LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಕೆ.ಬೆಟ್ಟಹಳ್ಳಿ ಗ್ರಾ.ಪಂಗೆ ನೂತನ ಉಪಾಧ್ಯಕ್ಷರಾಗಿ ಮಹದೇವಮ್ಮ ಅವಿರೋಧ ಆಯ್ಕೆ

ಪಾಂಡವಪುರ : ತಾಲೂಕಿನ ಕೆ.ಬೆಟ್ಟಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಉಪಾಧ್ಯಕ್ಷರಾಗಿ ರೈತ ಸಂಘದ ಬೆಂಬಲಿತ ಅಭ್ಯರ್ಥಿ ಮಹದೇವಮ್ಮ ಅವರು ಅವಿರೋಧವಾಗಿ ಆಯ್ಕೆಯಾದರು.
ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 21 ಸದಸ್ಯರಿದ್ದು ರೈತಸಂಘ ಬೆಂಬಲಿತ 18 ಹಾಗೂ ಜೆಡಿಎಸ್ ಬೆಂಬಲಿತ 3 ಸದಸ್ಯರಿದ್ದಾರೆ. ರೈತಸಂಘದ ಅಧಿಕಾರ ಒಡಂಬಡಿಕೆ ಸೂತ್ರಧನ್ವಯ ಈ ಹಿಂದಿನ ಉಪಾಧ್ಯಕ್ಷೆ ಮಂಜುಳಾ ಜಗದೀಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು.

ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ರೈತ ಸಂಘದ ಬೆಂಬಲಿತ ಅಭ್ಯರ್ಥಿಯಾಗಿ ಮಹದೇವಮ್ಮ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಗ್ರಾಮ ಪಂಚಾಯಿತಿಗೆ ನೂತನ ಉಪಾಧ್ಯಕ್ಷರಾಗಿ ರೈತ ಸಂಘದ ಬೆಂಬಲಿತ ಅಭ್ಯರ್ಥಿ ಮಹದೇವಮ್ಮ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಪಂಚಾಯತ್ ರಾಜ್ ಇಂಜನಿಯರಿಂಗ್ ಇಲಾಖೆಯ ಎಇಇ ರಮ್ಯಾ ಪ್ರಕಟಿಸಿದರು.

ಬಳಿಕ ರೈತ ಸಂಘದ ಕಾರ್ಯಕರ್ತರು ಹಾಗೂ ಬೆಂಬಲಿಗರು ಸಾರ್ವಜನಿಕರಿಗೆ ಸಿಹಿ ವಿತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.ನಂತರ ಮಾತನಾಡಿದ ನೂತನ ಉಪಾಧ್ಯಕ್ಷೆ ಮಹದೇವಮ್ಮ, ಕೆ.ಬೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರ ಬೆಂಬಲದಿಂದ ಉಪಾಧ್ಯಕ್ಷರ ಅಧಿಕಾರ ಹಂಚಿಕೆ ಪ್ರಕಾರ ಶಾಸಕ ದರ್ಶನ್ ಪುಟ್ಟಣ್ಣಯ್ಯರವರ ಆದೇಶದ ಮೇರೆಗೆ ಉಪಾಧ್ಯಕ್ಷರಾಗಿ ನಾನು ಆಯ್ಕೆಯಾಗಿದ್ದೇನೆ. ನಮ್ಮ ನಾಯಕರಾದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಮಾರ್ಗದರ್ಶನದಲ್ಲಿ ಗ್ರಾಪಂನ ಎಲ್ಲಾ ಸದಸ್ಯರ ಸಹಕಾರದೊಂದಿಗೆ ನನಗೆ ದೊರಕಿರುವ ಅಧಿಕಾರದ ಈ ಅವಧಿಯಲ್ಲಿ ಪಂಚಾಯಿತಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪಕ್ಷಪಾತ ಮಾಡದೆ ಕಾರ್ಯನಿರ್ವಹಿಸುತ್ತೇನೆ. ಅಗತ್ಯ ಮೂಲ ಸೌಕರ್ಯಗಳನ್ನು ಒದಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ತಿಳಿಸಿದರು.

ಈ ವೇಳೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಗ್ರಾಪಂ ಸದಸ್ಯರಾದ ಲಕ್ಷ್ಮೀ, ಲತಾ, ಸವಿತಾ, ಸೌಮ್ಯ, ಸುಚಿತ್ರಾ, ಮಾಕೇಗೌಡ, ಮಂಜುಳಾ, ಆನಂದ, ಅಶೋಕ, ಕೆಂಪರಾಜು, ರೈತಸಂಘದ ಮುಖಂಡರಾದ ಬಿ.ಟಿ.ಶಿವಣ್ಣ, ಪ್ರಭುಸ್ವಾಮಿ, ರಮೇಶ್, ಕಾಳೇಗೌಡ, ಚಲುವರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು