ್ದು, ಇಲ್ಲಿನ ಪ್ರಿನ್ಸಿಪಲ್ ಸಿವಿಲ್ ಸೀನಿಯರ್ ನ್ಯಾಯಾಲಯದ ನ್ಯಾಯಾಧೀಶರುಆತನಿಗೆ ಡಿಸೆಂಬರ್ 16 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ಮಾಹಿತಿ ನೀಡಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಾತನಾಡಿದ ಅವರು ಮಿಡಿಗೇಶಿ ಹೋಬಳಿ ಜನಕಲೋಟಿ ಗ್ರಾಮದ ಜಮೀನಿನ ಕೃಷಿ ಹೊಂಡದಲ್ಲಿ ಸುಮಾರು 15 ದಿನಗಳ ಹಿಂದೆ ಕೆಮಿಕಲ್ ಬ್ಲಾಸ್ಟ್ ಮಾಡಲಾಗಿತ್ತು ಎಂದು ತಿಳಿಸಿದರು.ಮಿಡಿಗೇಶಿ ಪೊಲೀಸರು ಸ್ಥಳ ಮಹಜರು ಮಾಡಿದ್ದು, ಕೃತ್ಯಕ್ಕೆ ಬಳಸಿದ್ದ ಸೋಡಿಯಂ ಮೆಟಲ್ ಬಾಕ್ಸ್ ನ್ನು ವಶಪಡಿಸಿಕೊಂಡು ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಲಯವು ಆತನನ್ನು ನಮ್ಮ ವಶಕ್ಕೆ ನೀಡಿದ್ದಾರೆ ಎಂದು ತಿಳಿಸಿದರು.

ಶ್ರೀರಾಯರ ಬೃಂದಾವನ ಫಾರ್ಮ್ ನಲ್ಲಿ ಸ್ನೇಹಿತರ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಸೋಡಿಯಂ ರಾಸಾಯನಿಕ ಸೇರಿಸಿ ನೀರಿನಲ್ಲಿ ಸ್ಪೋಟಿಸಿದ್ದ ಡೋಣ್ ಪ್ರತಾಪ್ ದೃಷ್ಯವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದನು.ಇದು ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಕಾನೂನು ಕ್ರಮಕ್ಕೆ ಆಗ್ರಹಿಸಿದ್ದು ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಆರೋಪಿಯನ್ನು ನಡುರಾತ್ರಿ ಬೆಂಗಳೂರಲ್ಲಿ ಬಂಧಿಸಿ ಬಿಎನ್‍ಎಸ್ ಕಾಯ್ದೆ 288 ಮತ್ತು ಸ್ಫೋಟಕ ವಸ್ತುಗಳ ನಿಷೇಧ ಕಾಯ್ದೆ ಸಕ್ಷನ್ 3 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಈ ಕೃತ್ಯದಲ್ಲಿ ಪ್ರಕರಣಕ್ಕೆ ಅವಕಾಶ ಮಾಡಿಕೊಟ್ಟ ಜಮೀನು ಮಾಲಿಕ ಸೇರಿದಂತೆ ಇತರರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದ್ದು, ಉಳಿದವರನ್ನೂ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಮಹಜರ್ ಸ್ಥಳದಲ್ಲಿ ಡಿವೈಎಸ್‍ಪಿ ರಾಮಚಂದ್ರಪ್ಪ, ಬಡವನಹಳ್ಳಿ ಪಿಐ ಕಾಂತರೆಡ್ಡಿ, ಮಿಡಿಗೇಶಿ ಪಿಎಸ್‍ಐಮಹಮ್ಮದ್ ಪೈಗಂಬರ್, ಎಫ್.ಎಸ್.ಎಲ್ ತಂಡ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು