LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕೆರೆಗಳ ಉಳಿವಿನ ಹೋರಾಟ: ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ನಗರದ ಮಾಗಡಿ ರಸ್ತೆಯ ಹೇರೋಹಳ್ಳಿ ಕೆರೆ ವೀಕ್ಷಣೆಯ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸುದ್ದಿಗಾರರೊಂದಿಗೆ ಮಾತನಾಡುತ್ತ " ನಗರದ ಕೆರೆಗಳ ಉಳಿವಿಗಾಗಿ ಆಮ್ ಆದ್ಮಿ ಪಕ್ಷ ಎಲ್ಲ ಹೋರಾಟಗಳಿಗೂ ಸರ್ವಸಮದ್ಧವಾಗಿದೆ. ಇತ್ತೀಚೆಗೆ ಹೇರೋಹಳ್ಳಿ ಕೆರೆ ಹೋರಾಟದ ಸಂದರ್ಭದಲ್ಲಿ ಪಕ್ಷದ ನಾಯಕರುಗಳ ಮೇಲೆ ಸ್ಥಳೀಯ ಶಾಸಕ ಎಸ್ ಟಿ ಸೋಮಶೇಖರ್ ಒತ್ತಡದ ಮೇಲೆ ಪೊಲೀಸರು ಕ್ರಿಮಿನಲ್ ಮೊಕದ್ದಮೆಯನ್ನು ಹಾಕಿದ್ದಾರೆ. ಈ ರೀತಿಯ ಎಷ್ಟೇ ಕೇಸುಗಳನ್ನು ಹಾಕಿದರೂ ನಾವು ಯಾವುದೇ ಕಾರಣಕ್ಕೂ ಜಗ್ಗುವುದಿಲ್ಲ ಬಗ್ಗುವುದಿಲ್ಲ .

ಕೆರೆಗಳನ್ನು ಒತ್ತುವರಿ ಮಾಡಿರುವ ರಿಯಲ್ ಎಸ್ಟೇಟ್ ಮಾಫಿಯಾ ಗಳ ವಿರುದ್ಧ ಪಕ್ಷವು ಸಂಪೂರ್ಣ ತೆರವುಗೊಳಿಸುವ ತನಕ ಹೋರಾಟ ಮಾಡುತ್ತದೆ. ಎಲ್ಲಾ ಕೆರೆಗಳಲ್ಲಿ ಎಸ್ ಟಿ ಪಿ ಘಟಕಗಳನ್ನು ತೆರೆಯಬೇಕು , ನಾಗರಿಕ ಸೌಲಭ್ಯಕ್ಕಾಗಿ ಶೌಚಾಲಯ ಉತ್ತಮ ಟ್ರ್ಯಾಕ್ ಗಳು ಕುಡಿಯುವ ನೀರು ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು." ಎಂದು ಸರ್ಕಾರವನ್ನು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ " ಇಂದು ಯಶವಂತಪುರ ಕ್ಷೇತ್ರಕ್ಕೆ ಬರಲು ಶಾಸಕರ ವೀಸಾ ಅಗತ್ಯವಾಗಿದೆ. ಸ್ಥಳೀಯ ಸಮಸ್ಯೆಗಳ ಬಗ್ಗೆ ಯಾರೇ ಪ್ರಶ್ನೆ ಮಾಡಿದರೂ ಅವರುಗಳ ಮೇಲೆ ಪೊಲೀಸ್ ಕೇಸುಗಳನ್ನು ಹಾಕಿಸುವ ಮೂಲಕ ಶಾಸಕರು ನಡೆಸುತ್ತಿರುವ ದಬ್ಬಾಳಿಕೆ - ದೌರ್ಜನ್ಯಗಳನ್ನು ಪಕ್ಷವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಜನ ಸಾಮಾನ್ಯರ ಹಿತಕ್ಕಾಗಿ ಪಕ್ಷದ ಕಾರ್ಯಕರ್ತರು ಯಾವುದೇ ತ್ಯಾಗಕ್ಕೂ ಸಿದ್ಧರಾಗಿದ್ದಾರೆ , ಯಶವಂತಪುರ ರಿಪಬ್ಲಿಕ್ ಮಾಡಲು ನಾವು ಬಿಡುವುದಿಲ್ಲ "ಎಂದು ಎಚ್ಚರಿಸಿದರು.

ವೀಕ್ಷಣೆ ಸಂದರ್ಭದಲ್ಲಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್, ಜಗದೀಶ್ ಚಂದ್ರ, ಶಶಿಧರ್ ಆರಾಧ್ಯ , ಡಾ. ದಿನೇಶ್ ಕುಮಾರ್ ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್ ಕುಮಾರ್ ಸೇರಿದಂತೆ ಅನೇಕ ಸ್ಥಳೀಯ ಮುಖಂಡರುಗಳಾಗು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು